CSK vs SRH IPL 2024: ಚೆನ್ನೈ vs ಹೈದರಾಬಾದ್ ಬಲಾಢ್ಯ ತಂಡಗಳ ರೋಚಕ ಫೈಟ್; ಟಾಸ್ ವರದಿ, ಆಡುವ 11ರ ಬಳಗ
ಭಾನುವಾರ, ಏಪ್ರಿಲ್ 28ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 46ನೇ ರೋಚಕ ಪಂದ್ಯದಲ್ಲಿ ಬಲಾಢ್ಯ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ತಂಡಗಳು ಸೆಣಸಾಡುತ್ತಿವೆ.
ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಉಭಯ ತಂಡಗಳು ಸೋಲಿನ ಕಹಿ ಮರೆತು ಗೆಲುವಿನ ಹಾದಿಗೆ ಮರಳುವ ಗುರಿಯನ್ನು ಹೊಂದಿವೆ. ಸತತ ಎರಡು ಸೋಲಿನ ಹಿನ್ನೆಲೆಯಲ್ಲಿ ಸಿಎಸ್‌ಕೆ ಈ ಪಂದ್ಯಕ್ಕೆ ಬಂದರೆ, ಎಸ್‌ಆರ್‌ಹೆಚ್ ಸಹ ತಮ್ಮ ಹಿಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೊಡ್ಡ ಸೋಲು ಅನುಭವಿಸಿತ್ತು.
ಐಪಿಎಲ್ 2024ರಲ್ಲಿ ಉಭಯ ತಂಡಗಳ ನಡುವಿನ ಮೊದಲ ಹಂತದ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 6 ವಿಕೆಟ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿತ್ತು.
ಸನ್ ರೈಸರ್ಸ್ ಹೈದರಾಬಾದ್ ತಂಡದ ಐಪಿಎಲ್ 2024ರಲ್ಲಿ ಆಡಿದ 8 ಪಂದ್ಯಗಳಲ್ಲಿ 5 ಗೆಲುವು ಮತ್ತು 3 ಸೋಲುಗಳನ್ನು ಕಂಡಿದ್ದು, 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ 4 ಗೆಲುವು ಮತ್ತು 4 ಸೋಲುಗಳನ್ನು ಅನುಭವಿಸಿ 8 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ.
ಸಿಎಸ್‌ಕೆ vs ಎಸ್‌ಆರ್‌ಹೆಚ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಸಿಎಸ್‌ಕೆ vs ಎಸ್‌ಆರ್‌ಹೆಚ್ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್: ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ (ನಾಯಕ), ಡೆರಿಲ್ ಮಿಚೆಲ್, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರೆಹಮಾನ್, ಮತೀಶ ಪತಿರಾನ.
ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕಟ್, ಟಿ ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications