Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಇಂದು RCBಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು: ಕುತೂಹಲಕಾರಿ ಪಂದ್ಯಕ್ಕೆ ಇದೆಯಾ ಮಳೆಯ ಆತಂಕ!

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಶನಿವಾರ ಎರಡು ಪಂದ್ಯಗಳು ನಡೆಯಲಿದೆ. ಇಂದಿನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಣಗಳೂರು ತಮಡಗಳು ಮುಖಾಮುಖಿಯಾಗುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಎರಡು ತನಡಗಳು ಕೂಡ ಸಂಪೂರ್ಣವಾಗಿ ಸಜ್ಜಾಗಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನಿಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಆಡಿರುವ 9 ಪಂದ್ಯಗಳಲ್ಲಿ ಕೇವಲ 3 ಗೆಲುವು ಮಾತ್ರವೇ ಸಾಧಿಸಿದೆ. ಹೀಗಾಗಿ 6 ಅಂಗಳನ್ನು ಹೊಂದಿರುವ ವಾರ್ನರ್ ಪಡೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ ಕೊನೆಯ ನಾಲ್ಕು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೂರು ಪಂದ್ಯಗಳನ್ನು ಗೆದ್ದಿದ್ದು ಖಮಡಿತವಾಗಿಯೂ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಅದರಲ್ಲೂ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ವಿರುದ್ಧ 130 ರನ್‌ಗಳಿಗ್ಎ ಆಲೌಟ್ ಆಗಿದ್ದರೂ ಅದ್ಭುತವಾಗಿ ರನ್ ರಕ್ಷಣೆ ಮಾಡಿಕೊಂಡು ಪಂದ್ಯವನ್ನು ಗೆದ್ದುಕೊಂಡಿರುವುದು ಗಮನಾರ್ಹ.

DC vs RCB: could rain spoil the game between Delhi Capitals vs Royal Challengers Bangalore?

ಇನ್ನು ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಉತ್ತಮವಾಗಿದ್ದು ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದುಕೊಳ್ಳುವ ಸನಿಹದಲ್ಲಿದೆ. ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅದರದ್ದೇ ತವರಿನಲ್ಲಿ ಮಣಿಸಿರುವ ಆರ್‌ಸಿಬಿ ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಇನ್ನು ಆರ್‌ಸಿಬಿ ತಂಡದಲ್ಲಿ ಮೊಹಮ್ಮದ್ ಸಿರಾಜ್ ಜೊತೆಗೆ ಜೋಶ್ ಹೇಜಲ್‌ವುಡ್ ಕೂಡ ಉತ್ತಮ ಲಯದಲ್ಲಿದ್ದು ಕಳೆದ ಪಂದ್ಯದಲ್ಲಿ ಕರ್ಣ್ ಶರ್ಮಾ ಕೂಡ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದರು. ಹೀಗಾಗಿ ಇವರು ಅದ್ಭುತ ಬೌಲಿಂಗ್ ಪ್ರದರ್ಶನ ಈ ಪಂದ್ಯದಲ್ಲಿಯೂ ಮುಂದುವರಿಯಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.

ಪಂದ್ಯಕ್ಕೆ ಅಡ್ಡಿಯಾಗಲಿದೆಯಾ ಮಳೆ

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿದೆ. ಈ ಪಂದ್ಯಕ್ಕೆ ಮಳೆಯ ಆತಂಕವಿಲ್ಲದ ಕಾರಣ ಸಂಪೈರ್ಣ 40 ಓವರ್‌ಗಳ ಪಂದ್ಯ ನಿರಾತಂಕವಾಗಿ ನಡೆಯಲಿದೆ. accuweather.com ಮಾಹಿತಿಯ ಪ್ರಕಾರ ಪಂದ್ಯದ ಅವಧಿಯಲ್ಲಿ ಮಳೆಯಾಗುವ ಯಾವ ಸಾರ್ಧಯತೆಗಳು ಕೂಡ ಇಲ್ಲ. ಇನ್ನು ಪಂದ್ಯದ ಸಂದರ್ಭದಲ್ಲಿ 27-32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರುವ ಸಾಧ್ಯತೆಯಿದೆ.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ರಿಲೀ ರೊಸೊವ್, ಪ್ರಿಯಮ್ ಗಾರ್ಗ್, ಅಕ್ಷರ್ ಪಟೇಲ್, ರಿಪಾಲ್ ಪಟೇಲ್, ಅಮನ್ ಹಕೀಮ್ ಖಾನ್, ಕುಲದೀಪ್ ಯಾದವ್, ಅನ್ರಿಚ್ ನಾರ್ಕಿಯಾ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಮುಖೇಶ್ ಕುಮಾರ್, ರೋವ್‌ಮನ್ ಪೊವೆಲ್, ಪೃಥ್ವಿ ಶಾ, ಲಲಿತ್ ಯಾದವ್, ಚೇತನ್ ಸಕರಿಯಾ, ಯಶ್ ಧುಲ್, ವಿಕ್ಕಿ ಒಸ್ತ್ವಾಲ್ ಮತ್ತು ಅಭಿಷೇಕ್ ಪೊರೆಲ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್‌ವೆಲ್, ವಿಜಯ್‌ಕುಮಾರ್ ವೈಶಾಕ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಜ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್ ಮತ್ತು ಹಿಮಾಂಶು ಶರ್ಮಾ.

Story first published: Saturday, May 6, 2023, 12:25 [IST]
Other articles published on May 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+