CSK vs SRH IPL 2024: ಚೆನ್ನೈ ಎದುರು ಹೈದರಾಬಾದ್‌ಗೆ ಹೀನಾಯ ಸೋಲು
ಭಾನುವಾರ, ಏಪ್ರಿಲ್ 28ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 46ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 78 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 9 ಪಂದ್ಯಗಳಲ್ಲಿ 5 ಗೆಲುವು ಮತ್ತು 4 ಸೋಲುಗಳ ಮೂಲಕ 10 ಅಂಕಗಳನ್ನು ಕಲೆಹಾಕಿ 3ನೇ ಸ್ಥಾನಕ್ಕೆ ಜಿಗಿದಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಕೂಡ ಆಡಿದ 9 ಪಂದ್ಯಗಳಲ್ಲಿ 5 ಗೆಲುವು ಮತ್ತು 4 ಸೋಲುಗಳೊಂದಿಗೆ 10 ಅಂಕಗಳನ್ನು ಹೊಂದಿ 4ನೇ ಸ್ಥಾನ ಪಡೆದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್ ಮತ್ತು ಡೇರಿಲ್ ಮಿಚೆಲ್ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ರನ್ ಗಳಿಸಿತ್ತು.
213 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ ತಂಡ 18.5 ಓವರ್‌ಗಳಲ್ಲಿ 134 ರನ್‌ಗಳಿಗೆ ಸರ್ವಪತನ ಕಂಡು 78 ರನ್‌ಗಳ ದಯನೀಯ ಸೋಲು ಅನುಭವಿಸಿತು.

ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಉತ್ತಮ ಆರಂಭ ನೀಡಲು ಸಾಧ್ಯವಾಗಲಿಲ್ಲ. ಈ ಜೋಡಿ ಮೊದಲ ವಿಕೆಟ್‌ಗೆ 1.5 ಓವರ್‌ಗಳಲ್ಲಿ 21 ರನ್‌ಗಳ ಜೊತೆಯಾಟವಾಡಿತು. ಈ ವೇಳೆ 13 ರನ್ ಗಳಿಸಿದ್ದ ಟ್ರಾವಿಸ್ ಹೆಡ್ ಔಟಾದರೆ, ಅಭಿಷೇಕ್ ಶರ್ಮಾ 15 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಂತರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಅನ್ಮೋಲ್‌ಪ್ರೀತ್ ಸಿಂಗ್ ಸೊನ್ನೆಗೆ ಔಟಾದರೆ, ಏಡೆನ್ ಮಾರ್ಕ್ರಾಮ್ 32 ರನ್, ನಿತೀಶ್ ರೆಡ್ಡಿ 15 ರನ್, ಹೆನ್ರಿಚ್ ಕ್ಲಾಸೆನ್ 20 ರನ್, ಅಬ್ದುಲ್ ಸಮದ್ 19 ರನ್ ಗಳಿಸಿದರೆ, ಉಳಿದ ಬ್ಯಾಟರ್‌ಗಳು ಎರಡಂಕಿ ಮೊತ್ತ ದಾಟಲು ವಿಫಲರಾದರು.
ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ತುಷಾರ್ ದೇಶಪಾಂಡೆ 3 ಓವರ್‌ಗಳಲ್ಲಿ 27 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಮತೀಶ್ ಪತಿರಾನ 2 ಓವರ್‌ಗಳಲ್ಲಿ 17 ರನ್ ನೀಡಿ 2 ವಿಕೆಟ್ ಮತ್ತು ಮುಸ್ತಾಫಿಜುರ್ ರಹಮಾನ್ 2.5 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ರವೀಂದ್ರ ಜಡೇಜಾ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ರುತುರಾಜ್ ಗಾಯಕ್ವಾಡ್ ಮತ್ತು ಅಜಿಂಕ್ಯ ರಹಾನೆ ದೊಡ್ಡ ಆರಂಭ ನೀಡಲು ಸಾಧ್ಯವಾಗಲಿಲ್ಲ. ತಂಡದ ಮೊತ್ತ 19 ರನ್‌ಗಳಾಗಿದ್ದಾಗ 12 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು.
ನಂತರ ಬಂದ ಡೇರಿಲ್ ಮಿಚೆಲ್ ಅವರು ರುತುರಾಜ್ ಗಾಯಕ್ವಾಡ್ ಜೊತೆಗೂಡಿ 2ನೇ ವಿಕೆಟ್‌ಗೆ 107 ರನ್‌ಗಳ ಜೊತೆಯಾಟ ನಿರ್ಮಿಸಿ ದೊಡ್ಡ ಮೊತ್ತ ಗಳಿಸಲು ನೆರವಾದರು. ಡೇರಿಲ್ ಮಿಚೆಲ್ 32 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 52 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಾಯಕ ರುತುರಾಜ್ ಗಾಯಕ್ವಾಡ್ 54 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 98 ರನ್ ಗಳಿಸಿ ಕೇವಲ 2 ರನ್‌ಗಳಿಂದ ಸತತ ಎರಡನೇ ಶತಕದಿಂದ ವಂಚಿತರಾದರು. ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದರು.
ಈ ವೇಳೆ ಕ್ರೀಸ್‌ಗೆ ಬಂದ ಶಿವಂ ದುಬೆ ತಮ್ಮ ಎಂದಿನ ಸ್ಫೋಟಕ ಆಟವಾಡಿದರು ಮತ್ತು 20 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ ಅಜೇಯ 39 ರನ್ ಗಳಿಸಿದರೆ, ಕೊನೆಯಲ್ಲಿ ಬಂದ ಎಂಎಸ್ ಧೋನಿ 1 ಬೌಂಡರ ಸಮೇತ ಅಜೇಯ 5 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಭುವನೇಶ್ವರ್ ಕುಮಾರ್, ಟಿ ನಟರಾಜನ್ ಮತ್ತು ಜಯದೇವ್ ಉನಾದ್ಕಟ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications