DC vs SRH IPL 2024: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಬೃಹತ್ ಮೈಲಿಗಲ್ಲು ಸ್ಥಾಪಿಸಿದ ಫ್ರೇಸರ್-ಮೆಕ್‌ಗುರ್ಕ್
ಶನಿವಾರ, ಏಪ್ರಿಲ್ 20ರಂದು ನವದೆಹಲಿ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 35ನೇ ಪಂದ್ಯದಲ್ಲಿ ಸನ್‌ರೈಸಸ್ ಹೈದರಾಬಾದ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 67 ರನ್‌ಗಳ ಸುಲಭ ಗೆಲುವು ದಾಖಲಿಸಿತು.
ಇದೇ ವೇಳೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ವೇಗವಾಗಿ ಅರ್ಧಶತಕ ಗಳಿಸಿದ ಸಾಧನೆ ಮಾಡಿದರು.

ಸನ್‌ರೈಸಸ್ ಹೈದರಾಬಾದ್ ವಿರುದ್ಧ ಯುವ ಬ್ಯಾಟರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಸ್ಫೋಟಕ ಬ್ಯಾಟಿಂಗ್ ಆಡುವುದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರಬಲ ಹೋರಾಟವನ್ನು ನಡೆಸಿತು. ಆದಾಗ್ಯೂ, ಅವರ ವಿಕೆಟ್ ಬೀಳುತ್ತಿದ್ದಂತೆಯೇ ಡೆಲ್ಲಿ ಪ್ರತಿರೋಧಕ್ಕೆ ಕಡಿವಾಣ ಬಿತ್ತು.
ಐಪಿಎಲ್ 2024ರ ಋತುವಿನ ವೇಗದ ಅರ್ಧಶತಕ ಬಾರಿಸಿದ ಜೇಕ್ ಫ್ರೇಸರ್-ಮೆಕ್‌ಗುರ್ಕ್, ಈ ಸಾಧನೆ ಮಾಡಲು ಕೇವಲ 15 ಎಸೆತಗಳನ್ನು ತೆಗೆದುಕೊಂಡರು. ಅಲ್ಲದೆ, ಐಪಿಎಲ್ ಪಂದ್ಯಾವಳಿಯ ಇತಿಹಾಸದಲ್ಲಿ ಇದು ಜಂಟಿ 3ನೇ ವೇಗದ ಅರ್ಧಶತಕದ ಹೆಗ್ಗುರುತು ಸಾಧಿಸಿದರು.
ಇದಕ್ಕೂ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ಪರ 2016ರಲ್ಲಿ ಇದೇ ಸ್ಥಳದಲ್ಲಿ ಈಗ ನಿಷ್ಕ್ರಿಯವಾಗಿರುವ ಗುಜರಾತ್ ಲಯನ್ಸ್ ವಿರುದ್ಧ 17 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಕ್ರಿಸ್ ಮೋರಿಸ್ ಅವರ ದಾಖಲೆಯನ್ನು ಹಿಂದಿಕ್ಕಿದರು.

ರಿಷಭ್ ಪಂತ್ ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಾಗಿ ಭಾರತೀಯ ಬ್ಯಾಟರ್‌ಗಳ ವೇಗದ ಅರ್ಧಶತಕಗಳ ದಾಖಲೆಯನ್ನು ಈಗಲೂ ಹೊಂದಿದ್ದಾರೆ.
2019ರ ಅವೃತ್ತಿಯಲ್ಲಿ ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಿಷಭ್ ಪಂತ್ 18 ಎಸೆತಗಳಲ್ಲಿ ಅರ್ಧಶತಕದ ದಾಖಲೆ ಮಾಡಿದ್ದರು. ಇನ್ನು ಪೃಥ್ವಿ ಶಾ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಕೂಡ ತಲಾ 18 ಮತ್ತು 19 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದಾರೆ.
ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅತಿವೇಗದ ಅರ್ಧಶತಕ ಗಳಿಸಿದವರು
ಜೇಕ್ ಫ್ರೇಸರ್-ಮೆಕ್‌ಗುರ್ಕ್ - vs SRH, 15 ಎಸೆತಗಳು, 2024
ಕ್ರಿಸ್ ಮೋರಿಸ್ - vs ಗುಜರಾತ್ ಲಯನ್ಸ್, 17 ಎಸೆತಗಳು, 2016
ರಿಷಬ್ ಪಂತ್ - vs ಮುಂಬೈ ಇಂಡಿಯನ್ಸ್, 18 ಎಸೆತಗಳು, 2019
ಪೃಥ್ವಿ ಶಾ - vs ಕೆಕೆಆರ್, 18 ಎಸೆತಗಳು, 2021
ಟ್ರಿಸ್ಟಾನ್ ಸ್ಟಬ್ಸ್ - vs ಮುಂಬೈ ಇಂಡಿಯನ್ಸ್, 19 ಎಸೆತಗಳು, 2024
ತನ್ನ ಚೊಚ್ಚಲ ಐಪಿಎಲ್‌ನಲ್ಲಿ ಮಿಂಚುತ್ತಿರುವ ಜೇಕ್ ಫ್ರೇಸರ್-ಮೆಕ್‌ಗುರ್ಕ್
ಆಸ್ಟ್ರೇಲಿಯಾದ ಯುವ ಬ್ಯಾಟರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರು ಗಾಯಾಳು ಲುಂಗಿ ಎನ್‌ಗಿಡಿಯ ಬದಲಿಯಾಗಿ ಬಂದಾಗಿನಿಂದ, ವಿಶ್ವ ಕ್ರಿಕೆಟ್‌ನಲ್ಲಿ ಅತ್ಯಂತ ಭರವಸೆಯ ಬ್ಯಾಟರ್‌ಗಳಲ್ಲಿ ಒಬ್ಬರಾಗಿ ಪರಿಗಣಿಸಲ್ಪಟ್ಟಿದ್ದಾರೆ.
ಐಪಿಎಲ್ 2024ರಲ್ಲಿ ಆಡಿದ 3 ಪಂದ್ಯಗಳಲ್ಲಿ 46.66ರ ಸರಾಸರಿ ಮತ್ತು 222.22 ಸ್ಟ್ರೈಕ್ ರೇಟ್‌ನಲ್ಲಿ ಎರಡು ಅರ್ಧ ಶತಕಗಳೊಂದಿಗೆ 140 ರನ್ ಗಳಿಸಿ ಬಲಗೈ ಬ್ಯಾಟರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ 267 ರನ್‌ಗಳ ಬೃಹತ್ ಗುರಿ ಬೆನ್ನಟ್ಟುವಾಗ, ಜೇಕ್ ಫ್ರೇಸರ್-ಮೆಕ್‌ಗುರ್ಕ್ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು. ಅಂತಿಮವಾಗಿ ಔಟಾಗುವ ಮುನ್ನ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 7 ಸಿಕ್ಸರ್‌ಗಳ ನೆರವಿನಿಂದ 65 ರನ್ ಗಳಿಸಿದರು.
ಡೇವಿಡ್ ವಾರ್ನರ್ ಮತ್ತು ಪೃಥ್ವಿ ಶಾ ಬೇಗನೆ ಔಟಾದ ನಂತರ, ಜೇಕ್ ಫ್ರೇಸರ್-ಮೆಕ್‌ಗುರ್ಕ್ ಎದುರಾಳಿ ಬೌಲರ್‌ಗಳಿಗೆ ನಡುಕ ಹುಟ್ಟಿಸಿದ್ದರು. ಅಭಿಷೇಕ್ ಪೊರೆಲ್ ಅವರೊಂದಿಗೆ ಮೂರನೇ ವಿಕೆಟ್‌ಗೆ 84 ರನ್‌ಗಳ ಜೊತೆಯಾಟ ನಿರ್ಮಿಸಿದರು.
ಲಿಸ್ಟ್ ಎ ಕ್ರಿಕೆಟ್‌ನಲ್ಲಿ 29 ಎಸೆತಗಳಲ್ಲಿ ಅತಿವೇಗದ ಶತಕ ಬಾರಿಸಿದ ದಾಖಲೆಯನ್ನೂ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಹೊಂದಿದ್ದಾರೆ ಎಂಬುದು ಗಮನಾರ್ಹ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications