DC vs LSG IPL 2024: ಪ್ಲೇಆಫ್ ಅರ್ಹತೆಗಾಗಿ ಡೆಲ್ಲಿ vs ಲಕ್ನೋ ಕಾದಾಟ; ಟಾಸ್ ವರದಿ, ಆಡುವ 11ರ ಬಳಗ
ಮಂಗಳವಾರ, ಮೇ 14ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 64ನೇ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪ್ರವಾಸಿ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮತ್ತೊಂದು ನಿರ್ಣಾಯಕ ಸೆಣಸಾಟ ನಡೆಸುತ್ತಿವೆ.
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಇದು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತರೆ, ಐಪಿಎಲ್ 2024ರ ಪ್ಲೇಆಫ್ ರೇಸ್‌ನಿಂದ ಹೊರಬೀಳಲಿದೆ. ಈವರೆಗ ಆಡಿರುವ 13 ಪಂದ್ಯಗಳಿಂದ 6 ಗೆಲುವು ಮತ್ತು 7 ಸೋಲುಗಳೊಂದಿಗೆ 12 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಮತ್ತೊಂದೆಡೆ, 12 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಕೆಎಲ್ ರಾಹುಲ್ ನಾಯಕತ್ವದ ತಂಡಕ್ಕೆ ಇದಲ್ಲದೆ, ಮತ್ತೊಂದು ಪಂದ್ಯ ಬಾಕಿ ಉಳಿದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿಂತ ಉತ್ತಮ ಅರ್ಹತಾ ಅವಕಾಶವಿದೆ.

ಉಭಯ ತಂಡಗಳ ಹಿಂದಿನ ಪಂದ್ಯದಲ್ಲಿ ರಿಷಭ್ ಪಂತ್ ಬಳಗ ಆರು ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು. ಹೀಗಾಗಿ ಈ ಆವೃತ್ತಿಯಲ್ಲಿ ಇದು ಎರಡು ತಂಡಗಳು ಮುಖಾಮುಖಿಯಾಗುತ್ತಿರುವ ಎರಡನೇ ಲೀಗ್ ಪಂದ್ಯವಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಈ ಪಂದ್ಯದಲ್ಲಿ ತಮ್ಮ 100 ಐಪಿಎಲ್ ಔಟ್ ಮಾಡುವ ಗುರಿಯನ್ನು ಹೊಂದಿದ್ದಾರೆ. ಪ್ರಸ್ತುತ ರಿಷಭ್ ಪಂತ್ ಈ ಸಾಧನೆಯಿಂದ ನಾಲ್ಕು ವಿಕೆಟ್‌ಗಳ ದೂರದಲ್ಲಿದ್ದಾರೆ.
ಡಿಸಿ vs ಎಲ್‌ಎಸ್‌ಜಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಡಿಸಿ vs ಎಲ್‌ಎಸ್‌ಜಿ ಪಂದ್ಯದ ಆಡುವ 11ರ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಯುಧ್‌ವೀರ್ ಸಿಂಗ್ ಚರಕ್, ಅರ್ಷದ್ ಖಾನ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್.
ಡೆಲ್ಲಿ ಕ್ಯಾಪಿಟಲ್ಸ್: ಅಭಿಷೇಕ್ ಪೊರೆಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಶಾಯ್ ಹೋಪ್, ರಿಷಬ್ ಪಂತ್ (ನಾಯಕ/ ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಗುಲ್ಬದಿನ್ ನೈಬ್, ರಸಿಖ್ ದಾರ್ ಸಲಾಂ, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications