ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅರುಣ್ ಜೇಟ್ಲಿ ಕ್ರೀಡಾಂಗಣವನ್ನು ಲಸಿಕಾ ಕೇಂದ್ರವಾಗಿ ಬಳಸಿಕೊಳ್ಳುವಂತೆ ಸರ್ಕಾರಕ್ಕೆ DDCA ಪತ್ರ

DDCA offering to use Arun Jaitley Stadium as Covid-19 vaccination centre

ದೇಶಾದ್ಯಂತ ಕೊರೊನಾ ವೈರಸ್‌ನ ಎರಡನೇ ಅಲೆ ಈಗಾಗಲೇ ಉತ್ತುಂಗವನ್ನು ತಲಯಪಿದೆ. ಈ ಸಂದರ್ಭದಲ್ಲಿ ನಾಗರೀಕರಿಗೆ ಲಸಿಕೆ ಹಾಕುವ ಕಾರ್ಯಕ್ರಮಗಳು ಕೂಡ ನಡೆಯುತ್ತಿದೆ. ಇದಕ್ಕಾಗಿ DDCA ದೆಹಲಿಯ ಕ್ರೀಡಾಂಗಣವನ್ನು ಬಳಸಿಕೊಳ್ಳುವಂತೆ ಸರ್ಕಾರಕ್ಕೆ ಮನವಿಯನ್ನು ಮಾಡಿದೆ.

ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೊಸಿಯೇಶನ್‌ ಈ ಬಗ್ಗೆ ಸರ್ಕಾರಕ್ಕೆ ಪತ್ರವನ್ನು ಬರೆದಿದೆ. ಕೊರೊನಾ ವೈರಸ್‌ನ ಲಸಿಕೆಯನ್ನು ಹಾಕಲು ಉಪಯೋಗಪಡಿಸಿಕೊಳ್ಳುವಂತೆ ಸರ್ಕಾರಕ್ಕೆ ಈ ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಈ ಕ್ರೀಡಾಂಗಣವನ್ನು ಬಳಸಿಕೊಳ್ಳಬಹುದು ಎಂದು ಪತ್ರದಲ್ಲಿ ತಿಳಿಸಿದೆ ಎಂದು ದೆಹಲಿ ಕ್ರಿಕೆಟ್ ಬೋರ್ಡ್‌ನ ಅಧ್ಯಕ್ಷ ರೋಹನ್ ಜೇಟ್ಲಿ ಖಚಿತಪಡಿಸಿದ್ದಾರೆ.

ಟೆಸ್ಟ್‌ ವೃತ್ತಿ ಬದುಕಿನ ಗಾಳಿಸುದ್ದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಭುವನೇಶ್ವರ್ಟೆಸ್ಟ್‌ ವೃತ್ತಿ ಬದುಕಿನ ಗಾಳಿಸುದ್ದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಭುವನೇಶ್ವರ್

ಈ ಬಾರಿಯ ಐಪಿಎಲ್ ಟೂರ್ನಿಯನ್ನು ಮುಂದೂಡುವ ಮುನ್ನ ಮೇ 2ನೇ ತಾರೀಕಿನವರೆಗೂ ದೆಹಲಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಡಿಸಲಾಗಿತ್ತು. ಆದರೆ ಅದಾದ ನಂತರ ಐಪಿಎಲ್ ಬಯೋಬಬಲ್‌ನ ಒಳಗೆ ಕೊರೊನಾ ವೈರಸ್ ಪ್ರಕರಣಗಳು ಬೆಳಕಿಗೆ ಬರಲು ಆರಂಭಿಸಿದವು. ಹೀಗಾಗಿ ಟೂರ್ನಿಯನ್ನು ಅನಿರ್ದಿಷ್ಠಾವಧಿಗೆ ಮುಂದೂಡುವ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ.

ದೆಹಲಿ ಸರ್ಕಾರಕ್ಕೆ ರೋಹನ್ ಜೇಟ್ಲಿ ಬರೆದಿರುವ ಪತ್ರದಲ್ಲಿ ಕ್ರೀಡಾಂಗಣವನ್ನು ಲಸಿಕಾ ಕೇಂದ್ರವನ್ನಾಗಿ ಬಳಸಿಕೊಳ್ಳಯವಂತೆ ಸಲಹೆಯನ್ನು ನೀಡಿದ್ದಾರೆ. ಈ ಕ್ರೀಡಾಂಗಣದಲ್ಲಿ ಕನಿಷ್ಟ 10,000 ಜನರಿಗೆ ನಿತ್ಯವೂ ಕೊರೊನಾ ವೈರಸ್ ಲಸಿಕೆಯನ್ನು ಹಾಕಿಸಿಕೊಳ್ಳಬಹುದಾಗಿದೆ.

Story first published: Monday, May 17, 2021, 9:57 [IST]
Other articles published on May 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X