ವಿರಾಟ್ ಕೊಹ್ಲಿ ದಾಖಲೆ ಮುಟ್ಟಲೂ ಸಾಧ್ಯವಿಲ್ಲ ಎಂದ ಆಸ್ಟ್ರೇಲಿಯಾ ಆಟಗಾರ

ಸಿಡ್ನಿ: ಪ್ರಸ್ತುತ ದಿನಗಳಲ್ಲಿ ವಿಶ್ವಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ವಿರಾಟ್ ಕೊಹ್ಲಿ ಮುಂಚೂಣಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. 'ಕ್ರಿಕೆಟ್ ದೇವರು' ಖ್ಯಾತಿಯ ಸಚಿನ್ ತೆಂಡೂಲ್ಕರ್ ಅವರ ಶತಕದ ಶತಕ ದಾಖಲೆ ಮುರಿಯಬಲ್ಲ ಆಟಗಾರನಿದ್ದರೆ ಅದು ಕೊಹ್ಲಿ ಎಂಬ ಮಾತುಗಳು ಕ್ರಿಕೆಟ್ ವಲಯದಲ್ಲಿ ಆಗಾಗ ಕೇಳಿಬರುತ್ತಿರುತ್ತವೆ.
ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಿ ಇನ್‌ಸ್ಟಾಗ್ರಾಮ್ ಪೋಸ್ಟ್ ಹಾಕಿಕೊಂಡಿದ್ದಾರೆ. ವಿರಾಟ್ ಕೊಹ್ಲಿಯ ರನ್ ದಾಖಲೆಯನ್ನು ಮುರಿಯೋದಿರಲಿ ನಮ್ಮಿಂದ ಮುಟ್ಟಲೂ ಸಾಧ್ಯವಿಲ್ಲ ಎಂದು ವಾರ್ನರ್ ಹೇಳಿದ್ದಾರೆ.
ಸಕ್ರಿಯ ಆಟಗಾರರಲ್ಲಿ ಅತ್ಯಧಿಕ ಅಂತಾರಾಷ್ಟ್ರೀಯ ಶತಕಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. 70 ಶತಕಗಳೊಂದಿಗೆ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, 43 ಶತಕಗಳೊಂದಿಗೆ ವಾರ್ನರ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯ ಫೋಟೋವನ್ನು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಾಕಿಕೊಂಡಿದ್ದ ವಾರ್ನರ್, ''ಸತ್ಯ ಹೇಳಬೇಕೆಂದರೆ ಕೊಹ್ಲಿಯನ್ನು ನಮಗೆ ಮುಟ್ಟಲೂ ಸಾಧ್ಯವಿಲ್ಲ' ಎಂದು ಬರೆದುಕೊಂಡಿದ್ದಾರೆ.
ಅತ್ಯಧಿಕ ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ಸಕ್ರಿಯ ಆಟಗಾರರಲ್ಲಿ ಕೊಹ್ಲಿ (70 ಶತಕ), ವಾರ್ನರ್ (43), ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ (42), ಭಾರತದ ರೋಹಿತ್ ಶರ್ಮಾ (40), ನ್ಯೂಜಿಲೆಂಡ್‌ನ ರಾಸ್ ಟೇಲರ್ (40) ಅಗ್ರ 5 ಸ್ಥಾನಗಳಲ್ಲಿದ್ದಾರೆ. ಕೊಹ್ಲಿ ಟೆಸ್ಟ್‌ನಲ್ಲಿ 27, ಏಕದಿನ ಕ್ರಿಕೆಟ್‌ನಲ್ಲಿ 43 ಶತಕಗಳ ದಾಖಲೆ ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications