For Quick Alerts
ALLOW NOTIFICATIONS  
For Daily Alerts
 

ಧೋನಿ ನನ್ನ ಮೇಲಿಟ್ಟಿದ್ದ ನಂಬಿಕೆಯೇ ನನ್ನ ಯಶಸ್ಸಿನ ಶಕ್ತಿ : ದೀಪಕ್ ಚಾಹರ್

Deepak Chahar credits MS Dhoni for his IPL bounceback

ಟೀಮ್ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಕುರಿತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ದೀಪಕ್ ಚಾಹರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ತಾನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಕಾರಣ ಎಂಎಸ್ ಧೋನಿ ಎಂದು ದೀಪಕ್ ಚಾಹರ್ ಹೇಳಿಕೊಂಡಿದ್ದಾರೆ.

ಕಳೆದ ಬಾರಿ ಯುಎಇಯಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತ್ತು. ಚೆನ್ನೈ ತಂಡದ ಬೌಲರ್ ದೀಪಕ್ ಚಹರ್ ಕೂಡ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಲಿಲ್ಲ. ಆದರೆ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಪ್ರಮುಖ ವಿಕೆಟ್‍ಗಳನ್ನು ಪಡೆದುಕೊಂಡು ಯಶಸ್ವಿ ಪ್ರದರ್ಶನ ನೀಡಿರುವ ದೀಪಕ್ ಚಾಹರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

'ಎಂಎಸ್ ಧೋನಿ ನಾಯಕತ್ವದಲ್ಲಿ ಆಟವನ್ನಾಡಲು ನನಗೆ ತುಂಬಾ ಉತ್ಸಾಹವೆನಿಸುತ್ತದೆ, ಈಗಾಗಲೇ ನಾನು ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ನಿಜ ಹೇಳಬೇಕೆಂದರೆ ಧೋನಿ ನಾಯಕತ್ವದಲ್ಲಿ ನನ್ನ ಆಟವನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋದೆ, ಜವಾಬ್ದಾರಿಗಳನ್ನು ಹೇಗೆ ನಿಭಾಯಿಸಬೇಕೆಂದು ಧೋನಿ ನೀಡಿದ ಸಲಹೆಯ ಮೇರೆಗೆ ಕಲಿತೆ. ನನ್ನ ಮೇಲೆ ನಂಬಿಕೆ ಇಟ್ಟು ಬೌಲಿಂಗ್‌ ಮಾಡುವ ಅವಕಾಶವನ್ನು ನೀಡುತ್ತಿದ್ದರು, ಪ್ರಸ್ತುತ ಟೂರ್ನಿಯಲ್ಲಿ ನನ್ನ ಉತ್ತಮ ಪ್ರದರ್ಶನಕ್ಕೆ ಧೋನಿ ನನ್ನ ಮೇಲಿಟ್ಟಿದ್ದ ನಂಬಿಕೆಯೇ ಕಾರಣ' ಎಂದು ದೀಪಕ್ ಚಾಹರ್ ಹೇಳಿಕೊಂಡಿದ್ದಾರೆ.

Story first published: Friday, May 21, 2021, 20:10 [IST]
Other articles published on May 21, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+