Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs LSG IPL 2024: ಪೊರೆಲ್, ಸ್ಟಬ್ಸ್ ಸ್ಫೋಟಕ ಅರ್ಧಶತಕ; ಲಕ್ನೋಗೆ ಸವಾಲಿನ ಗುರಿ ನೀಡಿದ ಡೆಲ್ಲಿ

ಮಂಗಳವಾರ, ಮೇ 14ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 64ನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ರವಾಸಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಬೃಹತ್ ಮೊತ್ತ ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಭಿಷೇಕ್ ಪೊರೆಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 209 ರನ್‌ಗಳ ಸವಾಲಿನ ಗುರಿ ನೀಡಿದೆ.

DC vs LSG IPL 2024 Lucknow Super Giants Need 209 Runs To Win Against Delhi Capitals

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಪೊರೆಲ್ ಮತ್ತು ಜೇಕ್ ಫ್ರೆಸರ್-ಮೆಕ್‌ಗುರ್ಕ್ ಉತ್ತಮ ಆರಂಭ ನೀಡಲಿಲ್ಲ. ಏಕೆಂದರೆ ತಂಡದ ಮೊತ್ತ 2 ರನ್‌ಗಳಾಗಿದ್ದಾಗ ಫ್ರೆಸರ್-ಮೆಕ್‌ಗುರ್ಕ್ ಡಕ್‌ಗೆ ಔಟಾದರು.

ನಂತರ ಬಂದ ಶಾಯ್ ಹೋಪ್ ಆಕ್ರಮಣಕಾರಿ ಆಟಕ್ಕೆ ಮುಂದಾದರು ಮತ್ತು 27 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 38 ರನ್ ಗಳಿಸಿದರು. ಅಲ್ಲದೆ, ಅಭಿಷೇಕ್ ಪೊರೆಲ್ ಜೊತೆಗೂಡಿ 92 ರನ್‌ಗಳ ಜೊತೆಯಾಟ ನಿರ್ಮಿಸಿದರು.

ನಂತರ ಬಂದ ಶಾಯ್ ಹೋಪ್ ಆಕ್ರಮಣಕಾರಿ ಆಟಕ್ಕೆ ಮುಂದಾದರು ಮತ್ತು 27 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 38 ರನ್ ಗಳಿಸಿದರು. ಅಲ್ಲದೆ, ಅಭಿಷೇಕ್ ಪೊರೆಲ್ ಜೊತೆಗೂಡಿ 92 ರನ್‌ಗಳ ಜೊತೆಯಾಟ ನಿರ್ಮಿಸಿದರು.

ಇನ್ನು ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು ಮತ್ತು ಕೇವಲ 33 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 58 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ನಾಯಕ ರಿಷಭ್ ಪಂತ್ 23 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 33 ರನ್ ಗಳಿಸಿ ಔಟಾದರು.

ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 25 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ ಅಜೇಯ 57 ರನ್ ಗಳಿಸಿದರೆ, ಅಕ್ಷರ್ ಪಟೇಲ್ 10 ಎಸೆತಗಳಲ್ಲಿ 2 ಬೌಂಡರಿ ಸಮೇತ ಅಜೇಯ 14 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ನವೀನ್-ಉಲ್-ಹಕ್ 4 ಓವರ್‌ಗಳಲ್ಲಿ 51 ರನ್ ನೀಡಿ 2 ವಿಕೆಟ್ ಪಡೆದರೆ, ಅರ್ಷದ್ ಖಾನ್ 3 ಓವರ್‌ಗಳಲ್ಲಿ 45 ರನ್ ನೀಡಿ 1 ವಿಕೆಟ್ ಮತ್ತು ರವಿ ಬಿಷ್ಣೋಯಿ 4 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು.

Story first published: Tuesday, May 14, 2024, 21:35 [IST]
Other articles published on May 14, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+