CSK vs KKR: ತವರಿನಲ್ಲಿ ಅಬ್ಬರಿಸಿದ ಸೂಪರ್ ಕಿಂಗ್ಸ್: ಮತ್ತೊಂದು ಸೋಲು ಅಪ್ಪಿಕೊಂಡ ಕೆಕೆಆರ್
ಚೆನ್ನೈ: ಭರವಸೆಯ ಸ್ಪಿನ್ ಬೌಲರ್ ನೂರ್ ಅಹ್ಮದ್ (21ಕ್ಕೆ 3) ಇವರುಗಳ ಭರ್ಜರಿ ಬೌಲಿಂಗ್ ದಾಳಿಯ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) 19ನೇ ಆವೃತ್ತಿ ಐಪಿಎಲ್‌ನ 22ನೇ ಪಂದ್ಯದಲ್ಲಿ 32 ರನ್ ಗಳಿಂದ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಮಣಿಸಿ, ಲೀಗ್‌ನಲ್ಲಿ ಎರಡನೇ ಗೆಲುವಿನ ನಗೆ ಬೀರಿದೆ. ಈ ಮೂಲಕ ಚೆನ್ನೈ 193 ರನ್‌ಗಳ ಮೊತ್ತವನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಸಫಲವಾಗಿದೆ.
ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ಕೆಕೆಅರ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ ಫಿನ್ ಅಲೆನ್ ಅನ್ಶುಲ್ ಕಾಂಬೋಜ್ ಅವರ ಎಸೆತದಲ್ಲಿ ಬಿಗ್ ಹಿಟ್ ಬಾರಿಸಲು ಹೋಗಿ ಶಿವಂ ದುಬೆ ಅವರಿಗೆ ಕ್ಯಾಚ್ ನೀಡಿದರು. ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ಸುನಿಲ್ ನರೈನ್ ಸಿಕ್ಕ ಅವಕಾಶವನ್ನು ಪಡೆಯುವಲ್ಲಿ ವಿಫಲರಾದರು. ಇವರು 17 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 24 ರನ್ ಬಾರಿಸಿ ನೂರ್ ಅಹ್ಮದ್ ತೋಡಿದ ಖೆಡ್ಡಾಗೆ ಬಲಿಯಾದರು.

ಮೂರನೇ ವಿಕೆಟ್‌ಗೆ ಅಜಿಂಕ್ಯ ರಹಾನೆ ಹಾಗೂ ಅಂಗ್‌ಕ್ರಿಷ್ ರಘುವಂಶಿ ಜೋಡಿ ತಂಡಕ್ಕೆ ಕೊಂಚ ಆಧಾರವಾಯಿತು. ಈ ಜೋಡಿ ತಂಡಕ್ಕೆ ಅರ್ಧಶತಕದ ಜೊತೆಯಾಟವನ್ನು ನೀಡಿದರು. ಈ ವೇಳೆ ಅಂಗ್‌ಕ್ರಿಷ್ ರಘುವಂಶಿ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 27 ರನ್ ಬಾರಿಸಿದರು. ನಾಯಕ ಅಜಿಂಕ್ಯ ರಹಾನೆ 2 ಸಿಕ್ಸರ್ ನೆರವಿನಿಂದ 28 ರನ್ ಸಿಡಿಸಿ ಔಟ್ ಆದರು.
ನೂರ್ ಅಹ್ಮದ್ ಅಬ್ಬರ
ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್ (6), ದುಬಾರಿ ಆಟಗಾರ ಕ್ಯಾಮರೂನ್ ಗ್ರೀನ್ (0) ರನ್ ಕಲೆ ಹಾಕುವಲ್ಲಿ ವಿಫಲರಾದರು. ಭರವಸೆಯ ಬ್ಯಾಟರ್ ರೋವನ್ ಪೊವೆಲ್, ರಮಣದೀಪ್ ಸಿಂಗ್ ಸೋಲಿನ ಅಂತರವನ್ನು ಕಡಿಮೆ ಮಾಡುವಲ್ಲಿ ಶ್ರಮಿಸಿದರು. ಅಂತಿಮವಾಗಿ ಕೆಕೆಆರ್ 20 ಓವರ್‌ಗಳಲ್ಲಿ 7 ವಿಕಟ್‌ಗೆ 160 ರನ್ ಸೇರಿಸಿ ಸೋಲು ಕಂಡಿತು.

ಚೆನ್ನೈ ತಂಡದ ಪರ ನೂರ್ ಅಹ್ಮದ್ 4 ಓವರ್ ಬೌಲಿಂಗ್ ನಡೆಸಿ 21 ರನ್ ನೀಡಿ 3 ವಿಕೆಟ್ ಪಡೆದರು. ಅನ್ಶುಲ್ ಕಾಂಬೋಜ್ 2 ವಿಕೆಟ್ ಉರುಳಿಸಿದರು.
ಟಾಸ್ ಸೊತರೂ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭ ಕಳಪೆಯಾಗಿತ್ತು. ನಾಯಕ ರುತುರಾಜ್ ಗಾಯಕ್ವಾಡ್ (7) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಯುವ ಆಟಗಾರ ಆಯುಷ್ ಮಾತ್ರೆ (38) ಒಳ್ಳೆಯ ಆರಂಭವನ್ನು ಪಡೆದರೂ ಸಹ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ಎಡವಿದರು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 48 ರನ್ ಬಾರಿಸಿ ಔಟ್ ಆದರು. ಮಧ್ಯಮ ಕ್ರಮಾಂಕದಲ್ಲಿ ಡೆವಾಲ್ಡ್ ಬ್ರೆವಿಸ್ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 41 ರನ್ ಬಾರಿಸಿದರು. ಸರ್ಫರಾಜ್ ಖಾನ್ 23, ಶಿವಂ ದುಬೆ ಅಜೇಯ 13 ರನ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ಸಿಎಸ್‌ಕೆ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 192 ರನ್ ಸೇರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications