ಭಾರತದ ವಿರುದ್ಧದ ಟಿ20ಐಗೆ ಇಂಗ್ಲೆಂಡ್ ತಂಡಕ್ಕೆ ಮರಳಿದ ಡೇನಿಯಲ್ ವ್ಯಾಟ್, ಮ್ಯಾಡಿ ವಿಲಿಯರ್ಸ್

ಲಂಡನ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ್ತಿ ಡೇನಿಯಲ್ ವ್ಯಾಟ್ ಮತ್ತು ಮ್ಯಾಡಿ ವಿಲಿಯರ್ಸ್ ಮತ್ತೆ ಇಂಗ್ಲೆಂಡ್ ತಂಡಕ್ಕೆ ಮರಳಿದ್ದಾರೆ. ಜುಲೈ 9ರಿಂದ ಆರಂಭಗೊಳ್ಳಲಿರುವ ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ ತಂಡ ಪ್ರಕಟಿಸಿದ್ದು, ಈ ತಂಡದಲ್ಲಿ ಇಬ್ಬರೂ ಕಾಣಿಸಿಕೊಂಡಿದ್ದಾರೆ.
ಡೇನಿಯಲ್ ವ್ಯಾಟ್ ಮತ್ತು ಮ್ಯಾಡಿ ವಿಲಿಯರ್ಸ್ ಅಲ್ಲದೆ, 14 ಜನರ ಇಂಗ್ಲೆಂಡ್ ತಂಡದಲ್ಲಿ ಕೇಟ್ ಕ್ರಾಸ್, ಲಾರೆನ್ ವಿನ್ಫೀಲ್ಡ್-ಹಿಲ್ ಕೂಡ ಕಾಣಿಸಿಕೊಂಡಿದ್ದಾರೆ. ಹೀದರ್ ನೈಟ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
ಇಂಗ್ಲೆಂಡ್‌ನಲ್ಲಿರುವ ಭಾರತ ಮಹಿಳಾ ತಂಡ ಆತಿಥೇಯರ ವಿರುದ್ಧ ಏಕಮಾತ್ರ ಟೆಸ್ಟ್‌ನಲ್ಲಿ ಸೋಲನುಭವಿಸಿತ್ತು. ಆ ಬಳಿಕ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1ರ ಸೋಲು ದಾಖಲಿಸಿತ್ತು. ಈಗ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ನಾರ್ಥಾಂಪ್ಟನ್, ಹೋವ್ ಮತ್ತು ಚೆಲ್ಮ್ಸ್ಫೋರ್ಡ್ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆಯಲಿವೆ.
ಭಾರತ ವಿರುದ್ಧದ ಟಿ20ಐ ಸರಣಿಗೆ ಇಂಗ್ಲೆಂಡ್ ಮಹಿಳಾ ತಂಡ
ಹೀದರ್ ನೈಟ್ (ಕ್ಯಾಪ್ಟನ್), ಟಮ್ಮಿ ಬ್ಯೂಮಾಂಟ್, ಕ್ಯಾಥರೀನ್ ಬ್ರಂಟ್, ಫ್ರೇಯಾ ಡೇವಿಸ್, ಸೋಫಿಯಾ ಡಂಕ್ಲೆ, ಸೋಫಿ ಎಕ್ಲೆಸ್ಟೋನ್, ಟ್ಯಾಶ್ ಫಾರ್ರಂಟ್, ಸಾರಾ ಗ್ಲೆನ್, ಆಮಿ ಜೋನ್ಸ್, ನ್ಯಾಟ್ ಸ್ಕಿವರ್, ಅನ್ಯಾ ಶ್ರಬ್ಸೋಲ್, ಮ್ಯಾಡಿ ವಿಲಿಯರ್ಸ್, ಫ್ರಾನ್ ವಿಲ್ಸನ್, ಡ್ಯಾನಿ ವ್ಯಾಟ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications