CSK vs LSG: ಉತ್ತಪ್ಪ, ದುಬೆ ಅಬ್ಬರ ಲಕ್ನೋಗೆ 211 ರನ್ ಟಾರ್ಗೆಟ್ ನೀಡಿದ ಸಿಎಸ್‌ಕೆ

ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ರಾಬಿನ್ ಉತ್ತಪ್ಪ ಹಾಗೂ ಶಿವಂ ದುಬೆ ಅಬ್ಬರದ ಬ್ಯಾಟಿಂಗ್ ನೆರವಿನಿಂದ 210 ರನ್ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಸಿಎಸ್‌ಕೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲಗೊಂಡರೂ ಸಹ ರಾಬಿನ್ ಉತ್ತಪ್ಪ ಭರ್ಜರಿ ಬ್ಯಾಟಿಂಗ್ ನೆರವಿನಿಂದ ದೊಡ್ಡ ಮೊತ್ತಕ್ಕೆ ಅಡಿಪಾಯ ಹಾಕಿತು. ರುತುರಾಜ್ ಗಾಯಕ್ವಾಡ್ ಕೇವಲ 1 ರನ್‌ಗೆ ರನೌಟ್ ಆಗುವ ಮೂಲಕ ಬೇಗನೆ ಪೆವಿಲಿಯನ್ ಸೇರಿಕೊಂಡ್ರು.
ಎರಡನೇ ವಿಕೆಟ್‌ಗೆ ಜೊತೆಯಾದ ರಾಬಿನ್ ಉತ್ತಪ್ಪ ಮತ್ತು ಆಲ್‌ರೌಂಡರ್ ಮೊಯಿನ್ ಅಲಿ ಸ್ಫೋಟಕ ಆಟವಾಡಿದ್ರು. ಅರ್ಧಶತಕದ ಜೊತೆಯಾಟವಾಡಿದ ಈ ಜೋಡಿ ಪವರ್‌ಪ್ಲೇ ಓವರ್‌ಗಳಲ್ಲಿ ಅಬ್ಬರಿಸಿತು. ರಾಬಿನ್ ಉತ್ತಪ್ಪ ಕೇವಲ 25 ಎಸೆತಗಳಲ್ಲಿ ಅರ್ಧಶತಕ ದಾಖಲಿಸುವ ಮೂಲಕ ಮಿಂಚಿನ ಆಟವಾಡಿದ್ರು. ರಾಬಿನ್ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 1 ಅಮೋಘ ಸಿಕ್ಸರ್ ಒಳಗೊಂಡಿತ್ತು.
ಹೀಗೆ ಉತ್ತಮವಾಗೇ ಆಡ್ತಿದ್ದ ಉತ್ತಪ್ಪ ಅರ್ಧಶತಕದ ಬಳಿಕ ರವಿ ಬಿಷ್ಣೋಯಿಗೆ ವಿಕೆಟ್ ಒಪ್ಪಿಸಿದ್ರು. ಆಲ್‌ರೌಂಡರ್ ಮೊಯಿನ್ ಅಲಿ 22 ಎಸೆತಗಳಲ್ಲಿ 35 ರನ್ ಸಿಡಿಸುವ ಮೂಲಕ ಅವೇಶ್ ಖಾನ್ ಬೌಲಿಂಗ್‌ನಲ್ಲಿ ಬೌಲ್ಡ್ ಆದ್ರು. ಮೊಯಿನ್ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡಿತ್ತು.
ಮಧ್ಯಮ ಕ್ರಮಾಂಕದಲ್ಲಿ ಅಂಬಟಿ ರಾಯುಡು ಹಾಗೂ ಶಿವಂ ದುಬೆ ಸಿಎಸ್‌ಕೆ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ್ರು. ರಾಯುಡು 20 ಎಸೆತಗಳಲ್ಲಿ 27 ರನ್ ಸಿಡಿಸಿ ಔಟಾದ್ರೆ, ಶಿವಂ ದುಬೆ 30 ಎಸೆತಗಳಲ್ಲಿ 49ರನ್ ಕಲೆಹಾಕಿ ಕೇವಲ 1 ರನ್‌ಗಳಿಂದ ಅರ್ಧಶತಕ ಮಿಸ್ ಮಾಡಿಕೊಂಡ್ರು. ಇವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡಿತ್ತು.
ಕೊನೆಯಲ್ಲಿ ನಾಯಕ ರವೀಂದ್ರ ಜಡೇಜಾ 17, ಎಂಎಸ್ ಧೋನಿ ಅಜೇಯ 16ರನ್‌ಗಳ ಕೊಡುಗೆಯಿಂದ ತಂಡದ ಮೊತ್ತ 200ರ ಗಡಿದಾಟಿತು. ಅಂತಿಮವಾಗಿ ಸಿಎಸ್‌ಕೆ 7 ವಿಕೆಟ್ ನಷ್ಟಕ್ಕೆ 210 ಕಲೆಹಾಕಿದ್ದು, 211ರನ್‌ಗಳ ದೊಡ್ಡ ಟಾರ್ಗೆಟ್ ನೀಡಿದೆ.
ಲಕ್ನೋ ಪರ ಅವೇಶ್ ಖಾನ್, ಆ್ಯಂಡ್ರೂ ಟೈ, ರವಿ ಬಿಷ್ಣೋಯಿ ತಲಾ 2 ವಿಕೆಟ್ ಪಡೆದು ಮಿಂಚಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications