DC vs MI: ಸಮೀರ್ ರಿಜ್ವಿ ಕಮಾಲ್ ಬ್ಯಾಟಿಂಗ್: ಡೆಲ್ಲಿ ವಿರುದ್ಧ ಡುಬ್ಕಿ ಹೊಡೆದ ಮುಂಬೈ
ನವದೆಹಲಿ: ಭರವಸೆಯ ಆಟಗಾರ ಸಮೀರ್ ರಿಜ್ವಿ ಅವರ ಭರ್ಜರಿ ಆಟದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಗೆಲುವಿನ ನಗೆ ಬೀರಿದೆ.
ಸಾಧಾರಣ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಕಳಪೆಯಾಗಿತ್ತು. ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಪ್ರಸಕ್ತ ಐಪಿಎಲ್‌ನ ಎರಡನೇ ಪಂದ್ಯದಲ್ಲಿ ನಿರಾಸೆ ಅನುಭವಿಸಿದರು. ನಿತೀಶ್ ರಾಣಾ (0) ಬಂದು ಹೋಗುವ ಸಂಪ್ರದಾಯವನ್ನು ಮುಗಿಸಿದರು.

ಮೂರನೇ ವಿಕೆಟ್‌ಗೆ ಸಮೀರ್ ರಿಜ್ವಿ ಹಾಗೂ ಪತಮ್ ನಿಸ್ಸಂಕಾ ಜೋಡಿ 49 ಎಸೆತಗಳಲ್ಲಿ 66 ರನ್ ಸೇರಿಸಿತು. ಪತಮ್ ನಿಸ್ಸಂಕಾ 30 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ 44 ರನ್ ಬಾರಿಸಿ ಔಟ್ ಆದರು.
ಸಮೀರ್ ಅಬ್ಬರ
4ನೇ ವಿಕೆಟ್‌ಗೆ ಡೇವಿಡ್ ಮಿಲ್ಲರ್ ಹಾಗೂ ಸಮೀರ್ ರಿಜ್ವಿ ಜೋಡಿ ಸಮಯೋಚಿತ ಆಟವನ್ನು ಆಡಿತು. ಅಲ್ಲದೆ ತಂಡವನ್ನು ಗೆಲುವಿನ ಹತ್ತಿರಕ್ಕೆ ತಂದು ನಿಲ್ಲಿಸಿತು. ಈ ಜೋಡಿ 39 ಎಸೆತಗಳಲ್ಲಿ 78 ರನ್ ಸೇರಿಸಿತು. ಈ ಹಂತದಲ್ಲಿ ಸಮೀರ್ ರಿಜ್ವಿ ಔಟ್ ಆದರು. ಅಮೋಘ ಬ್ಯಾಟಿಂಗ್ ಮಾಡಿದ ಸಮೀರ್ 51 ಎಸೆತಗಳಲ್ಲಿ 7 ಬೌಂಡರಿ, 7 ಸಿಕ್ಸರ್ ಸಹಾಯದಿಂದ 90 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.
ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ 18.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 164 ರನ್ ಸೇರಿಸಿತು. ಡೆಲ್ಲಿ ಪ್ರಸಕ್ತ ಆವೃತ್ತಿಯಲ್ಲಿ ಎರಡನೇ ಗೆಲುವಿನ ನಗೆ ಬೀರಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ರಯಾನ್ ರಿಂಕಲ್ಟನ್ ಅವರು 2 ಬೌಂಡರಿ ನೆರವಿನಿಂದ 9 ರನ್ ಸಿಡಿಸಿ ಮುಕೇಶ್ ಕುಮಾರ್ ಅವರ ಎಸೆತದಲ್ಲಿ ಔಟ್ ಆದರು. ಭರವಸೆಯ ಆಟಗಾರ ತಿಲಕ್ ವರ್ಮಾ ಸಹ ಕೇವಲ 2 ಎಸೆತಗಳನ್ನು ಎದುರಿಸಿ ಪೆವಿಲಿಯನ್ ಸೇರಿದರು.
ಸೂರ್ಯ ಅರ್ಧಶತಕದ ಬಲ
ಮೂರನೇ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿತು. ಈ ಜೋಡಿ 40 ಎಸೆತಗಳಲ್ಲಿ 53 ರನ್ ಸೇರಿಸಿ ತಂಡಕ್ಕೆ ಆಧಾರವಾಯಿತು. ಈ ವೇಳೆ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದ ರೋಹಿತ್ ಶರ್ಮಾ ತಾಳ್ಮೆ ಕಳೆದುಕೊಂಡು ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು. ಇವರು ಔಟ್ ಆಗುವ ಮುನ್ನ 5 ಬೌಂಡರಿ, 1 ಸಿಕ್ಸರ್ ಸಹಾಯದಿಂದ 35 ರನ್ ಬಾರಿಸಿದರು.

ನಆಯಕ ಸೂರ್ಯಕುಮಾರ್ ಯಾದವ್ ಜವಾಬ್ದಾರಿ ಅರಿತು ಬ್ಯಾಟ್ ಮಾಡಿದರು. ಇವರು 36 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 51 ರನ್ ಬಾರಿಸಿ ಔಟ್ ಆದರು. ಉಳಿದಂತೆ ನಮನ್ ಧೀರ್ 18, ಮಿಚೆಲ್ ಸ್ಯಾಂಟ್ನರ್ ಅಜೇಯ 18 ರನ್ ಸಿಡಿಸಿದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 162 ರನ್ ಸೇರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications