Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಉಚಿತ ಪಾಸ್‌ಗಳನ್ನು 80 ಸಾವಿರಕ್ಕೆ ಮಾರಾಟ ಮಾಡುತ್ತಿದ್ದವರ ಬಂಧನ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳ ಉಚಿತ ಪಾಸ್‌ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ. ಈ ಬಗ್ಗೆ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ಪ್ರತಿ ಪಂದ್ಯದಲ್ಲೂ ನೀಡಲಾಗುವ ಉಚಿತ ಪಾಸ್‌ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಿ ಲಕ್ಷಾಂತರ ರೂಪಾಯಿಗಳನ್ನು ಲೂಟಿ ಹೊಡೆಯುತ್ತಿದ್ದ ಸಂಘಟಿತ ಜಾಲವನ್ನು ದೆಹಲಿ ಪೊಲೀಸರು ಭೇದಿಸುವಲ್ಲಿ ಸಫಲರಾಗಿದ್ದಾರೆ. ಕ್ರೀಡಾಂಗಣದ ಒಳಗಿನಿಂದ ಕಾರ್ಯನಿರ್ವಹಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ಕ್ರೀಡಾಂಗಣದ ಪಕ್ಕದಲ್ಲಿರುವ ಪೆಟ್ರೋಲ್ ಪಂಪ್‌ನ ಉದ್ಯೋಗಿ ಮತ್ತು ಹಲವಾರು ಯುವಕರು ಈ ದಂಧೆಯಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಈ ಟಿಕೆಟ್‌ಗಳನ್ನು ರಸ್ತೆ ಬದಿಯಲ್ಲಿ ಮಾರಾಟ ಮಾಡುವ ಸಣ್ಣ ಗ್ಯಾಂಗ್ ಅಲ್ಲ. ಈ ಜಾಲವನ್ನು ಸಂಪೂರ್ಣ ಪ್ಲ್ಯಾನಿಂಗ್‌ ನೊಂದಿಗೆ ನಡೆಸುವ ವಿಐಪಿ ಪಾಸ್‌ ಸಿಂಡಿಕೇಟ್ ಎಂದು ಪತ್ತೆ ಹಚ್ಚಲಾಗಿದೆ.

DDCA

ಈ ಸಿಂಡಿಕೇಟ್‌ ಪಂದ್ಯಕ್ಕೂ ಮುನ್ನ ಟಿಕೆಟ್‌ ಬೇಡಿಕೆಯನ್ನು ಹೆಚ್ಚಿಸಲಾಗುತ್ತದೆ. ಮತ್ತೆ ಅದಕ್ಕೆ ಅನುಗುಣವಾಗಿ ಬೆಲೆ ನಿರ್ಧರಿಸಲಾಗುತ್ತದೆ ಎಂದು ಆರೋಪಿಗಳು ಪೊಲೀಸರ ಮುಂದೆ ಸ್ಪಷ್ಟ ಪಡಿಸಿದ್ದಾರೆ. ಸ್ಟಾರ್ ಆಟಗಾರರಾದ ವಿರಾಟ್‌ ಕೊಹ್ಲಿ ಅವರಂತ ಆಟಗಾರರು ಆಡುವ ಪಂದ್ಯಗಳ ಟಿಕೆಟ್‌ ಬೆಲೆಗಳು ಗಗನಕ್ಕೇರಿವೆ ಎಂದು ತಿಳಿದು ಬಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯಗಳ ಸಮಯದಲ್ಲಿ ಹೆಚ್ಚಿನ ಟಿಕೆಟ್‌ಗಳು ಕಾಳ ಸಂತೆಯಲ್ಲಿ ಮಾರಾಟವಾಗಿವೆ ಎಂದು ತನಿಖೆಯ ವೇಳೆ ತಿಳಿದು ಬಂದಿದೆ. ಜನ ಸಂದಣಿ ಹಾಗೀ ವಿರಾಟ್ ಕೊಹ್ಲಿ ಅವರ ಪ್ರಾಮುಖ್ಯತೆ ಬಳಸಿಕೊಂಡು ಟಿಕೆಟ್‌ ದರವನ್ನು ನಿಗದಿ ಪಡಿಸಲಾಗಿತ್ತು. ಉಚಿತ ಪಾಸ್‌ಗಳನ್ನು 80 ಸಾವಿರ ರೂ. ವರೆಗೆ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಸಾಮಾನ್ಯ ಪಂದ್ಯಗಳ ಟಿಕೆಟ್‌ಗಳನ್ನು 8 ಸಾವಿರದಿಂದ 20 ಸಾವಿರದ ವರೆಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತನಿಖೆಯ ವೇಳೆ ಪತ್ತೆ ಹಚ್ಚಿದ್ದಾರೆ. ಆದರೆ ಹೈ ಪ್ರೊಫೈಲ್ ಪಂದ್ಯಗಳಿಗೆ ಬೆಲೆಗಳನ್ನು ಹಲವಾರು ಬಾರಿ ಹೆಚ್ಚಿಸಲಾಗಿತ್ತು. ಮೂಲಗಳ ಪ್ರಕಾರ, ಪಂದ್ಯ ಪ್ರಾರಂಭವಾಗುವ ಸ್ವಲ್ಪ ಸಮಯದ ಮೊದಲು ದರಗಳು ಮತ್ತಷ್ಟು ಹೆಚ್ಚಾಗುತ್ತಿದ್ದವು ಎಂದು ತಿಳಿದು ಬಂದಿದೆ.

ಜಾಲ ಬಲೆಗೆ ಬಿದ್ದಿದ್ದು ಹೇಗೆ?

ಉಚಿತ ಪಾಸ್‌ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಕಳ್ಳಾಟದ ಜಾಲವನ್ನು ಪತ್ತೆ ಹಚ್ಚಿ ಮುಕೀಮ್, ಗುಫ್ರಾನ್ ಮತ್ತು ಮೊಹಮ್ಮದ್ ಫೈಸಲ್ ಅವರನ್ನು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಬಂಧಿತರು ಹಲವು ವಿಷಯಗಳನ್ನು ಬಹಿರಂಗ ಪಡಿಸಿದ್ದಾರೆ. ಬಂಧಿತರ ಹೇಳಿಕೆಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದರು ಎಂದು ತಿಳಿದು ಬಂದಿದೆ.

Story first published: Sunday, May 17, 2026, 14:08 [IST]
Other articles published on May 17, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+