IPL 2023: 2 ವರ್ಷಗಳ ಬಳಿಕ ಐಪಿಎಲ್‌ನಲ್ಲಿ ಅರ್ಧ ಶತಕ ಸಿಡಿಸಿದ ರೋಹಿತ್ ಶರ್ಮಾ
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸತತ ಸೋಲಿನ ಬಳಿಕ ಗೆಲುವಿನ ಹುಡುಕಾಟದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಅವರೇ ಭರ್ಜರಿ ಅಡಿಪಾಯ ಹಾಕುವಲ್ಲಿ ಯಶಸ್ವಿಯಾದರು. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿಗ್ ಶರ್ಮಾ ಐಪಿಎಲ್‌ನಲ್ಲಿ 41ನೇ ಅರ್ಧ ಶತಕ ಸಿಡಿಸಿದ್ದಾರೆ.
ಈ ಅರ್ಧ ಶತಕದ ಮೂಲಕ ಕಳೆದ ಎರಡು ವರ್ಷಗಳಲ್ಲಿ ಐಪಿಎಲ್‌ನಲ್ಲಿ ಅರ್ಧ ಶತಕ ಸಿಡಿಸಲು ವಿಫಲವಾಗಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಆ ಬರವನ್ನು ನೀಗಿಸಿಕೊಂಡಿದ್ದಾರೆ. 50ರ ಗಡಿದಾಟಲು ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕೇವಲ 29 ಎಸೆತಗಳನ್ನು ಬಳಸಿಕೊಂಡರು. ಇದರಲ್ಲಿ 6 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ಸೇರಿದೆ. 144.44ರ ಸ್ಟ್ರೈಕ್‌ರೇಟ್‌ನಲ್ಲಿ ರೋಹಿತ್ ಬ್ಯಾಟ್ ಬೀಸಿದ್ದಾರೆ.

ಪಂದ್ಯಗಳ ಲೆಕ್ಕಾಚಾರದಲ್ಲಿ 24 ಐಪಿಎಲ್ ಪಂದ್ಯಗಳ ಬಳಿಕ ರೋಹಿತ್ ಶರ್ಮಾ ತಮ್ಮ ಮೊದಲ ಅರ್ಧ ಶತಕವನ್ನು ಸಿಡಿಸಿದ್ದಾರೆ. ರೋಹಿತ್ 40ನೇ ಐಪಿಎಲ್ ಅರ್ಧ ಶತಕ ಸಿಡಿಸಿದ್ದು 2021ರ ಏಪ್ರಿಲ್ 23ರಂದು ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ. ಕಳೆದ ಐಪಿಎಲ್ ಆವೃತ್ತಿಯಲ್ಲಿ ರೋಹಿತ್ ಶರ್ಮಾ ಬ್ಯಾಟ್‌ನಿಂದ ಒಂದು ಅರ್ಧ ಶತಕವೂ ದಾಖಲಾಗಿರಲಿಲ್ಲ.
ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ್ದ 173 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯ್ಸ್ ತಂಡದ ಪರವಾಗಿ ರೋಹಿತ್ ಶರ್ಮಾಆರಂಭಿಕನಾಗಿ ಕಣಕ್ಕಿಳಿದು ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಮುಕೇಶ್ ಕುಮಾರ್ ಎಸೆದ ಮೊದಲ ಓವರ್‌ನಲ್ಲಿಯೇ ರೋಹಿತ್ ಶರ್ಮಾ ಅಬ್ಬರಿಸುವ ಮುನ್ಸೂಚನೆ ನೀಡಿದರು. ಈ ಓವರ್‌ನಲ್ಲಿ ಎರಡು ಬೌಂಡರಿ ಒಂದು ಸಿಕ್ಸರ್ ಸಿಡಿಸಿದ್ದು ಆರಂಭಿಕ ಓವರ್‌ನಲ್ಲಿ 14 ರನ್ ಸಿಡಿಸಿ ತನ್ನ ಉದ್ದೇಶ ಸ್ಪಷ್ಟಪಡಿಸಿದರು.
17ನೇ ಓವರ್‌ವರೆಗೆ ಕ್ರೀಸ್‌ನಲ್ಲಿ ನೆಲೆಯೂರಿದ್ದ ರೋಹಿತ್ ಮುಸ್ತಫಿಜುರ್ ರಹೀಮ್ ಎಸೆತದಲ್ಲಿ ವಿಕೆಟ್ ಕೀಪರ್ ಅಭಿಶೇಕ್ ಪೋರೆಲ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಒಟ್ಟು 45 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 65 ರನ್‌ಗಳಿಗೆ ತಮ್ಮ ಇನ್ನಿಂಗ್ಸ್ ಅಂತ್ಯಗೊಳಿಸಿದರು.
ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ರೋಚಕ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಕೊನೆಯ ಎಸೆತದವರೆಗೂ ಸಾಗಿದ ಈ ಪಂದ್ಯದಲ್ಲಿ ಅಂತಿಮ ಎಸೆತದಲ್ಲಿ ಎರಡು ರನ್‌ಗಳನ್ನು ಗಳಿಸಿ ಮುಂಬೈ ಇಂಡಿಯನ್ಸ್ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮೊದಲ ಗೆಲುವು ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ 4ನೇ ಪಂದ್ಯದಲ್ಲಿಯೂ ಗೆಲುವಿನ ರುಚಿ ಕಾಣಲು ವಿಫಲವಾಯಿತು.
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ಯಶ್ ಧುಲ್, ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆ), ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಮುಸ್ತಾಫಿಜುರ್ ರೆಹಮಾನ್
ಬೆಂಚ್: ಮುಖೇಶ್ ಕುಮಾರ್, ಅಮನ್ ಹಕೀಮ್ ಖಾನ್, ಸರ್ಫರಾಜ್ ಖಾನ್, ಪ್ರವೀಣ್ ದುಬೆ, ಇಶಾಂತ್ ಶರ್ಮಾ, ರಿಲೀ ರೊಸೊವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಲುಂಗಿ ಎನ್‌ಗಿಡಿ, ಫಿಲಿಪ್ ಸಾಲ್ಟ್, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ವಿಕ್ಕಿ ಓಸ್ತ್ವಾಲ್
ರೋಹಿತ್ ಶರ್ಮಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಅರ್ಷದ್ ಖಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್
ಬೆಂಚ್: ಕುಮಾರ್ ಕಾರ್ತಿಕೇಯ, ಅರ್ಜುನ್ ತೆಂಡೂಲ್ಕರ್, ರಮಣದೀಪ್ ಸಿಂಗ್ , ಸಂದೀಪ್ ವಾರಿಯರ್, ಜೋಫ್ರಾ ಆರ್ಚರ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ಆಕಾಶ್ ಮಾಧ್ವಾಲ್, ದುವಾನ್ ಜಾನ್ಸೆನ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications