Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs RR: ರಾಯಲ್ಸ್‌ಗೆ ಶಾಕ್‌ ನೀಡಿ ಕ್ಯಾಪಿಟಲ್ಸ್‌ ಪ್ಲೇ ಆಫ್‌ ಆಸೆ ಜೀವಂತ

ನವದೆಹಲಿ: ವೇಗಿ ಮಿಚೆಲ್ ಸ್ಟಾರ್ಕ್‌ (40ಕ್ಕೆ 4) ಹಾಗೂ ಬ್ಯಾಟರ್‌ಗಳ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌)ನ 62ನೇ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕ ಕೆಎಲ್ ರಾಹುಲ್ ಹಾಗೂ ಅಭಿಷೇಕ್ ಪೋರೆಲ್‌ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಪವರ್‌ ಪ್ಲೇನಲ್ಲಿ ಪವರ್ ಫುಲ್ ಬ್ಯಾಟಿಂಗ್ ನಡೆಸಿತು. ಮೊದಲ ವಿಕೆಟ್‌ಗೆ ಈ ಜೊಡಿ 10.1 ಓವರ್‌ಗಳಲ್ಲಿ 105 ರನ್‌ಗಳ ಜೊತೆಯಾಟವನ್ನು ನೀಡಿತು. ಈ ವೇಳೆ ಅಭಿಷೇಕ್ ಪೋರೆಲ್‌ 7 ಬೌಂಡರಿ, 1 ಸಿಕ್ಸರ್ ಸಹಾಯದಿಂದ 51 ರನ್‌ ಸಿಡಿಸಿದರು. ಯುವ ಆಟಗಾರ ಸಾಹಿಲ್ ಪರಾಖ್ (9) ರನ್‌ ಕಲೆ ಹಾಕುವಲ್ಲಿ ವಿಫಲರಾದರು.

DC vs RR

ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ 42 ಎಸೆತಗಳಲ್ಲಿ 56 ರನ್‌ ಸೇರಿಸಿದರು. ಈ ವೇಳೆ 1 ಬೌಂಡರಿ, 3 ಸಿಕ್ಸರ್‌ಗಳನ್ನು ಬಾರಿಸಿ ಮಿಂಚಿದರು. ನಾಯಕ ಅಕ್ಷರ್ ಪಟೇಲ್‌ ಮಹತ್ವದ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಇವರು 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 34 ರನ್‌ ಬಾರಿಸಿ ಜಯದಲ್ಲಿ ಮಿಂಚಿದರು. ಅಂತಿಮವಾಗಿ ಡೆಲ್ಲಿ ತಂಡ 19.2 ಓವರ್‌ಗಳಲ್ಲಿ 5 ವಿಕೆಟ್‌ಗೆ 197 ರನ್‌ ಸೇರಿಸಿತು.

ಧ್ರುವ್‌, ಪರಾಗ್‌ ಅರ್ಧಶತಕ

ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ (12) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. 2ನೇ ವಿಕೆಟ್‌ಗೆ ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೇಲ್‌ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 34 ಎಸೆತಗಳಲ್ಲಿ 70 ರನ್‌ ಸೇರಿಸಿದರು. ಈ ಹಂತದಲ್ಲಿ ವೈಭವ್ ಸೂರ್ಯವಂಶಿ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 46 ರನ್ ಬಾರಿಸಿ ಔಟ್ ಆದರು.

DC vs RR

ಮೂರನೇ ವಿಕೆಟ್‌ಗೆ ನಾಯಕ ರಿಯಾನ್ ಪರಾಗ್ ಅವರು ಧ್ರುವ್ ಜುರೇಲ್ ಅವರಿಗೆ ಉತ್ತಮ ಸಾಥ್ ನೀಡಿದರು. ಇವರು 41 ಎಸೆತಗಳಲ್ಲಿ 72 ರನ್‌ ಸೇರಿಸಿತು. ಜುರೇಲ್‌ 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ 53 ರನ್‌ ಸಿಡಿಸಿದರು. ಪರಾಗ್‌ 3 ಬೌಂಡರಿ, 5 ಸಿಕ್ಸರ್ ಸಹಾಯದಿಂದ 51 ರನ್‌ ಬಾರಿಸಿ ಮಿಂಚಿದರು. ರಾಜಸ್ಥಾನ್ ರಾಯಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 193 ರನ್‌ ಸೇರಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ವೇಗದ ಬೌಲರ್‌ ಮಿಚೆಲ್‌ ಸ್ಟಾರ್ಕ್‌ ಅಬ್ಬರಿಸಿದರು. ಇವರು ಮಾಡಿದ 4 ಓವರ್‌ಗಳಲ್ಲಿ 40 ರನ್‌ ನೀಡಿ 4 ವಿಕೆಟ್‌ ಕಬಳಿಸಿದರು.

Story first published: Sunday, May 17, 2026, 23:59 [IST]
Other articles published on May 17, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+