Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಐಪಿಎಲ್‌ನಲ್ಲಿ ನಾಯಕನಾಗಿ ಅಪರೂಪದ ಸಾಧನೆ ಮಾಡಿದ ಡೇವಿಡ್ ವಾರ್ನರ್

ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯ ರೋಚಕವಾಗಿ ಅಂತ್ಯವಾಗಿದೆ. ಕೊನೆಯ ಎಸೆತದಲ್ಲಿ ಮುಂಬೈ ತಂಡ ಈ ಪಂದ್ಯದಲ್ಲಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ನಾಲ್ಕನೇ ಪಂದ್ಯದಲ್ಲಿಯೂ ಸೋಲಿನ ಅವಮಾನಕ್ಕೆ ತುತ್ತಾಗಿದ್ದು ತೀವ್ರ ಒತ್ತಡದಲ್ಲಿದೆ.

ಆದರೆ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡದ ನಾಯಕ ಡೇವಿಡ್ ವಾರ್ನರ್ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ. ಅಲ್ಲದೆ ಐಪಿಎಲ್‌ನಲ್ಲಿ ನಾಯಕನಾಗಿ 3000 ರನ್‌ಗಳಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್‌ನಲ್ಲಿ ಅತ್ಯಂತ ಅಪರೂಪದ ಸಾಧನೆ ಮಾಡಿದ್ದಾರೆ ಈ ಆಸಿಸ್ ಕ್ರಿಕೆಟಿಗ.

DC vs MI: Delhi Capitals captain David Warner achieve special milestone reached 3000 runs as IPL captain

ಡೇವಿಡ್ ವಾರ್ನರ್ ಸನ್‌ರೈಸರ್ಸ್ ಹೈದರಾಬಾದ್ ತಮಡದ ನಾಯಕನಾಗಿ ಅತ್ಯಂತ ಹೆಚ್ಚಿನ ಯಶಸ್ಸು ಸಾಧಿಸಿದ್ದು ಈ ಆವೃತ್ತಿಯಲ್ಲಿ ಡೆಲ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ವಾರ್ರ್ ಐಪಿಎಲ್‌ನಲ್ಲಿ ಅತ್ಯಂತ ವೇಗವಾಗಿ 6000 ರನ್‌ಗಳನ್ನು ಗಳಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದರು.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಡೇಚಿಡ್ ವಾರ್ನರ್ ಹಾಗೂ ಅಕ್ಷರ್ ಪಟೇಲ್ ಅವರ ಅರ್ಧ ಶತಕದ ನೆರವಿನಿಂದಾಗಿ 172 ರನ್‌ಗಳನ್ನು ಗಳಿಸಿತು. ವಾರ್ನರ್ 47 ಎಸೆತಗಳಲ್ಲಿ 51 ರನ್‌ಗಳಿಸಿದರೆ ಅಕ್ಷರ್ ಪಟೇಲ್ 25 ಎಸೆತಗಳಲ್ಲಿ 54 ರನ್‌ ಸಿಡಿಸಿ ಮಿಂಚಿದರು.

ಇದಕ್ಕೆ ಪ್ರತಿತಾಗಿ ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ತಂಡ ನಾಯಕ ರೋಹಿತ್ ಶರ್ಮಾ, ಇಶಾನ್ ಕಿಶನ್ ಹಾಗೂ ತಿಲಕ್ ವರ್ಮಾ ಅವರ ಅದ್ಭುತ ಪ್ರದರ್ಶನದಿಂದಾಗಿ ರೋಚಕ ಗೆಲುವು ಸಾಧಿಸಿದೆ. ಕೊನೆಯ ಎಸೆತದವರೆಗೂ ಸಾಗಿದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಅಂತಿಮ ಎಸೆತದಲ್ಲಿ ಗೆಲುವಿನ ನಗೆ ಬೀರುವ ಮೂಲಕ ಈ ಆವೃತ್ತಿಯಲ್ಲಿ ಮೊದಲ ಗೆಲುವು ಕಂಡಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ನಾಲ್ಕನೇ ಪಂದ್ಯದಲ್ಲಿ ಸೋಲು ಕಂಡಂತಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ಯಶ್ ಧುಲ್, ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆ), ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಮುಸ್ತಾಫಿಜುರ್ ರೆಹಮಾನ್

ಬೆಂಚ್: ಮುಖೇಶ್ ಕುಮಾರ್, ಅಮನ್ ಹಕೀಮ್ ಖಾನ್, ಸರ್ಫರಾಜ್ ಖಾನ್, ಪ್ರವೀಣ್ ದುಬೆ, ಇಶಾಂತ್ ಶರ್ಮಾ, ರಿಲೀ ರೊಸೊವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಲುಂಗಿ ಎನ್‌ಗಿಡಿ, ಫಿಲಿಪ್ ಸಾಲ್ಟ್, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ವಿಕ್ಕಿ ಓಸ್ತ್ವಾಲ್

ರೋಹಿತ್ ಶರ್ಮಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಅರ್ಷದ್ ಖಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್
ಬೆಂಚ್: ಕುಮಾರ್ ಕಾರ್ತಿಕೇಯ, ಅರ್ಜುನ್ ತೆಂಡೂಲ್ಕರ್, ರಮಣದೀಪ್ ಸಿಂಗ್ , ಸಂದೀಪ್ ವಾರಿಯರ್, ಜೋಫ್ರಾ ಆರ್ಚರ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ಆಕಾಶ್ ಮಾಧ್ವಾಲ್, ದುವಾನ್ ಜಾನ್ಸೆನ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್

Story first published: Tuesday, April 11, 2023, 23:56 [IST]
Other articles published on Apr 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+