Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: ಡೆಲ್ಲಿ-ಲಕ್ನೋ ನಡುವೆ ಮಾಡು ಇಲ್ಲವೇ ಮಡಿ ಪಂದ್ಯ; ಉಭಯ ತಂಡಗಳ ಬಲಾಬಲ ವರದಿ

ಮೇ 14 ಮಂಗಳವಾರ, 2024ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಮುಖಾಮುಖಿಯಾಗಿವೆ. ನವದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ಸಂಜೆ 7.30 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಕಳೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಸೋತಿರುವ ಡೆಲ್ಲಿ ತಂಡಕ್ಕೆ ನಾಯಕ ರಿಷಬ್ ಪಂತ್ ಒಂದು ಪಂದ್ಯದ ನಿಷೇಧದ ನಂತರ ಮರಳಲಿದ್ದಾರೆ. ಇನ್ನೊಂದೆಡೆ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಹೀನಾಯವಾಗಿ ಸೋಲು ಕಂಡಿರುವ ಕೆಎಲ್‌ ರಾಹುಲ್‌ ನಾಯಕತ್ವದ ಲಕ್ನೋ ತಂಡದ ಗೆಲ್ಲುವ ನಿರೀಕ್ಷೆಯಲ್ಲಿದೆ.

DC vs LSG IPL 2024 Delhi Capitals vs Lucknow Super Giants Preview Match Report

ಈ ಪಂದ್ಯವು ಲಕ್ನೋ ಮತ್ತು ದೆಹಲಿಗೆ ಮಾಡು ಇಲ್ಲವೇ ಮಡಿಯಾಗಲಿದ್ದು, ಗೆಲ್ಲುವ ತಂಡವು ಇನ್ನೂ ಪ್ಲೇ-ಆಫ್‌ಗೆ ತಲುಪುವ ಅವಕಾಶವನ್ನು ಹೊಂದಿರುತ್ತದೆ. ಆದರೆ ಸೋತ ತಂಡದ ಪ್ಲೇ-ಆಫ್‌ನ ಪ್ರಯಾಣ ಬಹುತೇಕ ಕೊನೆಗೊಳ್ಳಲಿದೆ.

ಡೆಲ್ಲಿ ಈ ಋತುವಿನಲ್ಲಿ 13 ಪಂದ್ಯಗಳನ್ನು ಆಡಿದ್ದು, 6 ಪಂದ್ಯಗಳನ್ನು ಗೆದ್ದರೆ 7 ಪಂದ್ಯಗಳಲ್ಲಿ ಸೋತಿದೆ. ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿರುವ ಡೆಲ್ಲಿಗೆ ಇದು ಕೊನೆಯ ಪಂದ್ಯವಾಗಿದೆ. ಲಕ್ನೋ ಇಲ್ಲಿಯವರೆಗೆ 12 ಪಂದ್ಯಗಳನ್ನು ಆಡಿದ್ದಾರೆ. 6 ಪಂದ್ಯ ಗೆದ್ದು, 6 ಸೋಲು ಕಂಡಿದೆ. ಪ್ರಸ್ತುತ ತಂಡವು ಒಟ್ಟು 12 ಅಂಕಗಳನ್ನು ಹೊಂದಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಡಿಸಿ vs ಎಲ್‌ಎಸ್‌ಜಿ ಹೆಡ್ ಟು ಹೆಡ್

ಡೆಲ್ಲಿ ಮತ್ತು ಲಕ್ನೋ ನಡುವೆ ಇಲ್ಲಿಯವರೆಗೆ ಒಟ್ಟು 4 ಪಂದ್ಯಗಳು ನಡೆದಿವೆ. ಲಕ್ನೋ 3 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ತಂಡ ಕೇವಲ 1 ಪಂದ್ಯವನ್ನು ಗೆದ್ದಿದೆ. ಹೀಗಾಗಿ ಡೆಲ್ಲಿ ವಿರುದ್ಧ ಲಕ್ನೋ ಮೇಲುಗೈ ಸಾಧಿಸಿದೆ.

ಡಿಸಿ vs ಎಲ್‌ಎಸ್‌ಜಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಡಿಸಿ vs ಎಲ್‌ಎಸ್‌ಜಿ ಸಂಭಾವ್ಯ ಆಡುವ 11ರ ಬಳಗ

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (ವಿ.ಕೀ ಮತ್ತು ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಗುಲ್ಬದಿನ್ ನೈಬ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.

ಲಕ್ನೋ ಸೂಪರ್ ಜೈಂಟ್ಸ್ ತಂಡ: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿ.ಕೀ ಮತ್ತು ನಾಯಕ), ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.

Story first published: Tuesday, May 14, 2024, 7:48 [IST]
Other articles published on May 14, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+