CSK vs PBKS IPL 2024: ಸಿಎಸ್‌ಕೆಗೆ ಮತ್ತೊಮ್ಮೆ ರುತುರಾಜ್ ಆಸರೆ; ಪಂಜಾಬ್ ಕಿಂಗ್ಸ್‌ಗೆ ಸಾಧಾರಣ ಗುರಿ
ಬುಧವಾರ, ಮೇ 1ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 49ನೇ ರೋಚಕ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್ ಅವರ ಮತ್ತೊಂದು ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿದ್ದು, ಪಂಜಾಬ್ ಕಿಂಗ್ಸ್ ತಂಡಕ್ಕೆ 163 ರನ್‌ಗಳ ಸವಾಲಿನ ಗುರಿ ನೀಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಅಜಿಂಕ್ಯ ರಹಾನೆ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 8.2 ಓವರ್‌ಗಳಲ್ಲಿ 64 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ ಅಜಿಂಕ್ಯ ರಹಾನೆ 24 ಎಸೆತಗಳಲ್ಲಿ 5 ಬೌಂಡರಿ ಸಮೇತ 29 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಂತರ ಬಂದ ಸ್ಫೋಟಕ ಆಲ್‌ರೌಂಡರ್ ಶಿವಂ ದುಬೆ ಎದುರಿಸಿದ ಮೊದಲ ಎಸೆತದಲ್ಲಿ ಡಕ್‌ಗೆ ಔಟಾದರು. ಆಗ ಕ್ರೀಸ್‌ಗೆ ಬಂದ ಮತ್ತೊಬ್ಬ ಆಲ್‌ರೌಂಡರ್ ರವೀಂದ್ರ ಜಡೇಜಾ ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಮಧ್ಯಮ ಕ್ರಮಾಂಕದಲ್ಲಿ ಮೈದಾನಕ್ಕಿಳಿದ ಸಮೀರ್ ರಿಜ್ವಿ 23 ಎಸೆತಗಳಲ್ಲಿ 1 ಬೌಂಡರಿ ಮೂಲಕ 21 ರನ್ ಗಳಿಸಿದರೆ, ಮೊಯಿನ್ ಅಲಿ 9 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 15 ರನ್ ಗಳಿಸಿ ಔಟಾದರು.
ಆದರೆ, ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್ ಮಾತ್ರ ಮತ್ತೊಮ್ಮೆ ತಮ್ಮ ತಂಡಕ್ಕೆ ಆಸರೆಯಾದರು. ಸತತ ನಾಲ್ಕನೇ ಬಾರಿ 50 ಪ್ಲಸ್ ಸ್ಕೋರ್ ಮಾಡಿದರು. ಈ ಪಂದ್ಯದಲ್ಲಿ 48 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 62 ರನ್ ಬಾರಿಸಿದರು.
ಕೊನೆಯ ಎರಡು ಓವರ್‌ಗಳು ಇದ್ದಾಗ ಕ್ರೀಸ್‌ಗೆ ಬಂದ ಮಾಜಿ ನಾಯಕ ಎಂಎಸ್ ಧೋನಿ 11 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 14 ರನ್ ಗಳಿಸಿ ರನೌಟ್ ಆದರು. ಡ್ಯಾರಿಲ್ ಮಿಚೆಲ್ 1 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ರಾಹುಲ್ ಚಹಾರ್ 4 ಓವರ್‌ಗಳಲ್ಲಿ 16 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಹರ್‌ಪ್ರೀತ್ ಬ್ರಾರ್ 4 ಓವರ್‌ಗಳಲ್ಲಿ 17 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಕಗಿಸೊ ರಬಾಡ ಮತ್ತು ಅರ್ಶ್‌ದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications