ನ್ಯೂಜಿಲೆಂಡ್‌ನ ಸ್ಟಾರ್ ಬ್ಯಾಟರ್ ಡೇರಿಲ್ ಮಿಚೆಲ್ ಶನಿವಾರ ಇತಿಹಾಸ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಅವರು ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 2000 ರನ್ ಗಳಿಸಿದ ನ್ಯೂಜಿಲೆಂಡ್ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶನಿವಾರ ಪಾಕಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 43 ರನ್ ಗಳಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಅವರು ಆಂಡ್ರ್ಯೂ ಜೋನ್ಸ್ ಅವರ ದಾಖಲೆಯನ್ನು ಮುರಿದ್ದಾರೆ.
ಮಿಚೆಲ್ ಕೇವಲ ಏಕದಿನ ಕ್ರಿಕೆಟ್‌ನಲ್ಲಿ 47 ಇನ್ನಿಂಗ್ಸ್‌ಗಳಲ್ಲಿ 2000 ರನ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಅವರು 52 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಆಂಡ್ರ್ಯೂ ಜೋನ್ಸ್ ದಾಖಲೆಯನ್ನು ಮುರಿದಿದ್ದಾರೆ.

ಮಿಚೆಲ್ 2000 ಏಕದಿನ ರನ್‌ಗಳನ್ನು ವೇಗವಾಗಿ ಗಳಿಸಿದ ವಿಶ್ವದ 8 ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಇಂಗ್ಲೆಂಡ್‌ನ ಜೊನಾಥನ್ ಟ್ರಾಟ್ ಮತ್ತು ವೆಸ್ಟ್ ಇಂಡೀಸ್‌ನ ಶೈ ಹೋಪ್ ಅವರೊಂದಿಗೆ ಈ ಸ್ಥಾನದಲ್ಲಿದ್ದಾರೆ. ಇಬ್ಬರೂ 47 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರು. ಭಾರತದ ಉಪನಾಯಕ ಶುಭಮನ್ ಗಿಲ್ ಏಕದಿನ ಕ್ರಿಕೆಟ್‌ನಲ್ಲಿ 2000 ರನ್ ಗಳಿಸಿದ ಅತ್ಯಂತ ವೇಗದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಕೇವಲ 38 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರು.
ಪಾಕಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಇನ್ನಿಂಗ್ಸ್‌ನ 20ನೇ ಓವರ್‌ನಲ್ಲಿ ಫಹೀಮ್ ಅಶ್ರಫ್ ಅವರ ಮೊದಲ ಎಸೆತದಲ್ಲಿ ಒಂದು ರನ್ ಗಳಿಸುವ ಮೂಲಕ ಅವರು ಈ ಸಾಧನೆ ಮಾಡಿದರು. ಮಿಚೆಲ್ ಇದುವರೆಗೆ 47 ಇನ್ನಿಂಗ್ಸ್‌ಗಳಲ್ಲಿ 48.59 ಸರಾಸರಿಯಲ್ಲಿ 2041 ರನ್ ಗಳಿಸಿದ್ದಾರೆ.
ಮಳೆಯಿಂದಾಗಿ ಮೂರನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಿ 8 ವಿಕೆಟ್ ನಷ್ಟಕ್ಕೆ 264 ರನ್ ಕಲೆ ಹಾಕಿತು. ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯವನ್ನು 42 ಓವರ್‌ಗಳಿಗೆ ಇಳಿಸಲಾಯಿತು. ರೈಸ್ ಮಾರಿಯೋ ಮತ್ತು ಮೈಕೆಲ್ ಬ್ರೇಸ್‌ವೆಲ್ ಅರ್ಧಶತಕಗಳ ನೆರವಿನಿಂದ ಕಿವೀಸ್ ಪಡೆ 250 ಕ್ಕೂ ಹೆಚ್ಚು ರನ್ ಗಳಿಸಲು ಸಾಧ್ಯವಾಯಿತು. ಪಾಕಿಸ್ತಾನ ಪರ ಆಕಿಬ್ ಜಾವೇದ್ 4 ವಿಕೆಟ್ ಪಡೆದರು.
ನ್ಯೂಜಿಲೆಂಡ್ ನೀಡಿದ 265 ರನ್‌ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ಉತ್ತಮ ಆರಂಭ ಕಾಣಲ್ಲಿಲ್ಲ. ಬಾಬರ್ ಅಜಮ್ ಅರ್ಧಶತಕ ಗಳಿಸಿದ್ದು ಬಿಟ್ಟರೆ, ಉಳಿದೆಲ್ಲ ಬ್ಯಾಟರ್‍ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 40 ಓವರ್‍ಗಳಲ್ಲಿ 221 ರನ್‌ಗೆ ಪಾಕಿಸ್ತಾನ ಆಲೌಟಾಯಿತು. ನ್ಯೂಜಿಲೆಂಡ್ ಪರ ಬೆನ್ ಸಿಯರ್ಸ್ 5 ವಿಕೆಟ್ ಉರುಳಿಸಿ ಸಂಭ್ರಮಿಸಿದರು.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ನ್ಯೂಜಿಲೆಂಡ್ ಪ್ರವಾಸದಲ್ಲಿ ಪಾಕಿಸ್ತಾನ ಮೊದಲು 4-1 ಅಂತರದರಲ್ಲಿ ಟಿ20 ಸರಣಿ ಸೋಲು ಕಂಡಿತ್ತು. ಇದೀಗ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕಳೆದುಕೊಂಡಿದೆ.