ಅಂಜಿಕೆಯಿಲ್ಲದೆ ಕೋವಿಡ್ ವಾಕ್ಸಿನ್ ಹಾಕಿಸಲು 'ಗಬ್ಬರ್' ಧವನ್ ಮನವಿ

ನವದೆಹಲಿ: ಟೀಮ್ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್, ಡೆಲ್ಲಿ ಕ್ಯಾಪಿಟಲ್ಸ್‌ನ ಪ್ರಮುಖ ಆಟಗಾರ ಶಿಖರ್ ಧವನ್ ಕೋವಿಡ್-19 ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ಜನರೂ ಕೂಡ ಯಾವುದೇ ಅಂಜಿಕೆಯಿಲ್ಲದೆ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಧವನ್ ವಿನಂತಿಸಿಕೊಂಡಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ದ್ವಿತೀಯ ಅಲೆ ಗಂಭೀರವಾಗಿ ಸೋಂಕು ಹರಡಿಸುತ್ತಿದೆ. ಹೀಗಾಗಿ ಜನ ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಸರ್ಕಾರ ಸೂಚನೆ ನೀಡುತ್ತಿದೆ. ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು 14ನೇ ಆವೃತ್ತಿಯ ಐಪಿಎಲ್‌ಗೂ ಕಂಟಕ ತಂದಿದೆ. ಕೊರೊನಾದಿಂದಾಗಿ 2021ರ ಐಪಿಎಲ್ ಅಮಾನತುಗೊಂಡಿದೆ.
ಐಪಿಎಲ್ ಬಯೋಬಬಲ್‌ಗೆ ಪ್ರವೇಶಿಸಿದ್ದ ಕೋವಿಡ್ ಸೋಂಕು ನಗದು ಶ್ರೀಮಂತ ಟೂರ್ನಿ ಅಮಾನತಿಗೆ ಕಾರಣವಾಗಿತ್ತು. ಡೆಲ್ಲಿ ಕ್ಯಾಪಿಟಲ್ಸ್‌ನ ಅಕ್ಷರ್ ಪಟೇಲ್, ಸ್ಪಿನ್ನರ್ ಅಮಿತ್ ಮಿಶ್ರಗೂ ಸೋಂಕು ತಗುಲಿತ್ತು. ಅಲ್ಲದೆ ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳಲ್ಲೂ ಪ್ರಕರಣಗಳು ಕಾಣಿಸಿಕೊಂಡಿದ್ದವು.
ತಾನು ವ್ಯಾಕ್ಸಿನ್ ತೆಗೆದುಕೊಳ್ಳುತ್ತಿರುವ ಚಿತ್ರ ಹಂಚಿಕೊಂಡಿರುವ ಧವನ್, 'ವ್ಯಾಕ್ಸಿನ್ ಹಾಕಿಸಿಕೊಂಡಿದ್ದೇನೆ. ಕೊರೊನಾ ವಾರಿಯರ್ಸ್ ತ್ಯಾಗ, ಬದ್ಧತೆಗೆ ಎಲ್ಲರಿಗೂ ಧನ್ಯವಾದ ತಿಳಿಸಲು ಸಾಧ್ಯವಿಲ್ಲ. ಯಾರೂ ಅಂಜಿಕೊಳ್ಳಬೇಡಿ. ಸಾಧ್ಯವಾದಷ್ಟು ಬೇಗ ವ್ಯಾಕ್ಸಿನ್ ಹಾಕಿಸಿಕೊಳ್ಳಿ. ಇದು ವೈರಸ್ ಸೋಲಿಸಲು ನೆರವಾಗಲಿದೆ' ಎಂದು ಬರೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications