ಸೋಮವಾರ, ಏಪ್ರಿಲ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 22ನೇ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರು ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದರು. ಹೀಗಾಗಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಐಪಿಎಲ್ ಟಿ20 ಲೀಗ್‌ನ ಎರಡು ದೊಡ್ಡ ಪ್ರತಿಸ್ಪರ್ಧಿಗಳಾದ ಸಿಎಸ್‌ಕೆ ಮತ್ತು ಕೆಕೆಆರ್ ತಂಡಗಳು ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಹೈ-ವೋಲ್ಟೇಜ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆತಿಥ್ಯ ವಹಿಸುತ್ತಿದೆ.
ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್‌ಕೆ ತಂಡ ಸತತವಾಗಿ ಎರಡು ಪಂದ್ಯಗಳನ್ನು ಸೋತಿದೆ ಮತ್ತು ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ತಂಡ ಆಡಿದ 3 ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿ ಅಜೇಯವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ 4 ಪಂದ್ಯಗಳಲ್ಲಿ 2 ಗೆಲುವು ಹಾಗೂ 2 ಸೋಲು ಕಂಡಿದೆ. ಒಟ್ಟು 4 ಅಂಕಗಳು ಮತ್ತು +0.517 ನೆಟ್ ರನ್ ರೇಟ್‌ನೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಇಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಆಡಿದ 3 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳು ಮತ್ತು +2.518 ನೆಟ್ ರನ್ ರೇಟ್‌ನೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
ಐಪಿಎಲ್ 2024ರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಕೋಲ್ಕತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಆಂಗ್‌ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್(ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.