DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
ಬುಧವಾರ, ಏಪ್ರಿಲ್ 24ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 40ನೇ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪ್ರವಾಸಿ ಗುಜರಾತ್ ಟೈಟನ್ಸ್ ತಂಡಗಳು ಪರಸ್ಪರ ಸೆಣಸಾಡುತ್ತಿವೆ.
ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀಗಾಗಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಐಪಿಎಲ್ 2024ರಲ್ಲಿ ಅಸ್ಥಿರ ಪ್ರದರ್ಶನ ನೀಡುತ್ತಿರುವ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತಮ್ಮ ಬೌಲರ್‌ಗಳಿಂದ ಹೆಚ್ಚು ಸುಧಾರಿತ ಪ್ರದರ್ಶನವನ್ನು ಬಯಸುತ್ತಿದೆ. ಇದೇ ವೇಳೆ ರಿಷಭ್ ಪಂತ್ ಅವರ ನಾಯಕತ್ವದ ಕೌಶಲ್ಯಗಳು ಸಹ ಪರಿಶೀಲನೆಗೆ ಒಳಪಡುತ್ತವೆ.
ಸತತ ಎರಡು ಗೆಲುವುಗಳ ನಂತರ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಶನಿವಾರ ತವರಿನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 67 ರನ್‌ಗಳ ಸೋಲು ಅನುಭವಿಸಿದೆ. ಈ ಋತುವಿನಲ್ಲಿ ಆಡಿದ 8 ಪಂದ್ಯಗಳಲ್ಲಿ 3 ಗೆಲುವು ಮತ್ತು 5 ಸೋಲಿನೊಂದಿಗೆ 6 ಅಂಕಗಳನ್ನು ಹೊಂದಿದ್ದು, ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಮತ್ತೊಂದೆಡೆ, ಹೊಸ ನಾಯಕ ಶುಭ್ಮನ್ ಗಿಲ್ ನಾಯಕತ್ವದಲ್ಲಿ ಗುಜರಾತ್ ಟೈಟನ್ಸ್ ಕೂಡ ಅಷ್ಟೇ ಅಸ್ಥಿರ ಪ್ರದರ್ಶನ ನೀಡುತ್ತಿದ್ದು, ಈವರೆಗೆ ಆಡಿದ 8 ಪಂದ್ಯಗಳಲ್ಲಿ 4 ಸೋಲು ಮತ್ತು 4 ಗೆಲುವುಗಳೊಂದಿಗೆ 8 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಡಿಸಿ vs ಜಿಟಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಡಿಸಿ vs ಜಿಟಿ ಆಡುವ 11ರತ ಬಳಗ
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್(ನಾಯಕ/ ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್.
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications