For Quick Alerts
ALLOW NOTIFICATIONS  
For Daily Alerts
 

IPL 2025: ಧೋನಿ ನಾಯಕತ್ವದಲ್ಲೂ ಬದಲಾಗದ ಸಿಎಸ್‌ಕೆ ಹಣೆಬರಹ; ಕೆಕೆಆರ್‌ಗೆ ಭರ್ಜರಿ ಗೆಲುವು

ಐಪಿಎಲ್ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. ನಾಯಕತ್ವ ಬದಲಾದರೂ ತಂಡದ ಹಣೆಬರೆಹ ಬದಲಾವಣೆ ಆಗಿಲ್ಲ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025 ರ 25ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಹೀನಾಯವಾಗಿ ಸೋಲು ಕಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ 8 ವಿಕೆಟ್‌ಗಳಿಂದ ಸೋಲಿಸಿದೆ. ಇದರೊಂದಿಗೆ ಐಪಿಎಲ್ 2025 ರಲ್ಲಿ ಸಿಎಸ್‌ಕೆ ತಂಡ ತವರಿನಲ್ಲಿ ಒಟ್ಟು ಮೂರು ಪಂದ್ಯಗಳನ್ನು ಸೋತು ಭಾರಿ ಮುಖಭಂಗ ಅನುಭವಿಸಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರದರ್ಶನ ನಿರಾಸವಾಗಿತು. ಕೆಕೆಆರ್ ತಂಡದ ಬೌಲರ್ಸ್ ದಾಳಿಗೆ ತತ್ತರಿಸಿದ ಸಿಎಸ್‌ಕೆ ಬ್ಯಾಟರ್ಸ್ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಸಿಎಸ್‌ಕೆ ನಿಗದಿತ 20 ಓವರ್‍‌ಗಳಲ್ಲಿ 9 ಕಳೆದುಕೊಂಡು 89 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಕೇವಲ 10.1 ಓವರ್‍‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿ ಗೆಲುವು ಸಾಧಿಸಿತು.

CSK vs KKR IPL 2025 Toss Match Report Score batting and bowling performance kannada

ಸಿಎಸ್‌ಕೆ ಕಳಪೆ ಪ್ರದರ್ಶನ

ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಲು ಬಂದ ರಚಿನ್ ರವೀಂದ್ರ ಮತ್ತು ಡೆವೊನ್ ಕಾನ್ವೇ ಜೋಡಿ ಚೆನ್ನೈ ತಂಡಕ್ಕೆ ಉತ್ತಮ ಆರಂಭ ನೀಡಲಿಲ್ಲ. ರಚಿನ್ ರವೀಂದ್ರ 9 ಎಸೆತಗಳಲ್ಲಿ 4 ರನ್ ಗಳಿಸಿ ಔಟಾದರೆ, ಡೆವೊನ್ ಕಾನ್ವೇ 11 ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು. ಬಳಿಕ ಬಂದ ರಾಹುಲ್ ತ್ರಿಪಾಠಿ ಕೂಡ 22 ಎಸೆತಗಳಲ್ಲಿ 16 ರನ್ ಕಲೆ ಹಾಕಿ ವಿಕೆಟ್ ಕಳೆದುಕೊಂಡರು. ಇಲ್ಲಿಂದ ಚೆನ್ನೈ ತಂಡದ ಬ್ಯಾಟರ್ಸ್‌ನ ಪೆವಿಲಿಯನ್ ಪರೇಡ್ ಶುರುವಾಯಿತು.

ಚೆನ್ನೈ ಸೂಪರ್ ಕಿಂಗ್ಸ್ ಪರ ವಿಜಯ್ ಶಂಕರ್ 29 ರನ್ ಮತ್ತು ಶಿವಂ ದುಬೆ ಅಜೇಯ 31 ರನ್ ಗಳಿಸಿದ್ದನ್ನು ಹೊರತುಪಡಿಸಿ, ಉಳಿದ ಯಾವ ಬ್ಯಾಟರ್ಸ್ ಜವಾಬ್ದಾರಿಯುತ ಇನ್ನಿಂಗ್ಸ್ ಆಡಲಿಲ್ಲ. ರವಿಚಂದ್ರನ್ ಅಶ್ವಿನ್ 1 ರನ್ ಗಳಿಸಿದರೆ, ದೀಪಕ್ ಹೂಡಾ ಮತ್ತು ರವೀಂದ್ರ ಜಡೇಜಾ ಬಂದ ದಾರಿಗೆ ಸುಂಕವಿಲ್ಲದಂತೆ ಶೂನ್ಯಕ್ಕೆ ಔಟಾದರು. ಅಲ್ಲದೆ, ನಾಯಕ ಎಂಎಸ್ ಧೋನಿ 1 ರನ್, ನೂರ್ ಆಹ್ಮದ್ 1 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಈ ಮೂಲಕ ಚೆನ್ನೈ ಅಂತಿಮವಾಗಿ 103 ರನ್ ಕಲೆ ಹಾಕಿತು.

ಕೆಕೆಆರ್ ತಂಡದಿಂದ ಅದ್ಭುತ ಸಂಘಟಿತ ಬೌಲಿಂಗ್ ಪ್ರದರ್ಶನ ಕಂಡು ಬಂದಿದೆ. ಸುನಿಲ್ ನರೈನ್ ಮೂರು ವಿಕೆಟ್ ಕಬಳಿಸಿ ಮಿಂಚಿದರೆ, ವರುಣ್ ಚಕ್ರವರ್ತಿ ಮತ್ತು ಹರ್ಷಿತ್ ರಾಣಾ ತಲಾ ಎರಡು ವಿಕೆಟ್ ಉರುಳಿಸಿದರು. ವೈಭವ್ ಆರೋರಾ ಹಾಗು ಮೊಹಿನ್ ಆಲಿ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ. ಸಿಎಸ್‌ಕೆ ಪರ ಶಿವಂ ದುಬೆ ಅಜೇಯ 31 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ನರೈನ್ ಅಬ್ಬರ

ಚೆಪಾಕ್‌ನಲ್ಲಿ ಸಿಎಸ್‌ಕೆ ನೀಡಿದ 104 ರನ್‌ಗಳ ಗುರಿ ಬೆನ್ನಟ್ಟಿ ಕೆಕೆಆರ್ ತಂಡ ಬಿರುಸಿನ ಆರಂಭ ಪಡೆಯಿತು. ಕೆಕೆಆರ್ ಪರ ಮಿಂಚಿದ ಸುನಿಲ್ ನರೈನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಅಡಿಪಾಯ ಹಾಕಿದರು. ಸುನಿಲ್ ನರೈನ್ 18 ಎಸೆತಗಳಲ್ಲಿ 2 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಿಂದ 44 ರನ್ ಗಳಿಸಿದರು. ಮತ್ತೊಂದೆಡೆ ನಾಯಕ ಅಜಿಂಕ್ಯಾ ರಹಾನೆ ಕೂಡ 17 ಎಸೆತಗಳಲ್ಲಿ 20 ರನ್ ಬಾರಿಸಿ ಅಜೇಯರಾಗುಳಿದರು. ಕ್ವಿಂಟನ್ ಡಿ ಕಾಕ್ 16 ಎಸೆತಗಳಲ್ಲಿ 23 ರನ್ ಗಳಿಸಿ ಔಟಾದರೆ, ರಿಂಕು ಸಿಂಗ್ 12 ಎಸೆತಗಳಲ್ಲಿ ಅಜೇಯ 15 ರನ್ ಗಳಿಸಿದರು.

ರುತುರಾಜ್ ಗಾಯಕ್ವಾಡ್ ಗಾಯಗೊಂಡು ಟೂರ್ನಿಯಿಂದ ಹೊರಗುಳಿದ ನಂತರ ಮೊದಲ ಬಾರಿಗೆ ಸಿಎಸ್‌ಕೆ ತಂಡವನ್ನು ಎಂಎಸ್ ಧೋನಿ ಮುನ್ನಡೆಸಿದರು. ಆದರೆ, ಅವರಿಂದ ಸಿಎಸ್‌ಕೆ ತಂಡದ ಸೋಲಿನ ಸರಪಳಿಯಿಂದ ಬಿಡಸಲು ಸಾಧ್ಯವಾಗಲಿಲ್ಲ. ಇದು ಚೆನ್ನೈ ತಂಡಕ್ಕೆ ಎದುರಾದ ಸತತ 5ನೇ ಸೋಲು. ಅಲ್ಲದೆ, ಚೆನ್ನೈ ತನ್ನ ತವರು ಮೈದಾನವಾದ ಚೆಪಾಕ್‌ನಲ್ಲಿ ಸತತ ಮೂರನೇ ಪಂದ್ಯವನ್ನು ಸೋತಿದೆ. ಮತ್ತೊಂದೆಡೆ, ಕೆಕೆಆರ್ ತನ್ನ ಮೂರನೇ ಗೆಲುವು ದಾಖಲಿಸಿದೆ.

ಉಭಯ ತಂಡಗಳ ಪ್ಲೇಯಿಂಗ್-11

ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಮೊಯಿನ್ ಅಲಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ

ಚೆನ್ನೈ ಸೂಪರ್ ಕಿಂಗ್ಸ್: ರಚಿನ್ ರವೀಂದ್ರ, ಡೆವೊನ್ ಕಾನ್ವೇ, ರಾಹುಲ್ ತ್ರಿಪಾಠಿ, ವಿಜಯ್ ಶಂಕರ್, ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್‌ಕೀಪರ್- ನಾಯಕ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.

Story first published: Friday, April 11, 2025, 19:26 [IST]
Other articles published on Apr 11, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+