For Quick Alerts
ALLOW NOTIFICATIONS  
For Daily Alerts
 

ಏಕದಿನ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಡೇವಿಡ್ ವಾರ್ನರ್

David Warner Opens Up About His Presence In Team For ODI Worldcup 2023

2023ರಲ್ಲಿ ಭಾರತದಲ್ಲಿ ನಡೆಯಲಿರುವ 50 ಓವರ್‌ಗಳ ವಿಶ್ವಕಪ್‌ನಲ್ಲಿ ಆಡಲು ಸಿದ್ಧವಿದ್ದೇನೆ ಎಂದು ಡೇವಿಡ್ ವಾರ್ನರ್ ಹೇಳಿದ್ದಾರೆ. ಆದರೆ, ಆಸ್ಟ್ರೇಲಿಯಾ ತಂಡದ ಆಡಳಿತ ಮಂಡಳಿ ತಂಡದಿಂದ ಹೊರಗಿರಬೇಕು ಎಂದರೆ ಹೊರಹೋಗುವುದಾಗಿ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಫಾರ್ಮ್ ಕಂಡುಕೊಳ್ಳಲು ಪರದಾಡುತ್ತಿದ್ದ ಡೇವಿಡ್ ವಾರ್ನರ್, ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಗಳಿಸುವ ಮೂಲಕ ಫಾರ್ಮ್‌ಗೆ ಮರಳಿದರು. ಡೇವಿಡ್ ವಾರ್ನರ್ ದ್ವಿಶತಕದ ನೆರವಿನಿಂದ ಬೃಹತ್ ಮುನ್ನಡೆ ಗಳಿಸಿದ್ದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಇನ್ನಿಂಗ್ಸ್ ಮತ್ತು 182 ರನ್‌ಗಳಿಂದ ಗೆಲುವು ಸಾಧಿಸಿತು.

ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಪಂದ್ಯದ ಆಟಗಾರ ಪ್ರಶಸ್ತಿ ಪಡೆದ ನಂತರ ಮಾತನಾಡಿದ ಡೇವಿಡ್ ವಾರ್ನರ್, "2023ರ ಏಕದಿನ ವಿಶ್ವಕಪ್‌ನಲ್ಲಿ ಆಡಲು ನಾನು ಬದ್ಧನಾಗಿದ್ದೇನೆ" ಎಂದು ಹೇಳಿದರು.

"ನಾನು ಫಿಟ್ ಆಗಿರುತ್ತೇನೆ, ರನ್ ಗಳಿಸಲು ಪ್ರಯತ್ನ ಮಾಡುತ್ತೇನೆ. ಆದರೆ, ಟೀಂ ಮ್ಯಾನೇಜ್‌ಮೆಂಟ್ ನೀವು ತಂಡದಿಂದ ಹೊರಗುಳಿಯಲು ಇದು ಸರಿಯಾದ ಸಮಯ ಎಂದರೆ, ತಂಡದಿಂದ ಹೊರಹೋಗಲು ಸಿದ್ದ" ಎಂದು ಡೇವಿಡ್ ವಾರ್ನರ್ ಹೇಳಿದರು.

ಡೇವಿಡ್ ವಾರ್ನರ್ ತಮ್ಮ 100ನೇ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ 10ನೇ ಆಟಗಾರ ಮತ್ತು ದ್ವಿಶತಕ ಗಳಿಸಿದ ಎರಡನೇ ಆಟಗಾರ ಎನ್ನುವ ಖ್ಯಾತಿಗೆ ಭಾಜನರಾದರು. "ದೊಡ್ಡ ಪಂದ್ಯದಲ್ಲಿ ಪ್ರದರ್ಶನ ನೀಡುವ ಸಾಮರ್ಥ್ಯ ನನಗೆ ಇದೆ ಎಂದು ತಿಳಿದಿತ್ತು." ಎಂದು ವಾರ್ನರ್ ಹೇಳಿದರು.

ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 2-0 ಮುನ್ನಡೆ ಸಾಧಿಸಿದೆ. 2023ರ ಜನವರಿ 4ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಡೇವಿಡ್ ವಾರ್ನರ್ ತಮ್ಮ ಫಾರ್ಮ್ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.

David Warner Opens Up About His Presence In Team For ODI Worldcup 2023

ತಂಡದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ವಾರ್ನರ್

ಎರಡನೇ ಟೆಸ್ಟ್ ಪಂದ್ಯದಲ್ಲಿ ತಂಡ ಅತ್ಯುತ್ತಮ ಪ್ರದರ್ಶನ ನೀಡಿತು ಎಂದು ವಾರ್ನರ್ ತಂಡದ ಆಟಗಾರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕ್ಯಾಮರೂನ್ ಗ್ರೀನ್ ಮತ್ತು ಮಿಚೆಲ್ ಸ್ಟಾರ್ಕ್ ಗಾಯಗೊಂಡ ಬಳಿಕವೂ ಆಟವನ್ನು ಮುಂದುವರೆಸಿದ್ದಕ್ಕೆ ಅವರು ಅಚ್ಚರಿ ವ್ಯಕ್ತಪಡಿಸಿದರು. ಅಲೆಕ್ಸ್ ಕ್ಯಾರಿ ಕೂಡ ಅದ್ಭುತ ಶತಕ ಗಳಿಸಿದರು. ತುಂಬಿದ ಕ್ರೀಡಾಂಗಣದಲ್ಲಿ 100ನೇ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಸಂತಸವಾಗುತ್ತಿದೆ ಎಂದು ವಾರ್ನರ್ ಹೇಳಿದರು.

ಡೇವಿಡ್ ವಾರ್ನರ್ ಉತ್ತಮ ಬ್ಯಾಟಿಂಗ್ ಬಗ್ಗೆ ನಾಯಕ ಪ್ಯಾಟ್ ಕಮ್ಮಿನ್ಸ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದರು. 2023ರ ಏಕದಿನ ವಿಶ್ವಕಪ್‌ನಲ್ಲಿ ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

Story first published: Thursday, December 29, 2022, 15:31 [IST]
Other articles published on Dec 29, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+