Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2026: ಅಜೇಯ ಪಂಜಾಬ್‌ಗೆ ಡೆಲ್ಲಿ ಸವಾಲು: ಜೈಪೂರ್‌ನಲ್ಲಿ ಬಿಗ್‌ ಹಿಟ್ಟರ್‌ಗಳ ಕಾಳಗ

ನವದೆಹಲಿ: 19ನೇ ಆವೃತ್ತಿ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಪಂಜಾಬ್ ಕಿಂಗ್ಸ್‌ ತಂಡಕ್ಕೆ, ಡೆಲ್ಲಿ ಕ್ಯಾಪಿಟಲ್ಸ್‌ ಶನಿವಾರ ಮೊದಲ ಪಂದ್ಯದಲ್ಲಿ ಸವಾಲು ಎಸೆಯಲಿದೆ. ಈ ಲೀಗ್‌ನ 35ನೇ ಪಂದ್ಯಕ್ಕೆ ಅರುಣ್‌ ಜೇಟ್ಲಿ ಮೈದಾನ ಸಾಕ್ಷಿಯಾಗಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮಹದಾಸೆ ಡೆಲ್ಲಿ ತಂಡದ್ದಾಗಿದೆ. ಈ ಮೂಲಕ ಪಂಜಾಬ್ ತಂಡದ ಅಜೇಯ ಓಟಕ್ಕೆ ಬ್ರೇಕ್ ಹಾಕುವ ಕನಸು ಕಾಣುತ್ತಿದೆ.

ಪ್ರಸಕ್ತ ಐಪಿಎಲ್‌ನಲ್ಲಿ ಪಂಜಾಬ್‌ ಆಡಿದ 6 ಪಂದ್ಯಗಳಲ್ಲಿ 5 ಜಯ, 1 ಪಂದ್ಯ ರದ್ದಾಗಿದ್ದು, 11 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್‌ ಆಡಿದ 6 ಪಂದ್ಯಗಳಲ್ಲಿ 3 ಜಯ ದಾಖಲಿಸಿದ್ದು, ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಡೆಲ್ಲಿ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಕಾಣುತ್ತಿದೆ.

IPL 2026

ಡೆಲ್ಲಿ ತಂಡ ತನ್ನ ಹಿಂದಿನ ಪಂದ್ಯದಲ್ಲಿ ಎಸ್‌ಆರ್‌ಎಚ್ ವಿರುದ್ಧ ಸೋಲು ಕಂಡಿದೆ. ಈ ಪಂದ್ಯದಲ್ಲಿ ಪತುಮ್ ನಿಸ್ಸಂಕಾ, ಕೆಎಲ್ ರಾಹುಲ್ ಉತ್ತಮ ಆರಂಭವನ್ನು ನೀಡಲಿಲ್ಲ. ಹೀಗಾಗಿ ಈ ಬ್ಯಾಟರ್‌ಗಳ ಮೇಲೆ ಒತ್ತಡವಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ನಿತೀಶ್ ರಾಣಾ, ಸಮೀರ್ ರಿಜ್ವಿ ರನ್‌ ಕಲೆ ಹಾಕುತ್ತಿದ್ದು ಭರವಸೆ ಮೂಡಿಸಿದ್ದಾರೆ. ಡೇವಿಡ್ ಮಿಲ್ಲರ್, ಟ್ರಿಸ್ಟನ್‌ ಸ್ಟಬ್ಸ್‌, ಆಶುತೋಷ್ ಶರ್ಮಾ ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡುವ ಕ್ಷಮತೆ ಹೊಂದಿದ್ದಾರೆ.

ಬಲಿಷ್ಠ ಬೌಲಿಂಗ್

ಡೆಲ್ಲಿ ತಂಡದ ಬೌಲಿಂಗ್ ವಿಭಾಗದಲ್ಲಿ ಮುಕೇಶ್‌ ಕುಮಾರ್, ಲುಂಗಿ ಎನ್‌ಗಿಡಿ, ಟಿ ನಟರಾಜನ್‌ ತಮ್ಮ ಶಿಸ್ತುಬದ್ಧ ದಾಳಿಯಿಂದ ಎದುರಾಳಿಗಳನ್ನು ಕಾಡಬಲ್ಲರು. ಸ್ಪಿನ್ ಬೌಲರ್‌ ಅಕ್ಷರ್ ಪಟೇಲ್, ಕುಲ್‌ದೀಪ್‌ ಯಾದವ್ ರನ್‌ಗಳಿಗೆ ಕಡಿವಾಣ ಹಾಕಿ ವಿಕೆಟ್‌ ಬೇಟೆ ನಡೆಸಬೇಕಿದೆ.

IPL 2026

ಲೀಗ್‌ನಲ್ಲಿ ಪಂಜಾಬ್ ಕಿಂಗ್ಸ್‌ ಸ್ಥಿರ ಪ್ರದರ್ಶನ ನೀಡುತ್ತಿರುವುದು ತಂಡದ ಆತ್ಮವಿಶ್ವಾಸವನ್ನು ಇಮ್ಮಡಿ ಮಾಡಿದೆ. ಆರಂಭಿಕರಾಗಿ ಕಾಣಿಸಿಕೊಳ್ಳುವ ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರನ್‌ ಸಿಂಗ್, ಕೂಪರ್ ಕೋನೊಲೆ, ನಾಯಕ ಶ್ರೇಯಸ್ ಅಯ್ಯರ್, ನೇಹಲ್ ವಧೇರಾ ಸ್ಥಿರ ಪ್ರದರ್ಶನ ನೀಡುತ್ತಿರುವುದು ತಂಡದ ಚಿಂತೆಯನ್ನು ದೂರ ಮಾಡಿದೆ. ಬೌಲಿಂಗ್‌ನಲ್ಲಿ ಅರ್ಷದೀಪ್ ಸಿಂಗ್, ಜೇವಿಯರ್ ಬರ್ಟಲೆಟ್‌, ಮಾರ್ಕೊ ಜಾನ್ಸನ್‌, ವಿಜಯ್ ಕುಮಾರ್ ವೇಶಾಖ್ ತಮ್ಮ ವಿಭಿನ್ನ ಬೌಲಿಂಗ್‌ನಿಂದ ಎದುರಾಳಿಗಳನ್ನು ಕಾಡಬಲ್ಲರು. ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದಿರುವ ಯುಜುವೇಂದ್ರ ಚಾಹಲ್‌ ಮೋಡಿ ಮಾಡಿದರೆ ಇನ್ನೊಂದು ಗೆಲುವಿನ ಆಸೆ ಫಲಿಸುತ್ತದೆ.

ಪಂದ್ಯದ ಸಮಯ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್‌ ನೆಟ್‌ವರ್ಕ್‌

ಬಿಗ್‌ ಹಿಟ್ಟರ್‌ಗಳು ಕಣಕ್ಕೆ

ಶನಿವಾರ ನಡೆಯುವ ಎರಡನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿರಲಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಟ ನಡೆಸಲಿವೆ. ಜೈಪೂರ್‌ದಲ್ಲಿ ನಡೆಯುವ ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಎರಡೂ ತಂಡಗಳಲ್ಲಿ ಬಿಗ್ ಹಿಟ್ಟರ್‌ಗಳು ಇದ್ದು ಕದನ ಕುತೂಹಲ ಮೂಡಿಸಿದೆ. ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್‌ ಚುಟುಕು ಫಾರ್ಮೆಟ್‌ಗೆ ಹೊಂದುವಂತೆ ಬ್ಯಾಟ್ ಮಾಡುತ್ತಿದ್ದಾರೆ. ಇನ್ನು ಎಸ್‌ಆರ್‌ಎಚ್‌ ತಂಡದಲ್ಲಿ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್‌ ಅಭಿಮಾನಿಗಳನ್ನು ರಂಜಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಲೀಗ್‌ನ 36ನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಪಂದ್ಯದ ಸಮಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್‌ ನೆಟ್‌ವರ್ಕ್‌

Story first published: Friday, April 24, 2026, 15:36 [IST]
Other articles published on Apr 24, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+