CSK vs PBKS IPL 2024: ಎರಡು 'ಕಿಂಗ್ಸ್' ನಡುವಿನ ಕಾಳಗದಲ್ಲಿ ಗೆಲ್ಲೋದ್ಯಾರು?; ಟಾಸ್ ವರದಿ, ಆಡುವ 11ರ ಬಳಗ
ಬುಧವಾರ, ಮೇ 1ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 49ನೇ ರೋಚಕ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪ್ರವಾಸಿ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರ್ರಾನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಇಂದಿನ ಪಂದ್ಯದಲ್ಲಿ ಸಿಎಸ್‌ಕೆ ಗೆಲುವಿನೊಂದಿಗೆ ಅಗ್ರ ಮೂರರಲ್ಲಿ ಸ್ಥಾನ ಪಡೆಯುವ ಗುರಿಯನ್ನು ಹೊಂದಿದ್ದರೆ, ಪಂಜಾಬ್ ಕಿಂಗ್ಸ್ ತಂಡ ತಮ್ಮ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳುವ ಗುರಿಯನ್ನು ಹೊಂದಿದೆ.
ರುತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ ತಂಡ ಐಪಿಎಲ್ 2024ರಲ್ಲಿ ಈವರೆಗೆ ಆಡಿದ 9 ಪಂದ್ಯಗಳಿಂದ 5 ಗೆಲುವು ಮತ್ತು 4 ಸೋಲುಗಳೊಂದಿಗೆ 10 ಅಂಕಗಳನ್ನು ಹೊಂದಿ 4ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ತಂಡ ಆಡಿದ 9 ಪಂದ್ಯಗಳಿಂದ 3 ಗೆಲುವು ಮತ್ತು 6 ಸೋಲುಗಳೊಂದಿಗೆ 6 ಅಂಕಗಳನ್ನು ಹೊಂದಿದ್ದು 8ನೇ ಸ್ಥಾನದಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 262 ರನ್ ಗಳಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಚೇಸಿಂಗ್ ಮಾಡಿದ ಹಿನ್ನೆಲೆಯೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಈ ಪಂದ್ಯಕ್ಕೆ ಬರುತ್ತಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ ತಮ್ಮ ಕೊನೆಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 78 ರನ್‌ಗಳ ಗೆಲುವಿನೊಂದಿಗೆ ಕಣಕ್ಕಿಳಿಯುತ್ತಿದೆ.
ಇದೇ ವೇಳೆ 250 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೂರನೇ ಭಾರತೀಯ ಆಟಗಾರನಾಗಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಪಟ್ಟಿಯನ್ನು ಸೇರಲು ಎಂಎಸ್ ಧೋನಿ ಅವರಿಗೆ ಕೇವಲ ಮೂರು ಸಿಕ್ಸರ್‌ಗಳ ಅವಶ್ಯಕತೆ ಇದೆ.
ಸಿಎಸ್‌ಕೆ vs ಪಿಬಿಕೆಎಸ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಸಿಎಸ್‌ಕೆ vs ಪಿಬಿಕೆಎಸ್ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್: ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ (ನಾಯಕ), ಡ್ಯಾರಿಲ್ ಮಿಚೆಲ್, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ರಿಚರ್ಡ್ ಗ್ಲೀಸನ್, ಮುಸ್ತಾಫಿಜುರ್ ರೆಹಮಾನ್.
ಪಂಜಾಬ್ ಕಿಂಗ್ಸ್: ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರ್ರಾನ್ (ನಾಯಕ), ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್, ಅರ್ಶ್‌ದೀಪ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications