
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ ಮಾಡಿದೆ.
ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಎಲ್‌ಎಸ್‌ಜಿ ತಂಡದಲ್ಲಿ ಕೇವಲ ಒಂದು ಬದಲಾವಣೆಯಾಗಿದ್ದು, ಮೊಹ್ಸಿನ್ ಬದಲು ಆಸ್ಟ್ರೇಲಿಯಾ ಬೌಲರ್ ಆ್ಯಂಡ್ರೂ ಟೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ರವೀಂದ್ರ ಜಡೇಜಾ ನಾಯಕತ್ವದ ಸಿಎಸ್‌ಕೆ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮೂವರ ಆಟಗಾರರು ಬದಲಾಗಿದ್ದು, ಆಲ್‌ರೌಂಡರ್ ಮೊಯಿನ್ ಅಲಿ ತಂಡದಲ್ಲಿ ಸ್ಥಾನ ಪಡೆದಿದ್ದು, ಮಿಲ್ನೆ ಸ್ನಾಯು ಸೆಳೆತದಿಂದ ತಂಡದಿಂದ ಹೊರಗುಳಿದಿದ್ದು, ಮೂವರು ವಿದೇಶಿ ಆಟಗಾರರು ಮಾತ್ರ ಕಣಕ್ಕಿಳಿಯಲಿದ್ದಾರೆ.
ಆರಂಭಿಕ ಪಂದ್ಯದಲ್ಲಿ ಲಕ್ನೋ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ಸೋತಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 15ನೇ ಸೀಸನ್‌ನಲ್ಲಿ ಕೆಕೆಆರ್ ವಿರುದ್ಧ ಮುಗ್ಗರಿಸಿದೆ. ಹೀಗಾಗಿ ಉಭಯ ತಂಡಗಳು ಮೊದಲ ಗೆಲುವನ್ನು ಎದುರು ನೋಡುತ್ತಿವೆ. ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿದೆ.
ಲಕ್ನೋ ಸೂಪರ್ ಜೈಂಟ್ಸ್
ಕೆ.ಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಆಂಡ್ರ್ಯೂ ಟೈ, ರವಿ ಬಿಷ್ಣೋಯ್, ಅವೇಶ್ ಖಾನ್
ಚೆನ್ನೈ ಸೂಪರ್ ಕಿಂಗ್ಸ್
ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ಶಿವಂ ದುಬೆ, ಡ್ವೇನ್ ಬ್ರಾವೋ, ಡ್ವೈನ್ ಪ್ರಿಟೋರಿಯಸ್, ಮುಖೇಶ್ ಚೌಧರಿ, ತುಷಾರ್ ದೇಶಪಾಂಡೆ