ಐಪಿಎಲ್ 2018ರಿಂದ ಸ್ಮಿತ್, ವಾರ್ನರ್ ಔಟ್

Posted By:
David Warner, Steve Smith banned from IPL 2018

ಬೆಂಗಳೂರು, ಮಾರ್ಚ್ 28: ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್ ಟೌನ್ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಅವರನ್ನು ಐಪಿಎಲ್ 2018ರಿಂದ ಹೊರಗಿಡಲಾಗಿದೆ. ಇಬ್ಬರು ಆಟಗಾರರು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡುತ್ತಿಲ್ಲ ಎಂದು ಐಪಿಎಲ್ ಆಯುಕ್ತ ರಾಜೀವ್ ಶುಕ್ಲಾ ಸ್ಪಷ್ಟಪಡಿಸಿದ್ದಾರೆ.

ಐಪಿಎಲ್ 2018ರ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕತ್ವ ಹಾಗೂ ಆಸ್ಟ್ರೇಲಿಯಾದ ಉಪ ನಾಯಕತ್ವವನ್ನು ಡೇವಿಡ್ ವಾರ್ನರ್ ತೊರೆದಿದ್ದಾರೆ. ಮತ್ತೊಬ್ಬ ಆರೋಪಿ ಸ್ಟೀವ್ ಸ್ಮಿತ್ ಅವರು ಆಸ್ಟ್ರೇಲಿಯಾದ ನಾಯಕತ್ವ ಹಾಗೂ ಐಪಿಎಲ್ 2018ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವವನ್ನು ತೊರೆದಿದ್ದರು.

ಸ್ಮಿತ್, ವಾರ್ನರ್ ಹಾಗೂ ಬಾನ್ ಕ್ರಾಫ್ಟ್ ಮೂವರು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಮರಳಿದ್ದು, ಬದಲಿ ಆಟಗಾರರನ್ನು ಹೆಸರಿಸಲಾಗಿದೆ. ಆದರೆ, ತಂಡದ ಕೋಚ್ ಡರೇನ್ ಲೆಹ್ಮನ್ ಅವರು ಮಾತ್ರ ಶಿಕ್ಷೆಯಿಂದ ಬಚಾವಾಗಿದ್ದಾರೆ. ಸ್ಮಿತ್ ಹಾಗೂ ವಾರ್ನರ್ ಅವರಿಗೆ ಒಂದು ವರ್ಷಗಳ ಕಾಲ ನಿಷೇಧ ಹೇರಿ, ಕ್ರಿಕೆಟ್ ಆಸ್ಟ್ರೇಲಿಯಾ ಆದೇಶ ಹೊರಡಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ವೇಳೆ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್​ಮನ್ ಕ್ಯಾಮರೂನ್ ಬ್ಯಾಂಕ್ರಾಫ್ಟ್ ಅವರು ಸಣ್ಣ ಚಿಪ್ ಬಳಸಿ ಚೆಂಡನ್ನು ವಿರೂಪಗೊಳಿಸಲು ಯತ್ನಿಸಿದ ವಿಡಿಯೋ ವೈರಲ್ ಆಗಿತ್ತು.

ಈ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ ಸಮಿತಿ ಕ್ರಮ ಜರುಗಿಸಿದೆ. ಆದರೆ, ಸ್ಟೀವ್ ಸ್ಮಿತ್ ಪ್ರತಿಕ್ರಿಯಿಸಿ, ಇದರಲ್ಲಿ ಕೋಚ್​ಗಳ ಪಾತ್ರವಿಲ್ಲ. ಆಟಗಾರರು ಮಾತ್ರವೇ ಇದರಲ್ಲಿದ್ದಾರೆ. ಬ್ಯಾಂಕ್ರಾಫ್ಟ್ ವರ್ತನೆಗೆ ವಿಷಾದವಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಫ್ಯಾಂಟಸಿ ಲೀಗ್ ನಲ್ಲಿ ಆಡಲು ಇಲ್ಲಿ ಕ್ಲಿಕ್ ಮಾಡಿ

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Wednesday, March 28, 2018, 15:39 [IST]
Other articles published on Mar 28, 2018

myKhel ನಿಂದ ತಾಜಾ ಸುದ್ದಿಗಳನ್ನು ಪಡೆಯಿರಿ