CSK vs KKR: ಕೋಲ್ಕತ್ತಗೆ 193 ರನ್ ಗುರಿ ನೀಡಿದ ಚೆನ್ನೈ
ಚೆನ್ನೈ: ಭರವಸೆಯ ಆಟಗಾರ ಸಂಜು ಸ್ಯಾಮ್ಸನ್ (48) ಹಾಗೂ ಮಧ್ಯಮ ಕ್ರಮಾಂಕದ ಡೆವಾಲ್ಡ್ ಬ್ರೆವಿಸ್ (41) ಇವರ ಜವಾಬ್ದಾರಿಯುತ ಆಟದ ನೆರವಿನಿಂದ 19ನೇ ಆವೃತ್ತಿ ಐಪಿಎಲ್‌ನ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ ನಾಯಕ ರುತುರಾಜ್ ಗಾಯಕ್ವಾಡ್ (7) ರನ್ ಕಲೆ ಹಾಕುವಲ್ಲಿ ವಿಫಲರಾದರು. ಮೊದಲ ವಿಕೆಟ್‌ಗೆ ಜೋಡಿ 25 ರನ್ ಸೇರಿಸಿತು. ಎರಡನೇ ವಿಕೆಟ್‌ಗೆ ಸಂಜು ಸ್ಯಾಮ್ಸನ್ ಹಾಗೂ ಆಯುಷ್ ಮಾತ್ರೆ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಎರಡನೇ ವಿಕೆಟ್‌ಗೆ 22 ಎಸೆತಗಳಲ್ಲಿ 47 ರನ್ ಸೇರಿಸಿತು. ಈ ಹಂತದಲ್ಲಿ ಆಯುಷ್ ಮಾತ್ರೆ 6 ಬೌಂಡರಿ, 2 ಸಿಕ್ಸರ್ ನೆರವಿನಿಂದ 38 ರನ್ ಸಿಡಿಸಿದರು.

ಮೂರನೇ ವಿಕೆಟ್‌ಗೆ ಡೆವಾಲ್ಡ್ ಬ್ರೆವಿಸ್ ಹಾಗೂ ಸಂಜು ಸ್ಯಾಮ್ಸನ್ ಜೋಡಿ 32 ಎಸೆತಗಳಲ್ಲಿ 39 ರನ್ ಸಿಡಿಸಿದರು. ಆರಂಭಿಕರಾದ ಸಂಜು ಸ್ಯಾಮ್ಸನ್ 150ರ ಸ್ಟ್ರೈಕ್ ರೇಟ್‌ನಲ್ಲಿ 48 ರನ್ ಬಾರಿಸಿದರು. ಇವರ ಅಮೋಘ ಇನಿಂಗ್ಸ್‌ನಲ್ಲಿ 4 ಬೌಂಡರಿ, 3 ಸಿಕ್ಸರ್ ಸಿಡಿಸಿದರು.
ಬ್ರೆವಿಸ್ ಮಿಂಚು
ಮಧ್ಯಮ ಕ್ರಮಾಂಕದಲ್ಲಿ ಡೆವಾಲ್ಡ್ ಬ್ರೆವಿಸ್ ಮನಮೋಹಕ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಇವರು 29 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ನೆರವಿನಿಂದ 41 ರನ್ ಬಾರಿಸಿ ಔಟ್ ಆದರು. ಭರವಸೆಯ ಆಟಗಾರ ಸರ್ಫರಾಜ್ ಖಾನ್ 1 ಬೌಂಡರಿ, 2 ಸಿಕ್ಸರ್ ನೆರವಿನಿಂದ 23 ರನ್ ಸಿಡಿಸಿದರು.
ಸಿಎಸ್‌ಕೆ ತಂಡದ ಆಲ್‌ರೌಂಡರ್ ಶಿವಂ ದುಬೆ ಅಜೇಯ 13 ರನ್ ಸಿಡಿಸಿದರು. ಅಂತಿಮವಾಗಿ ಸಿಎಸ್‌ಕೆ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 192 ರನ್ ಸೇರಿಸಿತು. ಕೆಕೆಆರ್ ತಂಡದ ಭರವಸೆಯ ವೇಗದ ಬೌಲರ್ ಕಾರ್ತಿಕ್ ತ್ಯಾಗಿ ಬಿಗುವಿನ ದಾಳಿ ನಡೆಸಿ 2, ಸುನಿಲ್ ನರೈನ್, ಅನುಕೂಲ್ ರಾಯ್, ವೈಭವ್ ಆರೋರಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications