DC vs SRH IPL 2024: ಸನ್ ರೈಸರ್ಸ್ ಹೈದರಾಬಾದ್ ಆರ್ಭಟಕ್ಕೆ ದಂಗಾದ ಡೆಲ್ಲಿ ಕ್ಯಾಪಿಟಲ್ಸ್; ; ಇಲ್ಲಿದೆ ಪಂದ್ಯದ ವಿವರ
ಶನಿವಾರ, ಏಪ್ರಿಲ್ 20ರಂದು ನವದೆಹಲಿ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 35ನೇ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸಸ್ ಹೈದರಾಬಾದ್ ತಂಡ 67 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಈ ಮೂಲಕ ಐಪಿಎಲ್ 2024ರಲ್ಲಿ ಸನ್‌ರೈಸಸ್ ಹೈದರಾಬಾದ್ ತಂಡ ಆಡಿದ 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲು ಅನುಭವಿಸಿದ್ದು, ಅಂಕಪಟ್ಟಿಯಲ್ಲಿ 10 ಅಂಕಗಳನ್ನು 2ನೇ ಸ್ಥಾನಕ್ಕೆ ಏರಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ 3 ಗೆಲುವು ಮತ್ತು 5 ಸೋಲುಗಳನ್ನು ಕಂಡಿದ್ದು, 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸಸ್ ಹೈದರಾಬಾದ್ ತಂಡ ಟ್ರಾವಿಸ್ ಹೆಡ್, ಶಹಬಾಜ್ ಅಹ್ಮದ್ ಅವರ ಅಬ್ಬರದ ಅರ್ಧಶತಕ ಮತ್ತು ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 266 ರನ್ ಗಳಿಸಿತ್ತು.
267 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಅವರ ಬಿರುಸಿನ ಅರ್ಧಶತಕದ ಹೊರತಾಗಿಯೂ 19.1 ಓವರ್‌ಗಳಲ್ಲಿ 199 ರನ್ ಮಾತ್ರ ಗಳಿಸಲು ಶಕ್ತವಾಯಿತು ಮತ್ತು 67 ರನ್‌ಗಳ ಸೋಲು ಅನುಭವಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಶಾ ಮತ್ತು ಡೇವಿಡ್ ವಾರ್ನರ್ ದೊಡ್ಡ ಮೊತ್ತ ಗಳಿಸಲು ಮತ್ತೊಮ್ಮೆ ವಿಫಲರಾದರು. ಮೊದಲ ಓವರ್‌ನ 4 ಎಸೆತಗಳಲ್ಲಿ 4 ಬೌಂಡರಿ ಬಾರಿಸಿ 16 ರನ್ ಗಳಿಸಿ ಅಬ್ಬರಿಸುತ್ತಿದ್ದ ಪೃಥ್ವಿ ಶಾ ಐದನೇ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಆ ಬಳಿಕ ಡೇವಿಡ್ ವಾರ್ನರ್ ಕೇವಲ 1 ರನ್ ಗಳಿಸಿ ಔಟಾದರೆ, ನಂತರ ಬಂದ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಐಪಿಎಲ್ 2024ರ ಅತಿ ವೇಗದ ಅರ್ಧಶತಕ ದಾಖಲಿಸಿದ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಕೇವಲ 18 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 7 ಸಿಕ್ಸರ್‌ಗಳ ಸಮೇತ 65 ರನ್ ಬಾರಿಸಿ ವಿಕೆಟ್ ನೀಡಿದರು.
ಇದೇ ವೇಳೆ ಮಧ್ಯಮ ಕ್ರಮಾಂಕದಲ್ಲಿ ಅಭಿಷೇಕ್ ಪೊರೆಲ್ 22 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 42 ರನ್ ಗಳಿಸಿ ಔಟಾದರು. ಟ್ರಿಸ್ಟಾನ್ ಸ್ಟಬ್ಸ್ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ನಾಯಕ ರಿಷಭ್ ಪಂತ್ 35 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 44 ರನ್ ಗಳಿಸಿ ಕೊನೆಯವರಾಗಿ ಔಟಾದರು.
ಇನ್ನು ಬೌಲಿಂಗ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಟಿ ನಟರಾಜನ್ 4 ಓವರ್‌ಗಳಲ್ಲಿ 19 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ನಿತೀಶ್ ರೆಡ್ಡಿ 2.1 ಓವರ್‌ಗಳಲ್ಲಿ 17 ರನ್ ನೀಡಿ 2 ವಿಕೆಟ್ ಪಡೆದರೆ, ಮಯಾಂಕ್ ಮಾರ್ಕಂಡೆ 2 ಓವರ್‌ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್‌ನಲ್ಲಿ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಜೋಡಿ ಮೊದಲ ವಿಕೆಟ್‌ಗೆ 131 ರನ್‌ಗಳ ದಾಖಲೆಯ ಜೊತೆಯಾಟ ನಿರ್ಮಿಸಿತು.
ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 2 ಬೌಂಡರಿ ಹಾಗೂ 6 ಸಿಕ್ಸರ್ ಸಮೇತ 46 ರನ್ ಗಳಿಸಿ ಔಟಾದರೆ, ಟ್ರಾವಿಸ್ ಹೆಡ್ 32 ಎಸೆತಗಳಲ್ಲಿ 11 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಮೂಲಕ 89 ರನ್ ಸಿಡಿಸಿದರು.
ಆ ಬಳಿಕ ಏಡೆನ್ ಮಾರ್ಕ್ರಾಮ್ 1 ರನ್, ಹೆನ್ರಿಚ್ ಕ್ಲಾಸೆನ್ 15 ರನ್, ನಿತೀಶ್ ರೆಡ್ಡಿ 37 ರನ್ ಶಹಬಾಜ್ ಅಹ್ಮದ್ 29 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 59 ರನ್ ಗಳಿಸಿದರು. ಅಬ್ದುಲ್ ಸಮದ್ 13 ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕುಲದೀಪ್ ಯಾದವ್ 4 ಓವರ್‌ಗಳಲ್ಲಿ 19 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಮುಕೇಶ್ ಕುಮಾರ್ ಮತ್ತು ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications