CSK vs RR: ಸಿಎಸ್‌ಕೆ ಶಿಸ್ತುಬದ್ಧ ಬೌಲಿಂಗ್ ದಾಳಿ; ರಾಜಸ್ಥಾನ್ ರಾಯಲ್ಸ್ ಸಾಧಾರಣ ಮೊತ್ತ
ಭಾನುವಾರ, ಮೇ 12ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 61ನೇ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಸಿಲುಕಿದ ಪ್ರವಾಸಿ ರಾಜಸ್ಥಾನ್ ರಾಯಲ್ಸ್ ತಂಡ ಸಾಧಾರಣ ಮೊತ್ತಕ್ಕೆ ನಿಯಂತ್ರಣಗೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ಯಾವುದೇ ಅರ್ಧಶತಕವಿಲ್ಲದೆ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 142 ರನ್‌ಗಳ ಗುರಿ ನೀಡಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಬ್ಯಾಟಿಂಗ್ ಆರಂಭಿಸಿದ ಜೋಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ ದೊಡ್ಡ ಆರಂಭ ನೀಡಲು ಪ್ರಯತ್ನಿಸಿದರೂ, ಅದನ್ನು ಮುಂದುವರೆಸಲು ಸಾಧ್ಯವಾಗಲಿಲ್ಲ. ಈ ಜೋಡಿ ಮೊದಲ ವಿಕೆಟ್‌ಗೆ 6.2 ಓವರ್‌ಗಳಲ್ಲಿ 43 ರನ್‌ಗಳ ಜೊತೆಯಾಟ ನೀಡಿದರು.
ಈ ವೇಳೆ ಯಶಸ್ವಿ ಜೈಸ್ವಾಲ್ 21 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 24 ರನ್ ಗಳಿಸಿ ಔಟಾದರೆ, ಜೋಸ್ ಬಟ್ಲರ್ 25 ಎಸೆತಗಳಲ್ಲಿ 2 ಬೌಂಡರಿ ಮೂಲಕ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ನಾಯಕ ಸಂಜು ಸ್ಯಾಮ್ಸನ್ 19 ಎಸೆತಗಳಲ್ಲಿ 15 ರನ್ ಗಳಿಸಿ ಪೆವಿಲಿಯನ್ ಸೇರಿದರು.
ಕಡಿಮೆ ಮೊತ್ತಕ್ಕೆ ಕುಸಿಯುತ್ತಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರಿಯಾನ್ ಪರಾಗ್ ನೆರವಾದರು. ರಿಯಾನ್ ಪರಾಗ್ 35 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ ಅಜೇಯ 47 ರನ್ ಬಾರಿಸಿದರು. ಇನ್ನು ಧ್ರುವ್ ಜುರೆಲ್ 18 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 28 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಸಿಎಸ್‌ಕೆ ತಂಡದ ಪರ ಸಿಮರ್ಜಿತ್ ಸಿಂಗ್ 4 ಓವರ್‌ಗಳಲ್ಲಿ 26 ರನ್ ನೀಡಿ 3 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ 4 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications