IPL 2022: CSK vs LSG Highlights: 211 ರನ್ ಚೇಸ್ ಮಾಡಿದ ಲಕ್ನೋ, CSKಗೆ ಮುಖಭಂಗ

ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2022ರ ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ ಬೃಹತ್ ಟಾರ್ಗೆಟ್ ಅನ್ನು ಲಕ್ನೋ ಸೂಪರ್ ಜೈಂಟ್ಸ್ ಚೇಸ್ ಮಾಡುವ ಮೂಲಕ ಅಬ್ಬರಿಸಿದೆ. ಐಪಿಎಲ್ ಇತಿಹಾಸದಲ್ಲಿಯೇ ನಾಲ್ಕನೇ ಗರಿಷ್ಠ ರನ್‌ಗಳನ್ನ ಚೇಸ್ ಮಾಡಿದ ಲಕ್ನೋ 211 ರನ್‌ಗಳನ್ನ ಬೆನ್ನಟ್ಟಿ ಈ ಸೀಸನ್‌ನಲ್ಲಿ ಮೊದಲ ಜಯ ದಾಖಲಿಸಿದೆ.
ಬೃಹತ್ ಮೊತ್ತ ಬೆನ್ನತ್ತಿದ ಕೆ.ಎಲ್ ರಾಹುಲ್ ನಾಯಕತ್ವದ ಲಕ್ನೋ ತಂಡವು ಅದ್ಭುತ ಆರಂಭ ಪಡೆಯವಲ್ಲಿ ಯಶಸ್ವಿಯಾಯಿತು. ಎದುರಾಳಿ ತಂಡದ ಕ್ಯಾಚ್ ಡ್ರಾಪ್ ಜೊತೆಗೆ ಅಬ್ಬರದ ಬ್ಯಾಟಿಂಗ್ ನಡೆಸಿದ ಕೆ.ಎಲ್ ರಾಹುಲ್ 26 ಎಸೆತಗಳಲ್ಲಿ 40 ರನ್ ಸಿಡಿಸಿದ್ರೆ, ವಿಕೆಟ್ ಕೀಪರ್ ಕ್ವಿಂಟನ್ ಡಿಕಾಕ್ 45 ಎಸೆತಗಳಲ್ಲಿ 61 ರನ್ ಸಿಡಿಸಿ ಮಿಂಚಿದ್ದಾರೆ.
ಇದರ ನಡುವೆ ಮನೀಶ್ ಪಾಂಡೆ ಕೇವಲ 5 ರನ್‌ಗಳಿಸಿ ತುಶಾರ್ ದೇಶಪಾಂಡೆಗೆ ವಿಕೆಟ್ ಒಪ್ಪಿಸಿದ್ರು . ದೀಪಕ್ ಹೂಡ ಆಟ 13ರನ್‌ಗೆ ಮುಕ್ತಾಯಗೊಂಡಿತು. ಆದ್ರೆ ಅಬ್ಬರದ ಬ್ಯಾಟಿಂಗ್ ನಡೆಸಿದ ಎವಿನ್ ಲೂಯಿಸ್ ಕೇವಲ 23 ಎಸೆತಗಳಲ್ಲಿ 50 ರನ್ ಸಿಡಿಸಿ ಮಿಂಚಿದ್ರು. ಅಜೇಯ 55 ರನ್ ಕಲೆಹಾಕಿದ ಎವಿನ್ ಲೂಯಿಸ್ ಆರು ಬೌಂಡರಿ ಮತ್ತು ಮೂರು ಭರ್ಜರಿ ಸಿಕ್ಸರ್ ಸಿಡಿಸಿದ್ರು.

ಇನ್ನು ಲಕ್ನೋ ಪರ ಕಳೆದ ಪಂದ್ಯದಲ್ಲೂ ಮಿಂಚಿದ್ದ ಯುವ ಬ್ಯಾಟ್ಸ್‌ಮನ್ ಆಯುಷ್ ಬದೋನಿ 9 ಎಸೆತಗಳಲ್ಲಿ ಎರಡು ಅಮೋಘ ಸಿಕ್ಸರ್‌ಗಳ ನೆರವಿನಿಂದ ಅಜೇಯ 19 ರನ್ ಕಲೆಹಾಕಿ ತಂಡಕ್ಕೆ ಗೆಲುವು ತಂದುಕೊಟ್ಟರು. ಇನ್ನೂ ಮೂರು ಎಸೆತ ಬಾಕಿ ಇರುವಂತೆಯೇ ಲಕ್ನೋ ಸೂಪರ್ ಜೈಂಟ್ಸ್ ಬೃಹತ್ ಮೊತ್ತವನ್ನ ಬೆನ್ನತ್ತಿ ಐಪಿಎಲ್‌ನಲ್ಲಿ ತನ್ನ ಮೊಟ್ಟ ಮೊದಲ ಗೆಲುವು ದಾಖಲಿಸಿದೆ.
ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಸಿಎಸ್‌ಕೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲಗೊಂಡರೂ ಸಹ ರಾಬಿನ್ ಉತ್ತಪ್ಪ ಭರ್ಜರಿ ಬ್ಯಾಟಿಂಗ್ ನೆರವಿನಿಂದ ದೊಡ್ಡ ಮೊತ್ತಕ್ಕೆ ಅಡಿಪಾಯ ಹಾಕಿತು. ರುತುರಾಜ್ ಗಾಯಕ್ವಾಡ್ ಕೇವಲ 1 ರನ್‌ಗೆ ರನೌಟ್ ಆಗುವ ಮೂಲಕ ಬೇಗನೆ ಪೆವಿಲಿಯನ್ ಸೇರಿಕೊಂಡ್ರು.
ಎರಡನೇ ವಿಕೆಟ್‌ಗೆ ಜೊತೆಯಾದ ರಾಬಿನ್ ಉತ್ತಪ್ಪ ಮತ್ತು ಆಲ್‌ರೌಂಡರ್ ಮೊಯಿನ್ ಅಲಿ ಸ್ಫೋಟಕ ಆಟವಾಡಿದ್ರು. ಅರ್ಧಶತಕದ ಜೊತೆಯಾಟವಾಡಿದ ಈ ಜೋಡಿ ಪವರ್‌ಪ್ಲೇ ಓವರ್‌ಗಳಲ್ಲಿ ಅಬ್ಬರಿಸಿತು. ರಾಬಿನ್ ಉತ್ತಪ್ಪ ಕೇವಲ 25 ಎಸೆತಗಳಲ್ಲಿ ಅರ್ಧಶತಕ ದಾಖಲಿಸುವ ಮೂಲಕ ಮಿಂಚಿನ ಆಟವಾಡಿದ್ರು. ರಾಬಿನ್ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 1 ಅಮೋಘ ಸಿಕ್ಸರ್ ಒಳಗೊಂಡಿತ್ತು.
ಹೀಗೆ ಉತ್ತಮವಾಗೇ ಆಡ್ತಿದ್ದ ಉತ್ತಪ್ಪ ಅರ್ಧಶತಕದ ಬಳಿಕ ರವಿ ಬಿಷ್ಣೋಯಿಗೆ ವಿಕೆಟ್ ಒಪ್ಪಿಸಿದ್ರು. ಆಲ್‌ರೌಂಡರ್ ಮೊಯಿನ್ ಅಲಿ 22 ಎಸೆತಗಳಲ್ಲಿ 35 ರನ್ ಸಿಡಿಸುವ ಮೂಲಕ ಅವೇಶ್ ಖಾನ್ ಬೌಲಿಂಗ್‌ನಲ್ಲಿ ಬೌಲ್ಡ್ ಆದ್ರು. ಮೊಯಿನ್ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡಿತ್ತು.
ಮಧ್ಯಮ ಕ್ರಮಾಂಕದಲ್ಲಿ ಅಂಬಟಿ ರಾಯುಡು ಹಾಗೂ ಶಿವಂ ದುಬೆ ಸಿಎಸ್‌ಕೆ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ್ರು. ರಾಯುಡು 20 ಎಸೆತಗಳಲ್ಲಿ 27 ರನ್ ಸಿಡಿಸಿ ಔಟಾದ್ರೆ, ಶಿವಂ ದುಬೆ 30 ಎಸೆತಗಳಲ್ಲಿ 49ರನ್ ಕಲೆಹಾಕಿ ಕೇವಲ 1 ರನ್‌ಗಳಿಂದ ಅರ್ಧಶತಕ ಮಿಸ್ ಮಾಡಿಕೊಂಡ್ರು. ಇವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡಿತ್ತು.
ಕೊನೆಯಲ್ಲಿ ನಾಯಕ ರವೀಂದ್ರ ಜಡೇಜಾ 17, ಎಂಎಸ್ ಧೋನಿ ಅಜೇಯ 16ರನ್‌ಗಳ ಕೊಡುಗೆಯಿಂದ ತಂಡದ ಮೊತ್ತ 200ರ ಗಡಿದಾಟಿತು. ಅಂತಿಮವಾಗಿ ಸಿಎಸ್‌ಕೆ 7 ವಿಕೆಟ್ ನಷ್ಟಕ್ಕೆ 210 ಕಲೆಹಾಕಿದ್ದು, 211ರನ್‌ಗಳ ದೊಡ್ಡ ಟಾರ್ಗೆಟ್ ನೀಡಿತು. ಆದ್ರೆ ಈ ಮೊತ್ತವನ್ನ ಡಿಫೆಂಡ್ ಮಾಡಿಕೊಳ್ಳುವಲ್ಲಿ ಎಡವಿದ ಸಿಎಸ್‌ಕೆ ಸತತ ಎರಡನೇ ಪಂದ್ಯದಲ್ಲಿ ಸೋಲನ್ನು ಕಂಡಿದೆ.
ಲಕ್ನೋ ಪರ ಅವೇಶ್ ಖಾನ್, ಆ್ಯಂಡ್ರೂ ಟೈ, ರವಿ ಬಿಷ್ಣೋಯಿ ತಲಾ 2 ವಿಕೆಟ್ ಪಡೆದು ಮಿಂಚಿದ್ದಾರೆ.ಈ ಗೆಲುವಿನ ಬಳಿಕ ಪಾಯಿಂಟ್ಸ್ ಟೇಬಲ್‌ನಲ್ಲಿ ಲಕ್ನೋ ಸೇರಿದಂತೆ ಉಳಿದ ತಂಡಗಳು ಯಾವ ಸ್ಥಾನದಲ್ಲಿದೆ ಎಂಬುದನ್ನ ತಿಳಿಯಲು ಈ ಕೆಳಗೆ ಕ್ಲಿಕ್ ಮಾಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications