Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

David Warner: ಏಕದಿನ ಕ್ರಿಕೆಟ್‌ಗೂ ವಿದಾಯ ಘೋಷಿಸಿದ ಡೇವಿಡ್ ವಾರ್ನರ್

ವಿಶ್ವ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ಆಸ್ಟ್ರೇಲಿಯಾ ಡೇವಿಡ್ ವಾರ್ನರ್‌ ಟೆಸ್ಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿ ಅಚ್ಚರಿ ಮೂಡಿಸಿದ್ದರು. ಈಗ ಕೊನೆಯ ಟೆಸ್ಟ್‌ ಪಂದ್ಯವನ್ನು ಆಡುವ ಮುನ್ನವೇ ಟೆಸ್ಟ್‌ ಕ್ರಿಕೆಟ್‌ಗೂ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಹೊಸ ವರ್ಷದ ಮೊದಲ ದಿನವೇ ದೊಡ್ಡ ಘೋಷಣೆ ಮಾಡಿದರು. ಸೋಮವಾರ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇದೀಗ ಏಕದಿನ ಕ್ರಿಕೆಟ್‌ನಿಂದಲೂ ನಿವೃತ್ತಿಯಾಗುತ್ತಿರುವುದಾಗಿ ತಿಳಿಸಿದ್ದಾರೆ.

David Warner: David Warner announced retirement to ODI cricket

ಈಗಾಗಲೇ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್ ತೊರೆಯಲು ನಿರ್ಧರಿಸಿದ್ದರು. ಜನವರಿ 3 ರಿಂದ ಸಿಡ್ನಿಯಲ್ಲಿ ಪ್ರಾರಂಭವಾಗುವ ಪಾಕಿಸ್ತಾನ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯವು ಅವರ ವೃತ್ತಿಜೀವನದ ಕೊನೆಯ ಟೆಸ್ಟ್ ಪಂದ್ಯವಾಗಿದೆ.

ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿ ತನ್ನ ವೃತ್ತಿಜೀವನದ ಕೊನೆಯ ಟೆಸ್ಟ್ ಸರಣಿ ಎಂದು ವಾರ್ನರ್ ಬಹಳ ಹಿಂದೆಯೇ ಘೋಷಿಸಿದ್ದರು. ಈ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಅವರಿಗೆ ವಿಶೇಷ ವಿದಾಯ ನೀಡಲು ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಸಿದ್ಧತೆ ನಡೆಸಿದೆ.

ವಾರ್ನರ್ ಇದೀಗ ಏಕದಿನ ಕ್ರಿಕೆಟ್‌ಗೆ ನಿವೃತ್ತಿಯ ಬಗ್ಗೆ ಮಾಹಿತಿ ನೀಡುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಎರಡು ವರ್ಷಗಳಲ್ಲಿ ಟಿ 20 ಕ್ರಿಕೆಟ್ ಆಡುವಾಗ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದರೆ ಮತ್ತು ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಆಸ್ಟ್ರೇಲಿಯಾಕ್ಕೆ ಅಗತ್ಯವಿದ್ದರೆ ಆಡುವುದಾಗಿ ತಿಳಿಸಿದ್ದಾರೆ.

David Warner: David Warner announced retirement to ODI cricket

ವಾರ್ನರ್ ಹೇಳಿದ್ದೇನು?

'ನಾನು ಖಂಡಿತವಾಗಿಯೂ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿದ್ದೇನೆ. ವಿಶ್ವಕಪ್‌ನಲ್ಲಿಯೇ ನಾನು ಯೋಚಿಸಿದ ವಿಷಯ ಇದು. ಇಂದು ನಾನು ಈ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳುವ ಸಮಯ ಬಂದಿದೆ ಎಂದು ನಿರ್ಧರಿಸಿದ್ದೆ. ಈ ನಿರ್ಧಾರದ ನಂತರ ನನಗೆ ವಿಶ್ವದಾದ್ಯಂತ ಟಿ20 ಲೀಗ್‌ಗಳಲ್ಲಿ ಆಡುವ ಅವಕಾಶ ಸಿಗಲಿದೆ. ಮುಂಬರುವ ಎರಡು ವರ್ಷಗಳಲ್ಲಿ ನಾನು ಉತ್ತಮ ಕ್ರಿಕೆಟ್ ಆಡುವುದನ್ನು ಮುಂದುವರಿಸಿದರೆ ಮತ್ತು ಆಸ್ಟ್ರೇಲಿಯಾಕ್ಕೆ ನನ್ನ ಅಗತ್ಯವಿದ್ದಲ್ಲಿ, ನಾನು ಲಭ್ಯವಿರಲಿದ್ದೇನೆ ಎಂದು ತಿಳಿಸಿದ್ದಾರೆ.

ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್‌ನಲ್ಲಿ 6932 ರನ್ ಗಳಿಸಿದ್ದಾರೆ. ಅವರು ಆಸ್ಟ್ರೇಲಿಯಾ ಪರ 161 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಅವರು ಎರಡು ಬಾರಿ ವಿಶ್ವಕಪ್ ವಿಜೇತ ತಂಡದ ಸದಸ್ಯ. ODI ಕ್ರಿಕೆಟ್‌ನಲ್ಲಿ, ಡೇವಿಡ್ ವಾರ್ನರ್ ಅವರ ಬ್ಯಾಟಿಂಗ್ ಸರಾಸರಿ 45.30 ಮತ್ತು ಸ್ಟ್ರೈಕ್ ರೇಟ್ 97.26 ಆಗಿದೆ. ಈ ಮಾದರಿಯಲ್ಲಿ ಅವರು 22 ಶತಕಗಳನ್ನು ಗಳಿಸಿದ್ದಾರೆ.

ಟೆಸ್ಟ್‌ ಕ್ರಿಕೆಟ್ನಲ್ಲಿ ಅವರ ಖಾತೆಯಲ್ಲಿ ಹೆಚ್ಚು ರನ್‌ಗಳು ದಾಖಲಾಗಿವೆ. ವಾರ್ನರ್ 111 ಟೆಸ್ಟ್ ಪಂದ್ಯಗಳಲ್ಲಿ 44.58 ಸರಾಸರಿಯಲ್ಲಿ 8695 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 26 ಶತಕಗಳನ್ನು ಗಳಿಸಿದ್ದಾರೆ.

Story first published: Monday, January 1, 2024, 12:44 [IST]
Other articles published on Jan 1, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+