For Quick Alerts
ALLOW NOTIFICATIONS  
For Daily Alerts
 

IPL 2025: ರೋಹಿತ್ ಶರ್ಮಾ ಕಮ್‌ಬ್ಯಾಕ್; ಮುಂಬೈಗೆ ಭರ್ಜರಿ ಗೆಲುವು

ಐಪಿಎಲ್ 2025 ರಲ್ಲಿ ಲಯ ಕಂಡುಕೊಳ್ಳಲು ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಹೆಣಗಾಡುತ್ತಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಫಾರ್ಮ್‌ಗೆ ಮರಳಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಪರ ಸೂರ್ಯಕುಮಾರ್ ಯಾದವ್ ಜೊತೆಗೆ ಸ್ಪೋಟಕ ಇನ್ನಿಂಗ್ಸ್ ಆಡುವ ಮೂಲಕ ರೋಹಿತ್ ಶರ್ಮಾ ಅರ್ಧಶತಕ ಬಾರಿಸಿ ಟೀಕೆಗಾರರ ಬಾಯಿ ಮುಚ್ಚಿಸಿದ್ದಾರೆ. ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕದ ನೆರವಿನಿಂದ ಸಿಎಸ್‌ಕೆ ತಂಡವನ್ನು ಮುಂಬೈ ಇಂಡಿಯನ್ಸ್ 9 ವಿಕೆಟ್‌ಗಳ ಅಂತರದಲ್ಲಿ ಸೋಲಿಸಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫಿಲ್ಡೀಂಗ್ ಮಾಡಲು ನಿರ್ಧರಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ರವೀಂದ್ರ ಜಡೇಜಾ ಮತ್ತು ಶಿವಂ ದುಬೆ ಮಿಂಚಿನ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‍‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 176 ರನ್ ಕಲೆ ಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಕೇವಲ ಒಂದು ವಿಕೆಟ್ ಕಳೆದುಕೊಂಡು 15.4 ಒವರ್‍‌ಗಳಲ್ಲಿ 177 ರನ್ ಗಳಿಸಿ ಗೆಲುವು ನಗೆ ಬೀರಿದೆ.

CSK vs MI IPL 2025 Toss Match Report Score batting and bowling performance kannada

ರೋಹಿತ್-ಸೂರ್ಯ ಅಬ್ಬರ

ಚೆನ್ನೈ ನೀಡಿದ ಗುರಿಯನ್ನು ಬೆನ್ನಟ್ಟಿದ ಮುಂಬೈ ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ರಯಾನ್ ರಿಕಲ್ಟನ್ ಮೊದಲ ವಿಕೆಟ್‌ಗೆ 63 ರನ್‌ಗಳ ಜೊತೆಯಾಟದೊಂದಿಗೆ ಉತ್ತಮ ಆರಂಭವನ್ನು ನೀಡಿದರು. ರಿಕಲ್ಟನ್ 24 ರನ್ ಗಳಿಸಿ ಔಟಾದರು. ಇದಾದ ನಂತರ ರೋಹಿತ್ ಮತ್ತು ಸೂರ್ಯಕುಮಾರ್ ಜೋಡಿ ಸಿಎಸ್‌ಕೆಗೆ ಪಂದ್ಯದಲ್ಲಿ ಮತ್ತೆ ಮರಳಲು ಯಾವುದೇ ಅವಕಾಶ ನೀಡಲಿಲ್ಲ. 26 ಎಸೆತಗಳು ಬಾಕಿ ಇರುವಾಗ ಭಾರಿ ಅಂತರದಲ್ಲಿ ಮುಂಬೈ ದೊಡ್ಡ ಗೆಲುವು ದಾಖಲಿಸಿತು.

ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಜೋಡಿ ಶತಕದ ಜೊತೆಯಾಟ ಆಡಿದರು. ರೋಹಿತ್ 45 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ ಅಜೇಯ 76 ರನ್ ಗಳಿಸಿದರು. ಸೂರ್ಯ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 30 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಿಂದ ಔಟಾಗದೆ 68 ರನ್ ಗಳಿಸಿದರು. ಸೂರ್ಯ ಸಿಕ್ಸರ್ ಹೊಡೆಯುವ ಮೂಲಕ ಮುಂಬೈ ತಂಡಕ್ಕೆ ಗೆಲುವು ತಂದು ಕೊಟ್ಟರು.

ಟಾಸ್ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭದಲ್ಲೇ ಭವರವಸೆ ಬ್ಯಾಟರ್ ರಚಿನ್ ರವೀಂದ್ರ ಅವರು ಕೇವಲ 5 ರನ್‌ಗಳಿಗೆ ಔಟಾದರು. ಬಳಿಕ ಬಂದ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ಚೊಚ್ಚಲ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಿದರು. ಆಯುಷ್ ಮ್ಹಾತ್ರೆ ಕೇವಲ 15 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು. ಮತ್ತೊಂದೆಡೆ ಉತ್ತಮವಾಗಿ ಆಡುತ್ತಿದ್ದ ಶೇಕ್ ರಶೀದ್ ಕೂಡ 19 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು.

ಈ ಸಂದರ್ಭದಲ್ಲಿ ಒಂದಾದ ರವೀಂದ್ರ ಜಡೇಜಾ ಮತ್ತು ಶಿವಂ ದುಬೆ ಜೋಡಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಈ ಜೋಡಿ ಅರ್ಧಶತಕ ಸಿಡಿಸುವ ಮೂಲಕ ಎಲ್ಲರ ಗಮನ ಸೆಳೆದರು. ಸಂಕಷ್ಟದಲ್ಲಿದ ಸಿಎಸ್‌ಕೆ ತಂಡ ಉತ್ತಮ ಸ್ಕೋರ್ ಕಲೆ ಹಾಕಲು ನೆರವಾದರು.

ರವೀಂದ್ರ ಜಡೇಜಾ 35 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ ಅಜೇಯ 53 ರನ್ ಬಾರಿಸಿದರೆ, ಶಿವಂ ದುವೆ ಅವರು 32 ಎಸೆತಗಳಲ್ಲಿ 2 ಬೌಂಡರಿ ಹಾಗು 4 ಸಿಕ್ಸರ್ ಸಹಾಯದಿಂದ 50 ರನ್ ಗಳಿಸಿ ಔಟಾದರು. ಎಂಎಸ್ ಧೋನಿ ಸಹಾ 4 ರನ್ ಗಳಿಗೆ ವಿಕೆಟ್ ಚೆಲ್ಲಿದರು.

ಮುಂಬೈ ಇಂಡಿಯನ್ಸ್ ಪರ ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡದರೆ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್ ಮತ್ತು ಅಶ್ವನಿ ಕುಮಾರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಮೊದಲ ಪಂದ್ಯ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಸಿಎಸ್‌ಕೆ 4 ವಿಕೆಟ್‌ಗಳ ಅದ್ಭುತ ಗೆಲುವು ಸಾಧಿಸಿತು. ಮುಂಬೈ ಮತ್ತು ಚೆನ್ನೈ ತಂಡಗಳು ಪಾಯಿಂಟ್ ಟೇಬಲ್‌ನಲ್ಲಿ ಕ್ರಮವಾಗಿ 7 ಮತ್ತು 10 ನೇ ಸ್ಥಾನದಲ್ಲಿವೆ.

ಉಭಯ ತಂಡಗಳ ಪ್ಲೇಯಿಂಗ್-11

ಮುಂಬೈ ಇಂಡಿಯನ್ಸ್: ರಿಯಾನ್ ರಿಕಲ್ಟನ್ (ವಿಕೆಟ್‌ಕೀಪರ್), ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ಅಶ್ವನಿ ಕುಮಾರ್.

ಚೆನ್ನೈ ಸೂಪರ್ ಕಿಂಗ್ಸ್: ಶೇಕ್ ರಶೀದ್, ರಚಿನ್ ರವೀಂದ್ರ, ಆಯುಷ್ ಮ್ಹಾತ್ರೆ, ರವೀಂದ್ರ ಜಡೇಜಾ, ಶಿವಂ ದುಬೆ, ವಿಜಯ್ ಶಂಕರ್, ಜೇಮಿ ಓವರ್ಟನ್, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್‌ಕೀಪರ್), ನೂರ್ ಅಹ್ಮದ್, ಖಲೀಲ್ ಅಹ್ಮದ್, ಮಥೀಶ ಪತಿರಾಣ.

Story first published: Sunday, April 20, 2025, 19:14 [IST]
Other articles published on Apr 20, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+