For Quick Alerts
ALLOW NOTIFICATIONS  
For Daily Alerts
 

IPL 2025: ಡೆಲ್ಲಿ ವಿರುದ್ಧ ಗೆದ್ದ ಕೆಕೆಆರ್ ಪ್ಲೇ ಆಫ್ ಕನಸು ಜೀವಂತ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಐಪಿಎಲ್ 2025 ರ 48ನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ 14 ರನ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಆಫ್ ಕನಸು ಜೀವಂತವಾಗಿದೆ. ಕೆಕೆಆರ್ ತಂಡ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿದ ಡೆಲ್ಲಿ ಸೋಲನ್ನು ಎದುರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿತು. ನಿಗದಿತ 20 ಓವರ್‍‌ಗಳಲ್ಲಿ ಕೋಲ್ಕತ್ತಾ 9 ವಿಕೆಟ್ ಕಳೆದುಕೊಂಡರೂ 204 ರನ್‌ ಗಳಿಸಿತು. ಈ ಬೃಹತ್ ಗೆಲುವಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ ಶಕ್ತವಾಯಿತು. ಇದರೊಂದಿಗೆ ಕೆಕೆಆರ್ 14 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.

DC vs KKR IPL 2025 Toss 2nd Match Report Score batting and bowling performance kannada

7 ವರ್ಷಗಳ ಬಳಿಕ ಜಯ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ 2017 ರ ನಂತರ ಕೆಕೆಆರ್ ತಂಡವು ಡೆಲ್ಲಿಯನ್ನು ಸೋಲಿಸಿದೆ. ಕೆಕೆಆರ್ ತಂಡ ಡೆಲ್ಲಿಗೆ 205 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಚೇಸಿಂಗ್ ಆರಂಭಿಸಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಯುವ ಬ್ಯಾಟರ್ ಅಭಿಷೇಕ್ ಪೊರೆಲ್ ಕೇವಲ 4 ರನ್ ಗಳಿಸಿ ಔಟಾದರು. ಬಳಿಕ ಬಂದ ಕರುಣ್ ನಾಯರ್ ಅವರು ಫಾಫ್ ಡು ಪ್ಲೆಸಿಸ್ ಜೊತೆಯಾದರು. ಈ ಜೋಡಿ ಡೆಲ್ಲಿ ತಂಡಕ್ಕೆ ಚೇತರಿಕೆ ನೀಡಿತು. ಉತ್ತಮವಾಗಿ ಆಡುತ್ತಿದ್ದ ಕರುಣ್ ನಾಯರ್ 15 ರನ್ ಗಳಿಸಿ ವಿಕೆಟ್ ಕಳೆದುಕೊಂಡರೆ, ಕೆಎಲ್ ರಾಹುಲ್ 7 ರನ್ ಗಳಿಸಿದಾಗ ದುರದೃಷ್ಟಕರ ರನೌಟ್ ಆದರು.

ಡೆಲ್ಲಿ ತಂಡ 60 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಡು ಪ್ಲೆಸಿಸ್‌ಗೆ ನಾಯಕ ಅಕ್ಸರ್ ಪಟೇಲ್ ಬೆಂಬಲವಾಗಿ ನಿಂತು 23 ಎಸೆತಗಳಲ್ಲಿ 43 ರನ್ ಗಳಿಸುವ ಮೂಲಕ ಕೆಕೆಆರ್‌ ತಂಡಕ್ಕೆ ಸೋಲಿ ಭಯ ಕಾಣಿಸಿದರು. ಆದರೆ ಇದಾದ ನಂತರ, ಸುನಿಲ್ ನರೈನ್ ಅವರ ಓವರ್ ಮಹತ್ವದ ತಿರುವು ನೀಡಿತು.

ಸುನಿಲ್ ನರೈನ್ ಒಂದೇ ಓವರ್‌ನಲ್ಲಿ ಅಕ್ಸರ್ ಪಟೇಲ್ (43) ಮತ್ತು ಟ್ರಿಸ್ಟಾನ್ ಸ್ಟಬ್ಸ್ (1) ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಇದಾದ ಬಳಿಕವೂ ನರೈನ್ ಡು ಪ್ಲೆಸಿಸ್ ಅವರನ್ನು 62 ರನ್‌ಗಳಿಗೆ ಔಟ್ ಮಾಡುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು. ಮತ್ತೊಂದೆಡೆ ವರುಣ್ ಚಕ್ರವರ್ತಿ ಕೂಡ ತಮ್ಮ ಓವರ್‌ನಲ್ಲಿ ಸತತ ಎರಡು ವಿಕೆಟ್‌ಗಳನ್ನು ಕಬಳಿಸಿದರು.

ಡೆಲ್ಲಿ ಆಲ್‌ರೌಂಡರ್ ವಿಪ್ರಜ್ ನಿಗಮ್ 19 ಎಸೆತಗಳಲ್ಲಿ 38 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡುವ ಮೂಲಕ ಕೆಕೆಆರ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು. ಆದರೆ ಕೊನೆಯ ಓವರ್‌ನಲ್ಲಿ 5 ಎಸೆತಗಳಲ್ಲಿ 24 ರನ್ ಗಳಿಸಲು ಸಾಧ್ಯವಾಗಲಿಲ್ಲ. ಇದರೊಂದಿಗೆ ಕೆಕೆಆರ್ ಸುಲಭವಾಗಿ ಪಂದ್ಯವನ್ನು ಗೆದ್ದುಕೊಂಡಿತು.

ಕೆಕೆಆರ್ ಅಬ್ಬರ

ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಸರ್ ಪಟೇಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಭರ್ಜರಿ ಆರಂಭ ಕಂಡಿತು. ಕೋಲ್ಕತ್ತಾ ತಂಡವು 48 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಸುನಿಲ್ ನರೈನ್ 27 ರನ್ ಗಳಿಸಿ ಔಟಾದರು. ಇದಾದ ನಂತರ, ಅಂಗಕೃಷ್ಣ ರಘುವಂಶಿ ತಮ್ಮ ಇನ್ನಿಂಗ್ಸ್ ಮೂಲಕ ಪಂದ್ಯಕ್ಕೆ ಜೀವ ತುಂಬಿದರು. ಅವರು 44 ರನ್‌ಗಳ ಇನ್ನಿಂಗ್ಸ್ ಆಡಿದರು. ಆದರೆ ದುರದೃಷ್ಟವಶಾತ್ ಅರ್ಧಶತಕದ ಹೊಸ್ತಿಲಲ್ಲಿ ಅವರು ವಿಕೆಟ್ ಕಳೆದುಕೊಂಡರು.

ರಿಂಕು ಸಿಂಗ್ ಮತ್ತೊಂದೆಡೆ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. ಅವರು 36 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಸ್ಕೋರ್ ಹೆಚ್ಚಿಸುವ ವೇಗದಲ್ಲಿ ಕೊನೆ ಓವರ್‍‌ಗಳಲ್ಲಿ ರಸೆಲ್ ಮತ್ತು ರೋವ್‌ಮನ್ ಪೊವೆಲ್ ವಿಕೆಟ್ ಕಳೆದುಕೊಂಡರು. ಆದರೂ ಕೆಕೆಆರ್ ತಂಡ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

ಡೆಲ್ಲಿ ಕ್ಯಾಪಿಟಲ್ಸ್ ಪರ ಸಂಘಟಿತ ಬೌಲಿಂಗ್ ದಾಳಿ ಕಂಡು ಬಂತು. ವೇಗಿ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಪಡೆದು ಮಿಂಚಿದರೆ, ವಿಪ್ರಜ್ ನಿಗಮ್ ಮತ್ತು ಅಕ್ಸರ್ ಪಟೇಲ್ ತಲಾ 2 ವಿಕೆಟ್ ಪಡೆದರು. ದುಷ್ಮಂತ ಚಮೀರ ಕೇವಲ 1 ವಿಕೆಟ್ ಕಬಳಿಸಿದರು.

ಉಭಯ ತಂಡಗಳ ಪ್ಲೇಯಿಂಗ್-11

ಡೆಲ್ಲಿ ಕ್ಯಾಪಿಟಲ್ಸ್: ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್ (ವಿಕೆಟ್‌ಕೀಪರ್), ಕರುಣ್ ನಾಯರ್, ಕೆಎಲ್ ರಾಹುಲ್, ಅಕ್ಸರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮುಖೇಶ್ ಕುಮಾರ್.

ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ಕೀಪರ್), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರೋವ್ಮನ್ ಪೊವೆಲ್, ಹರ್ಷಿತ್ ರಾಣಾ, ಅನುಕುಲ್ ರಾಯ್, ವರುಣ್ ಚಕ್ರವರ್ತಿ.

Story first published: Tuesday, April 29, 2025, 21:40 [IST]
Other articles published on Apr 29, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+