
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ದಾಖಲಿಸಿದೆ. ಐಪಿಎಲ್ 13ನೇ ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ನೀಡಿದ್ದ 180ರನ್‌ಗಳ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಪರ ಶಿಖರ್ ಧವನ್ ಭರ್ಜರಿ ಶತಕದೊಂದಿಗೆ ಗುರಿ ಮುಟ್ಟಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಚೆನ್ನೈ ಪರ ಆರಂಭಿಗ ಬ್ಯಾಟ್ಸ್‌ಮನ್ ಸ್ಯಾಮ್ ಕರ್ರನ್ ಅವರನ್ನು ಬೇಗನೆ ಕಳೆದುಕೊಂಡಿತು. ಫಾಫ್ ಡುಪ್ಲೆಸಿಸ್ ಅರ್ಧಶತಕ (58) ಹಾಗೂ ಶೇನ್ ವ್ಯಾಟ್ಸನ್ 36, ಅಂಬಟಿ ರಾಯುಡು ಅಜೇಯ 45 ಹಾಗೂ ರವೀಂದ್ರ ಜಡೇಜಾ 13 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿ ತಂಡಕ್ಕೆ ಸ್ಪರ್ಧಾತ್ಮಕ ಮೊತ್ತ ತಂದುಕೊಟ್ಟರು.
ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಿಂದ ಸಿಎಸ್‌ಕೆ ನಿಗದಿತ 20 ಓವರ್‌ಗಳಲ್ಲಿ 4ವಿಕೆಟ್ ನಷ್ಟಕ್ಕೆ 179 ರನ್ ಗಳಿಸಲು ಸಾಧ್ಯವಾಯಿತು.
ಚೆನ್ನೈ ನೀಡಿದ 180ರನ್ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೊದಲ ಓವರ್‌ನಲ್ಲಿ ಆರಂಭಿಕ ಪೃಥ್ವಿ ಶಾ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಅಜಿಂಕ್ಯಾ ರಹಾನೆ ಕೂಡ ಕೇವಲ 8 ರನ್‌ಗೆ ವಿಕೆಟ್ ಒಪ್ಪಿಸಿದ್ರು.
ಆದರೆ ಐಪಿಎಲ್ ಇತಿಹಾಸದಲ್ಲಿ ಚೊಚ್ಚಲ ಶತಕ ಸಿಡಿಸಿದ ಓಪನರ್ ಶಿಖರ್ ಧವನ್ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು. ಗಬ್ಬರ್ ಶಿಖರ್ ಧವನ್ ಅಜೇಯ 101ರನ್ ಕಲೆಹಾಕಿದ್ರೆ, ಶ್ರೇಯಸ್ ಅಯ್ಯರ್ 23, ಮಾರ್ಕಸ್ ಸ್ಟೋಯ್ನಿಸ್ 24, ಹಾಗೂ ಕೊನೆಯ ಓವರ್‌ನಲ್ಲಿ ಮೂರು ಭರ್ಜರಿ ಸಿಕ್ಸರ್ ಸಿಡಿಸಿದ ಅಕ್ಷರ್ ಪಟೇಲ್ ಕೇವಲ ಐದು ಎಸೆತಗಳಲ್ಲಿ 21 ರನ್ ಸಿಡಿಸಿ ತಂಡದ ಗೆಲುವಿಗೆ ಕಾರಣರಾದರು.
ಐದು ವಿಕೆಟ್‌ಗಳ ಯಶಸ್ವಿ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ಈ ಗೆಲುವಿನೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಏಳು ಗೆಲುವಿನೊಂದಿಗೆ 14 ಪಾಯಿಂಟ್ಸ್ ಕಳೆಹಾಕಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದೆ.