ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲಲು ಭಾರತದ ಮಹಿಳೆಯರಿಗೆ 162 ರನ್ ಗುರಿ

ಕಾಮನ್‌ವೆಲ್ತ್ ಗೇಮ್ಸ್‌ನ ಫೈನಲ್ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡ ಉತ್ತಮ ಪ್ರದರ್ಶನ ನೀಡಿದ್ದು ಆಸ್ಟ್ರೇಲಿಯಾ ತಂಡವನ್ನು 161 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಆಸ್ಟ್ರೇಲಿಯಾದ ಆರಂಬಿಕ ಆಟಗಾರ್ತಿ ಬೆನ್ ಬೂನಿ ಭರ್ಜರಿ ಅರ್ಧ ಶತಕ ಸಿಡಿಸಿದ ಪರಿಣಾಮವಾಗಿ ಆಸ್ಟ್ರೇಲಿಯಾ ಮಹಿಳಾ ತಂಡ ಸವಾಲಿನ ಮೊತ್ತ ಪೆರಿಸಲು ಸಾಧ್ಯವಾಯಿತು.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಆಸ್ಟ್ರೇಲಿಯಾ ತಂಡ ಒಂದು ಹಂತದಲ್ಲಿ ದೊಡ್ಡ ಮೊತ್ತದ ಗುರಿ ನೀಡುವಂತೆ ತೋರಿತ್ತು. ಆದರೆ ಅಂತಿಮ ಹಂತದಲ್ಲಿ ಭಾರತದ ಬೌಲಿಂಗ್ ಪಡೆ ಅದ್ಭುತ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಅದರ ಪರಿಣಾಮವಾಗಿ ಆಸ್ಟ್ರೇಲಿಯಾ ತಂಡ 161 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೊತ್ತವನ್ನು ಭಾರತದ ಮಹಿಳೆಯರ ತಂಡ ಯಾವ ರೀತಿ ಬೆನ್ನಟ್ಟಲಿದೆ ಎಂಬುದು ಕುತೂಹಲ ಮೂಡಿಸದೆ.ಭಾರತ ಮಹಿಳಾ ತಂಡ ಆಡುವ ಬಳಗ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ತನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಮೇಘನಾ ಸಿಂಗ್, ರೇಣುಕಾ ಸಿಂಗ್
ಬೆಂಚ್: ರಾಜೇಶ್ವರಿ ಗಾಯಕ್ವಾಡ್, ಸಬ್ಬಿನೇನಿ ಮೇಘನಾ, ಹರ್ಲೀನ್ ಡಿಯೋಲ್, ಯಾಸ್ತಿಕಾ ಭಾಟಿಯಾ
ಆಸ್ಟ್ರೇಲಿಯಾ ಮಹಿಳಾ ತಂಡ ಆಡುವ ಬಳಗ: ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಬೆತ್ ಮೂನಿ, ಮೆಗ್ ಲ್ಯಾನಿಂಗ್ (ನಾಯಕಿ), ತಹ್ಲಿಯಾ ಮೆಕ್‌ಗ್ರಾತ್, ರಾಚೆಲ್ ಹೇನ್ಸ್, ಆಶ್ಲೀ ಗಾರ್ಡ್ನರ್, ಗ್ರೇಸ್ ಹ್ಯಾರಿಸ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ಮೇಗನ್ ಶುಟ್, ಡಾರ್ಸಿ ಬ್ರೌನ್
ಬೆಂಚ್: ಎಲ್ಲೀಸ್ ಪೆರ್ರಿ, ನಿಕೋಲಾ ಕ್ಯಾರಿ, ಅಮಂಡಾ ವೆಲ್ಲಿಂಗ್ಟನ್, ಅನ್ನಾಬೆಲ್ ಸದರ್ಲ್ಯಾಂಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications