For Quick Alerts
ALLOW NOTIFICATIONS  
For Daily Alerts
 

CSK vs PBKS IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ತವರಿನಲ್ಲೇ ಮಣ್ಣುಮುಕ್ಕಿದ ಚೆನ್ನೈ ಸೂಪರ್ ಕಿಂಗ್ಸ್

ಬುಧವಾರ, ಮೇ 1ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 49ನೇ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ನಿರ್ಣಾಯಕ 7 ವಿಕೆಟ್‌ಗಳ ಗೆಲುವು ಸಾಧಿಸಿತು.

ಈ ಮೂಲಕ ಸಿಎಸ್‌ಕೆ ತಂಡ ಐಪಿಎಲ್ 2024ರಲ್ಲಿ ಈವರೆಗೆ ಆಡಿದ 10 ಪಂದ್ಯಗಳಿಂದ 5 ಗೆಲುವು ಮತ್ತು 5 ಸೋಲುಗಳೊಂದಿಗೆ 10 ಅಂಕಗಳನ್ನು ಹೊಂದಿ 4ನೇ ಸ್ಥಾನದಲ್ಲೇ ಮುಂದುವರೆದರೆ, ಪಂಜಾಬ್ ಕಿಂಗ್ಸ್ ತಂಡ ಆಡಿದ 9 ಪಂದ್ಯಗಳಿಂದ 4 ಗೆಲುವು ಮತ್ತು 6 ಸೋಲುಗಳೊಂದಿಗೆ 8 ಅಂಕಗಳನ್ನು ಹೊಂದಿದ್ದು 7ನೇ ಸ್ಥಾನಕ್ಕೇರಿದೆ.

CSK vs PBKS IPL 2024 Punjab Kings Beat Chennai Super Kings By 7 Wickets In 49th Match

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್ ಅವರ ಅಮೋಘ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು.

163 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡ ಜಾನಿ ಬೈರ್‌ಸ್ಟೋವ್ ಮತ್ತು ರಿಲೀ ರೊಸ್ಸೌ ಅವರ ಭರ್ಜರಿ ಬ್ಯಾಟಿಂಗ್ ಸಹಾಯದಿಂದ 17.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು.

ಪಂಜಾಬ್ ಕಿಂಗ್ಸ್ ತಂಡದ ಇನ್ನಿಂಗ್ಸ್ ಆರಂಭಿಸಿದ ಪ್ರಭ್‌ಸಿಮ್ರಾನ್ ಸಿಂಗ್ ಮತ್ತು ಜಾನಿ ಬೈರ್‌ಸ್ಟೋವ್ ಉತ್ತಮ ಆರಂಭ ನೀಡಲು ಪ್ರಯತ್ನಿಸಿದರು. ಆದರೆ ತಂಡದ ಮೊತ್ತ 3.1 ಓವರ್‌ಗಳಲ್ಲಿ 19 ರನ್‌ಗಳಾಗಿದ್ದಾಗ ಪ್ರಭ್‌ಸಿಮ್ರಾನ್ ಸಿಂಗ್ 13 ರನ್ ಗಳಿಸಿ ಔಟಾದರು.

CSK vs PBKS IPL 2024 Punjab Kings Beat Chennai Super Kings By 7 Wickets In 49th Match

ನಂತರ ಬಂದ ರಿಲೀ ರೊಸ್ಸೌ ಅವರೊಂದಿಗೆ 64 ರನ್‌ಗಳ ಜೊತೆಯಾಟ ನಿರ್ಮಿಸಿದ ನಂತರ, ಆರಂಭಿಕ ಬ್ಯಾಟರ್ ಜಾನಿ ಬೈರ್‌ಸ್ಟೋವ್ 30 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 46 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ರಿಲೀ ರೊಸ್ಸೌ ಕೂಡ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 43 ರನ್ ಬಾರಿಸಿ ನಿರ್ಣಾಯಕ ಆಟವಾಡಿದರು.

ಇನ್ನು ಕೊನೆಯಲ್ಲಿ ನಾಯಕ ಸ್ಯಾಮ್ ಕರ್ರಾನ್ 20 ಎಸೆತಗಳಲ್ಲಿ ಅಜೇಯ 26 ರನ್ ಮತ್ತು ಶಶಾಂಕ್ ಸಿಂಗ್ 26 ಎಸೆತಗಳಲ್ಲಿ ಅಜೇಯ 25 ರನ್ ಗಳಿಸಿ ತಮ್ಮ ತಂಡವನ್ನು ಗೆರೆ ದಾಟಿಸಿದರು.

ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಶಾರ್ದೂಲ್ ಠಾಕೂರ್, ರಿಚರ್ಡ್ ಗ್ಲಿಸನ್ ಮತ್ತು ಶಿವಂ ದುಬೆ ತಲಾ ಒಂದೊಂದು ವಿಕೆಟ್ ಪಡೆದರೂ, ಉಳಿದ ಬೌಲರ್‌ಗಳಿಂದ ಉತ್ತಮ ಸಾಥ್ ನೀಡದ ಕಾರಣ ತಮ್ಮ ಮೊತ್ತವನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ.

CSK vs PBKS IPL 2024 Punjab Kings Beat Chennai Super Kings By 7 Wickets In 49th Match

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ್ದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಅಜಿಂಕ್ಯ ರಹಾನೆ ಜೋಡಿ ಮೊದಲ ವಿಕೆಟ್‌ಗೆ 8.2 ಓವರ್‌ಗಳಲ್ಲಿ 64 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ ಅಜಿಂಕ್ಯ ರಹಾನೆ 24 ಎಸೆತಗಳಲ್ಲಿ 5 ಬೌಂಡರಿ ಸಮೇತ 29 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ನಂತರ ಬಂದ ಸ್ಫೋಟಕ ಆಲ್‌ರೌಂಡರ್ ಶಿವಂ ದುಬೆ ಎದುರಿಸಿದ ಮೊದಲ ಎಸೆತದಲ್ಲಿ ಡಕ್‌ಗೆ ಔಟಾದರು. ಆಗ ಕ್ರೀಸ್‌ಗೆ ಬಂದ ಮತ್ತೊಬ್ಬ ಆಲ್‌ರೌಂಡರ್ ರವೀಂದ್ರ ಜಡೇಜಾ ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಆ ಬಳಿಕ ಸಮೀರ್ ರಿಜ್ವಿ 23 ಎಸೆತಗಳಲ್ಲಿ 1 ಬೌಂಡರಿ ಮೂಲಕ ನಿಧಾನಗತಿಯ 21 ರನ್ ಗಳಿಸಿದರೆ, ಮೊಯಿನ್ ಅಲಿ 9 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 15 ರನ್ ಗಳಿಸಿ ಔಟಾದರು.

ಆದರೆ, ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್ ಸತತ ನಾಲ್ಕನೇ ಬಾರಿ 50 ಪ್ಲಸ್ ಸ್ಕೋರ್ ಮಾಡಿದರು. ಈ ಪಂದ್ಯದಲ್ಲಿ 48 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 62 ರನ್ ಬಾರಿಸಿದರು.

ಕೊನೆಯ ಎರಡು ಓವರ್‌ಗಳಿದ್ದಾಗ ಕ್ರೀಸ್‌ಗೆ ಬಂದ ಮಾಜಿ ನಾಯಕ ಎಂಎಸ್ ಧೋನಿ 11 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 14 ರನ್ ಗಳಿಸಿ ರನೌಟ್ ಆದರು. ಡ್ಯಾರಿಲ್ ಮಿಚೆಲ್ 1 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ರಾಹುಲ್ ಚಹಾರ್ 4 ಓವರ್‌ಗಳಲ್ಲಿ 16 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಹರ್‌ಪ್ರೀತ್ ಬ್ರಾರ್ 4 ಓವರ್‌ಗಳಲ್ಲಿ 17 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಕಗಿಸೊ ರಬಾಡ ಮತ್ತು ಅರ್ಶ್‌ದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Wednesday, May 1, 2024, 23:41 [IST]
Other articles published on May 1, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+