CSK vs MI: ಮುಂಬೈಗೆ ಸೋಲಿಗೆ ಆಘಾತ: ಚೆನ್ನೈಗೆ 8 ವಿಕೆಟ್ ಭರ್ಜರಿ ಜಯ
ಚೆನ್ನೈ: ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಯುವ ಆಟಗಾರ ಕಾರ್ತಿಕ್ ಶರ್ಮಾ ಅವರು ಬಾರಿಸಿದ ಅರ್ಧಶತಕದ ಬಲದಿಂದ ಚೆನ್ನೈ ಸೂಪರ್ ಕಿಂಗ್ಸ್ 19ನೇ ಆವೃತ್ತಿ ಐಪಿಎಲ್‌ನ 44ನೇ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿತು. ಈ ಗೆಲುವಿನ ಮೂಲಕ ಚೆನ್ನೈ ಆಡಿದ 9 ಪಂದ್ಯಗಳಲ್ಲಿ 4 ಜಯ ದಾಖಲಿಸಿದ್ದು, 8 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದು, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಗುರಿಯನ್ನು ಹಿಂಬಾಲಿಸಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭ ಕಳಪೆಯಾಗಿತ್ತು. ತಂಡದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ 11 ರನ್ ಬಾರಿಸಿದ ಔಟ್ ಆದರು. 13 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡಿದ್ದ ತಂಡಕ್ಕೆ ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಉರ್ವಿಲ್ ಪಟೇಲ್ ಆಧಾರವಾದರು. ಈ ಜೋಡಿ ಎರಡನೇ ವಿಕೆಟ್‌ಗೆ 49 ರನ್ ಸೇರಿಸಿತು. ಉರ್ವಿಲ್ ಪಟೇಲ್ 12 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 24 ರನ್ ಬಾರಿಸಿದರು.

ಮೂರನೇ ವಿಕೆಟ್‌ಗೆ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಸೇರಿಕೊಂಡ ಯುವ ಬ್ಯಾಟರ್ ಕಾರ್ತಿಕ್ ಶರ್ಮಾ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕುವಲ್ಲಿ ಮುಂಬೈ ತಂಡದ ಸ್ಟಾರ್ ಬೌಲರ್‌ಗಳು ವಿಫಲರಾದರು. ಈ ಜೋಡಿ ಚೆನ್ನೈ ತಂಡವನ್ನು ಗೆಲುವಿನ ದಡಕ್ಕೆ ತಂದು ನಿಲ್ಲಿಸಿತು. ಇಬ್ಬರೂ ಸ್ಟಾರ್ ಆಟಗಾರರು ಕೂಡಿಕೊಂಡು 75 ಎಸೆತಗಳಲ್ಲಿ ಅಜೇಯ 98 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. 20 ವರ್ಷದ ಕಾರ್ತಿಕ್ ಶರ್ಮಾ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 54 ರನ್ ಸಿಡಿಸಿದರು. ನಾಯಕ ರುತುರಾಜ್ ಗಾಯಕ್ವಾಡ್ 48 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್ ನೆರವಿನಿಂದ ಅಜೇಯ 67 ರನ್ ಬಾರಿಸಿದರು. ಅಂತಿಮವಾಗಿ ಸಿಎಸ್‌ಕೆ 18.1 ಓವರ್‌ಗಳಲ್ಲಿ 2 ವಿಕೆಟ್‌ಗೆ 160 ರನ್ ಸೇರಿಸಿತು.
ನಮನ್ ಧೀರ್ ಅರ್ಧಶತಕ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್ ತಂಡವು ಆರಂಭಿಕ ಆಘಾತದ ಹೊರತಾಗಿಯೂ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್‌ಗಳ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿತು. ಆರಂಭಿಕ ಆಟಗಾರ ವಿಲ್ ಜಾಕ್ಸ್ (1) ಬೇಗನೆ ನಿರ್ಗಮಿಸಿದರೂ, ರಿಯಾನ್ ರಿಕಲ್ಟನ್ ಮತ್ತು ನಮನ್ ಧೀರ್ ಜೋಡಿ ಎರಡನೇ ವಿಕೆಟ್‌ಗೆ 58 ರನ್ ಸೇರಿಸಿತು. ರಿಯಾನ್ ರಿಕಲ್ಟನ್ 5 ಸಿಕ್ಸರ್‌ಗಳ ನೆರವಿನಿಂದ 37 ರನ್ ಗಳಿಸಿ ಔಟ್ ಆದರು. ಸೂರ್ಯಕುಮಾರ್ ಯಾದವ್ ಆಟ 21 ರನ್‌ಗಳಿಗೆ ಕೊನೆಯಾಯಿತು.

ತಂಡದ ಪರ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ನಮನ್ ಧೀರ್ 37 ಎಸೆತಗಳಲ್ಲಿ 57 ರನ್ ಸಿಡಿಸುವ ಮೂಲಕ ಅರ್ಧಶತಕ ಬಾರಿಸಿದರು. ಇವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸೇರಿವೆ. ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಎರಡಂಕಿ ಮೊತ್ತ ದಾಖಲಿಸಿ ತಂಡದ ಮೊತ್ತವನ್ನು 159ಕ್ಕೆ ತಲುಪಿಸಲು ನೆರವಾದರು. ಚೆನ್ನೈ ಪರ ಅನ್ಶುಲ್ ಕಾಂಬೋಜ್ 3 ವಿಕೆಟ್ ಪಡೆದರೆ, ನೂರ್ ಅಹ್ಮದ್ 2 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications