Darren Sammy: ಎರಡು ಟಿ20 ವಿಶ್ವಕಪ್ ಗೆದ್ದ ವೆಸ್ಟ್ ಇಂಡೀಸ್ ಮಾಜಿ ನಾಯಕನ ಹೆಗಲಿಗೆ ಹೊಸ ಜವಾಬ್ದಾರಿ
ಎರಡು ಬಾರಿ ಟಿ20 ವಿಶ್ವಕಪ್ ಗೆಲ್ಲಿಸಿ ಕೊಟ್ಟ ಮಾಜಿ ನಾಯಕ ಡ್ಯಾರೆನ್ ಸ್ಯಾಮಿ ಅವರಿಗೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ದೊಡ್ಡ ಜವಾಬ್ದಾರಿ ನೀಡಿದೆ. ಡ್ಯಾರೆನ್ ಸ್ಯಾಮಿ ಅವರು ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಎಲ್ಲಾ ಮಾದರಿಯ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಕ್ರಿಕೆಟ್ ವೆಸ್ಟ್ ಇಂಡೀಸ್ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಿದೆ. ವೆಸ್ಟ್ ಇಂಡೀಸ್ ತಂಡವನ್ನು ಎರಡು ಬಾರಿ ಚಾಂಪಿಯನ್ ಮಾಡಿದ ಡ್ಯಾರೆನ್ ಸ್ಯಾಮಿ ಏಪ್ರಿಲ್ 1, 2025 ರಿಂದ ಮೊದಲು ಟೆಸ್ಟ್ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ಸೀಮಿತ ಓವರ್‌ಗಳ ತಂಡಗಳ ಹೆಡ್‌ಕೋಚ್ ಆಗಿ ಮುಂದುವರೆಯಲಿದ್ದಾರೆ.
ಡ್ಯಾರೆನ್ ಸ್ಯಾಮಿ ಅವರು 2023ರಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಹೆಡ್‌ಕೋಚ್ ಪಾತ್ರವನ್ನು ವಹಿಸಿಕೊಂಡರು. ನಂತರ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಕಟ್ಟುವಲ್ಲಿ ಅವರ ಪ್ರಯತ್ನಗಳಿಗಾಗಿ ಹೆಚ್ಚು ಪ್ರಶಂಸೆ ಗಳಿಸಿದರು. ಅವರ ತರಬೇತಿಯು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭರವಸೆಯ ಫಲಿತಾಂಶಗಳೊಂದಿಗೆ ವೆಸ್ಟ್ ಇಂಡೀಸ್ ತಂಡಕ್ಕೆ ಹೊಸ ಶಕ್ತಿಯನ್ನು ತಂದಿದೆ.

ವೆಸ್ಟ್ ಇಂಡೀಸ್ ಕ್ರಿಕೆಟ್‌ಗೆ ಸ್ಯಾಮಿ ಮಹತ್ವದ ಕೊಡುಗೆ ನೀಡಿದ್ದಾರೆ. 2012 ಮತ್ತು 2016 ರಲ್ಲಿ ವೆಸ್ಟ್ ಇಂಡೀಸ್ ತಂಡ ಟಿ20 ವಿಶ್ವಕಪ್ ಗೆಲ್ಲಲು ಪ್ರಮುಖ ಪಾತ್ರವಹಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ಅವರು ವೆಸ್ಟ್ ಇಂಡೀಸ್ ತಂಡವನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಹಳೆ ಖದರ್‌ಗೆ ತರಲು ಪ್ರಯತ್ನಿಸುತ್ತಿದ್ದಾರೆ. ಸ್ಯಾಮಿ ವಿಶ್ವ ಚಾಂಪಿಯನ್ ಆಟಗಾರ. ಹೀಗಾಗಿ ಅವರು ವೆಸ್ಟ್ ಇಂಡೀಸ್ ತಂಡವನ್ನು ಮತ್ತೊಮ್ಮೆ ವಿಶ್ವ ಚಾಂಪಿಯನ್ ಮಾಡಲು ಅವರ ಪಾತ್ರ ಬಹಳ ದೊಡ್ಡದಿದೆ.
ಪ್ರಸ್ತುತ ವೆಸ್ಟ್ ಇಂಡೀಸ್ ತಂಡ ಬಾಂಗ್ಲಾದೇಶದ ವಿರುದ್ಧ ಮೂರ ಮಾದರಿ ಕ್ರಿಕೆಟ್ ಸರಣಿಗಳಲ್ಲಿ ನಿರತವಾಗಿದೆ. ಬಾಂಗ್ಲಾದೇಶ ತಂಡದ ವಿರುದ್ಧ ಏಕದಿನ ಸರಣಿಯನ್ನು ಗೆದ್ದು, ಟೆಸ್ಟ್ ಸರಣಿಯಲ್ಲಿ ಡ್ರಾ ಸಾಧಿಸಿದೆ. ಇದಾದ ಬಳಿಕ ಬಾಂಗ್ಲಾದೇಶ 3 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ವೆಸ್ಟ್ ಇಂಡೀಸ್ ಉಳಿದ ಪಂದ್ಯಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications