David Warner: ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಸುಳಿವು ನೀಡಿದ ಆಸೀಸ್ ಆರಂಭಿಕ ಡೇವಿಡ್ ವಾರ್ನರ್; ಯಾವಾಗ?
ಜೂನ್ 7ರಿಂದ ಆರಂಭವಾಗುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ನಂತರ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ, ಪ್ರಮುಖ ಆಶಸ್ ಸರಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
2024ರ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ವರ್ಷ ಜನವರಿಯಲ್ಲಿ ಪಾಕಿಸ್ತಾನ ವಿರುದ್ಧದ ಸ್ವದೇಶಿ ಸರಣಿಯೊಂದಿಗೆ ತನ್ನ ಟೆಸ್ಟ್ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದೇನೆ ಎಂದು ಆಸ್ಟ್ರೇಲಿಯಾ ಅನುಭವಿ ಬ್ಯಾಟರ್ ಡೇವಿಡ್ ವಾರ್ನರ್ ಬಹಿರಂಗಪಡಿಸಿದ್ದಾರೆ. ವೆಸ್ಟ್ ಇಂಡೀಸ್ ಸರಣಿಗೂ ಮುನ್ನ ನಿವೃತ್ತಿ ಹೇಳಿ, ತಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ನಿರ್ಧರಿಸಿದ್ದಾರೆ.

ಎಡಗೈ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರು ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಪಾಕಿಸ್ತಾನ ವಿರುದ್ಧ 2024ರ ಹೊಸ ವರ್ಷದ ಟೆಸ್ಟ್ ನಂತರ ಸುದೀರ್ಘ ಸ್ವರೂಪದ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಬಯಕೆಯನ್ನು ಹೊರಹಾಕಿದ್ದಾರೆ.
ಡೇವಿಡ್ ವಾರ್ನರ್ ಸ್ವಲ್ಪ ಸಮಯದಿಂದ ನಿವೃತ್ತಿಯ ಬಗ್ಗೆ ಆಲೋಚಿಸುತ್ತಿದ್ದಾರೆ ಮತ್ತು 2024ರ ಟಿ20 ವಿಶ್ವಕಪ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಸ್ಟ್ರೇಲಿಯಾ ತಂಡದ ಪರ ತಮ್ಮ ಅಂತಿಮ ಪ್ರದರ್ಶನವಾಗಿರಲಿದೆ. ಹೀಗಾಗಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ನಂತರ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಭಾಗವಹಿಸುವುದಿಲ್ಲ ಎಂದು ಡೇವಿಡ್ ವಾರ್ನರ್ ಸ್ಪಷ್ಟವಾಗಿ ತಿಳಿಸಿದ್ದಾರೆ.
"ನಾವು ಇಲ್ಲಿ ರನ್ ಗಳಿಸಬೇಕಾಗಿದೆ. ನಾನು ಯಾವಾಗಲೂ 2024ರ ಟಿ20 ವಿಶ್ವಕಪ್ ಬಹುಶಃ ನನ್ನ ಅಂತಿಮ ಪಂದ್ಯ ಎಂದು ಹೇಳುತ್ತಿದ್ದೆ," ಎಂದು ಶನಿವಾರ ಜೂನ್ 3ರಂದು ಡೇವಿಡ್ ವಾರ್ನರ್ ಉಲ್ಲೇಖಿಸಿದ್ದಾರೆ.

"ನಾನು ನನಗೆ ಮತ್ತು ನನ್ನ ಕುಟುಂಬಕ್ಕೆ ಋಣಿಯಾಗಿದ್ದೇನೆ. ನಾನು ಸದ್ಯ ರನ್ ಗಳಿಸಲು ಮತ್ತು ಆಸ್ಟ್ರೇಲಿಯಾದಲ್ಲಿ ಮತ್ತೆ ಆಡಲು ಮುಂದುವರಿಸಲು ಸಾಧ್ಯವಾದರೆ, ನಾನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯನ್ನು ಆಡುವುದಿಲ್ಲ ಎಂದು ನಾನು ಖಂಡಿತವಾಗಿ ಹೇಳಬಲ್ಲೆ," ಎಂದು ಡೇವಿಡ್ ವಾರ್ನರ್ ಹೇಳಿದ್ದಾರೆ.
ಭಾರತ ವಿರುದ್ಧದ ಬಹು ನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಮುಂಚಿತವಾಗಿ, ಆಸ್ಟ್ರೇಲಿಯಾದ ಅನುಭವಿ ಬ್ಯಾಟರ್ ಡೇವಿಡ್ ವಾರ್ನರ್ ತಮ್ಮ ನಿವೃತ್ತಿ ಯೋಜನೆಯನ್ನು ಹೊರಹಾಕಿದ್ದು ದೊಡ್ಡ ಸುದ್ದಿಯಾಗಿದೆ.
ಡೇವಿಡ್ ವಾರ್ನರ್ 2011ರಿಂದ ಆಸ್ಟ್ರೇಲಿಯಾ ಟೆಸ್ಟ್ ತಂಡದ ಅವಿಭಾಜ್ಯ ಅಂಗವಾಗಿದ್ದರೂ, ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನದಿಂದಾಗಿ ತಂಡದಲ್ಲಿ ಅವರ ಸ್ಥಾನವು ಕಳೆದ ಒಂದೂವರೆ ವರ್ಷದಿಂದ ತೂಗುಯ್ಯಾಲೆಯಲ್ಲಿದೆ. 36 ವರ್ಷದ ಡೇವಿಡ್ ವಾರ್ನರ್ ಪ್ರಸ್ತುತ ಭಾರತದ ವಿರುದ್ಧದ ಫೈನಲ್ ಪಂದ್ಯಕ್ಕೆ ತಯಾರಿ ನಡೆಸುತ್ತಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಆಶಸ್ ಸರಣಿಯ ನಂತರ ಆಸ್ಟ್ರೇಲಿಯಾ ತಂಡ ಡಿಸೆಂಬರ್ 14ರ ಗುರುವಾರದಿಂದ ಪಾಕಿಸ್ತಾನ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ತವರಿನಲ್ಲಿ ಆಡಲಿದೆ.
ಡೇವಿಡ್ ವಾರ್ನರ್ ಇಲ್ಲಿಯವರೆಗೆ 103 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು, ಇದರಲ್ಲಿ ಅವರು 45.57ರ ಸರಾಸರಿಯಲ್ಲಿ 8158 ರನ್ ಗಳಿಸಿದ್ದಾರೆ. ಅವರ ಟೆಸ್ಟ್ ವೃತ್ತಿ ಜೀವನದಲ್ಲಿ 25 ಶತಕಗಳು ಮತ್ತು 34 ಅರ್ಧಶತಕಗಳನ್ನು ಬಾರಿಸಿದ್ದಾರೆ.
2019ರ ನವೆಂಬರ್‌ನಲ್ಲಿ ಪಾಕಿಸ್ತಾನದ ವಿರುದ್ಧ ಅಡಿಲೇಡ್ ಓವಲ್‌ನಲ್ಲಿ ಡೇವಿಡ್ ವಾರ್ನರ್ ಅವರ ಅಜೇಯ 335 ರನ್ ಗರಿಷ್ಠ ಸ್ಕೋರ್ ಆಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications