CSK vs SRH IPL 2024: ರುತುರಾಜ್, ಮಿಚೆಲ್ ಸ್ಫೋಟಕ ಬ್ಯಾಟಿಂಗ್; ಹೈದರಾಬಾದ್‌ಗೆ ಬೃಹತ್ ಟಾರ್ಗೆಟ್ ನೀಡಿದ ಚೆನ್ನೈ
ಭಾನುವಾರ, ಏಪ್ರಿಲ್ 28ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 46ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಬೃಹತ್ ಮೊತ್ತ ಕಲೆಹಾಕಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್ ಮತ್ತು ಡೇರಿಲ್ ಮಿಚೆಲ್ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ರನ್ ಗಳಿಸಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ರನ್‌ಗಳ ಸವಾಲಿನ ಗುರಿ ನೀಡಿದೆ.

ನಂತರ ಬಂದ ಡೇರಿಲ್ ಮಿಚೆಲ್ ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ಮಾಡಲು ಮುಂದಾದರು. ರುತುರಾಜ್ ಗಾಯಕ್ವಾಡ್ ಜೊತೆಗೂಡಿ 2ನೇ ವಿಕೆಟ್‌ಗೆ 107 ರನ್‌ಗಳ ಜೊತೆಯಾಟ ನಿರ್ಮಿಸಿ ದೊಡ್ಡ ಮೊತ್ತ ಗಳಿಸಲು ನೆರವಾದರು. ಡೇರಿಲ್ ಮಿಚೆಲ್ 32 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 52 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಾಯಕ ರುತುರಾಜ್ ಗಾಯಕ್ವಾಡ್ 54 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 98 ರನ್ ಗಳಿಸಿ ಕೇವಲ 2 ರನ್‌ಗಳಿಂದ ಸತತ ಎರಡನೇ ಶತಕದಿಂದ ವಂಚಿತರಾದರು. ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದರು.
ಈ ವೇಳೆ ಕ್ರೀಸ್‌ಗೆ ಬಂದ ಶಿವಂ ದುಬೆ ತಮ್ಮ ಎಂದಿನ ಸ್ಫೋಟಕ ಆಟವಾಡಿದರು ಮತ್ತು 20 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ ಅಜೇಯ 39 ರನ್ ಗಳಿಸಿದರೆ, ಕೊನೆಯಲ್ಲಿ ಬಂದ ಎಂಎಸ್ ಧೋನಿ 1 ಬೌಂಡರ ಸಮೇತ ಅಜೇಯ 5 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಭುವನೇಶ್ವರ್ ಕುಮಾರ್, ಟಿ ನಟರಾಜನ್ ಮತ್ತು ಜಯದೇವ್ ಉನಾದ್ಕಟ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications