ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ನಲ್ಲಿ ಭುವನೇಶ್ವರ್ ಬದಲಿಗೆ ಈತ ಆಡಿದರೆ ಉತ್ತಮ ಎಂದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Deepak Chahar Is A Better Option Than Bhuvneshwar Kumar For T20 World Cup: Danish Kaneria

ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಭುವನೇಶ್ವರ್ ಕುಮಾರ್‌ಗಿಂತ ಭಾರತದ ಆಲ್‌ರೌಂಡರ್ ದೀಪಕ್ ಚಹಾರ್ ಉತ್ತಮ ಆಯ್ಕೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸೆಪ್ಟೆಂಬರ್ 28 ರಂದು ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಚಹಾರ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 4 ಓವರ್ ಬೌಲಿಂಗ್ ಮಾಡಿದ ಅವರು, 24 ರನ್ ನೀಡಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ, ಪವರ್-ಹಿಟ್ಟರ್ ಟ್ರಿಸ್ಟಾನ್ ಸ್ಟಬ್ಸ್ ವಿಕೆಟ್‌ಗಳನ್ನು ಪಡೆದರು.

ವಿಶ್ವದ ಅತ್ಯುತ್ತಮ ಟಿ20 ಆಟಗಾರ ಈತ: ಭಾರತೀಯನನ್ನು ಹೊಗಳಿದ ವೇಯ್ನ್ ಪಾರ್ನೆಲ್ವಿಶ್ವದ ಅತ್ಯುತ್ತಮ ಟಿ20 ಆಟಗಾರ ಈತ: ಭಾರತೀಯನನ್ನು ಹೊಗಳಿದ ವೇಯ್ನ್ ಪಾರ್ನೆಲ್

ದೀಪಕ್ ಚಹಾರ್ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಸ್ಟ್ಯಾಂಡ್‌ಬೈ ಆಟಗಾರರ ಪಟ್ಟಿಯಲ್ಲಿ ಹೆಸರಿಸಲಾಗಿದೆ. ಭುವನೇಶ್ವರ್ ಕುಮಾರ್ ಏಷ್ಯಾಕಪ್‌ನಿಂದಲೂ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ, ಅದರಲ್ಲೂ ಕೊನೆಯ ಓವರ್ ಗಳಲ್ಲಿ ಅವರ ಬೌಲಿಂಗ್ ಕಳಪೆಯಾಗಿದೆ. 19ನೇ ಓವರ್ ನಲ್ಲಿ ಹೆಚ್ಚುವರಿ ರನ್ ಬಿಟ್ಟುಕೊಟ್ಟು ಟೀಕೆಗೆ ಗುರಿಯಾಗಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲೂ ಭುವನೇಶ್ವರ್ ಕುಮಾರ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಬೆನ್ನಲ್ಲೇ, ಡ್ಯಾನಿಶ್ ಕನೇರಿಯಾ ದೀಪಕ್ ಚಹಾರ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಸ್ವಿಂಗ್ ಇಲ್ಲದಿದ್ದರೆ ರನ್ ಹೊಡೆಯುತ್ತಾರೆ

ಸ್ವಿಂಗ್ ಇಲ್ಲದಿದ್ದರೆ ರನ್ ಹೊಡೆಯುತ್ತಾರೆ

"ಒಂದು ವಿಷಯ ಸ್ಪಷ್ಟವಾಗಿದೆ, ಸ್ವಿಂಗ್ ಇಲ್ಲದಿದ್ದರೆ, ಭುವನೇಶ್ವರ್ ಕುಮಾರ್ ಶಿಕ್ಷೆಗೆ ಗುರಿಯಾಗುತ್ತಾರೆ. ಸ್ಲಾಗ್ ಓವರ್‌ಗಳಲ್ಲಿ ಹೆಚ್ಚಿನ ರನ್ ಬಿಟ್ಟುಕೊಟ್ಟಿದ್ದಾರೆ. ಭುವನೇಶ್ವರ್‌ಗಿಂತ ದೀಪಕ್ ಚಹಾರ್ ಉತ್ತಮ ಆಯ್ಕೆಯಾಗಿದ್ದು, ಆಸ್ಟ್ರೇಲಿಯಾದ ಹಾರ್ಡ್ ಟ್ರ್ಯಾಕ್‌ಗಳಲ್ಲಿ ಅವರ ಬೌಲಿಂಗ್ ಪರಿಣಾಮಕಾರಿಯಾಗಿರಲಿದೆ" ಎಂದು ಹೇಳಿದ್ದಾರೆ.

ಅಲ್ಲದೆ, ದೀಪಕ್ ಚಹಾರ್ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ, ಭುವನೇಶ್ವರ್ ಕುಮಾರ್ ಬದಲಿಗೆ ಅವರಿಗೆ ಅವಕಾಶ ನೀಡಿದರೆ ಟೀಂ ಇಂಡಿಯಾಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Asia Cup 2022: ಜೆಮಿಮಾ ರೋಡ್ರಿಗಸ್ ಸ್ಫೋಟಕ ಬ್ಯಾಟಿಂಗ್; ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ

ಕೊನೆಯ ಓವರ್‌ಗಳಲ್ಲಿ ಹೆಚ್ಚಿನ ರನ್ ಬಿಟ್ಟುಕೊಡುತ್ತಾರೆ

ಕೊನೆಯ ಓವರ್‌ಗಳಲ್ಲಿ ಹೆಚ್ಚಿನ ರನ್ ಬಿಟ್ಟುಕೊಡುತ್ತಾರೆ

ಇತ್ತೀಚಿನ ದಿನಗಳಲ್ಲಿ ಭುವನೇಶ್ವರ್ ಭಾರತಕ್ಕೆ ಅಂತಿಮ ಓವರ್‌ಗಳಲ್ಲಿ, ವಿಶೇಷವಾಗಿ 19 ನೇ ಓವರ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎನ್ನುವುದು ಕಳವಳಕಾರಿ ವಿಚಾರವಾಗಿದೆ. ಹಿರಿಯ ವೇಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಟಿ20 ಪಂದ್ಯದಲ್ಲಿ 4 ಓವರ್ ಗಳಲ್ಲಿ ಯಾವುದೇ ವಿಕೆಟ್ ಪಡೆಯದೆ 52 ರನ್ ಬಿಟ್ಟುಕೊಟ್ಟಿದ್ದರು. ಮೂರನೇ ಟಿ20 ಪಂದ್ಯಗಳಲ್ಲಿ ಕ್ರಮವಾಗಿ 39 ರನ್ ನೀಡಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿದಾಗ ಗಳಿಸಿದ ಮೊತ್ತವನ್ನು ರಕ್ಷಿಸಿಕೊಳ್ಳುವಲ್ಲಿ ಬೌಲರ್ ಗಳು ವಿಫಲರಾಗುತ್ತಿದ್ದಾರೆ. 19ನೇ ಓವರ್ ಬೌಲಿಂಗ್ ಮಾಡುವ ಭುವನೇಶ್ವರ್ ಹೆಚ್ಚಿನ ರನ್ ಬಿಟ್ಟುಕೊಟ್ಟಿದ್ದಾರೆ.

ಸಿರಾಜ್ ಬಗ್ಗೆ ಕನೇರಿಯಾ ಪ್ರತಿಕ್ರಿಯೆ

ಸಿರಾಜ್ ಬಗ್ಗೆ ಕನೇರಿಯಾ ಪ್ರತಿಕ್ರಿಯೆ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಪಂದ್ಯಗಳಿಗೆ ಗಾಯಗೊಂಡಿರುವ ವೇಗಿ ಜಸ್ಪ್ರೀತ್ ಬುಮ್ರಾ ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಮುಂಬರುವ ಪಂದ್ಯಗಳಲ್ಲಿ ಅವರಿಗೆ ಆಡಲು ಅವಕಾಶ ಸಿಕ್ಕರೆ ಅದನ್ನು ಸಿರಾಜ್ ಉತ್ತಮವಾಗಿ ಬಳಸಿಕೊಳ್ಳಬೇಕಾಗುತ್ತದೆ ಎಂದು ಕನೇರಿಯಾ ಹೇಳಿದ್ದಾರೆ. ಭಾನುವಾರ (ಅಕ್ಟೋಬರ್ 2) ಗುವಾಹಟಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಯ ಎರಡನೇ ಟಿ20 ಪಂದ್ಯ ನಡೆಯಲಿದೆ.

"ಮೊಹಮ್ಮದ್ ಸಿರಾಜ್ ಅವರನ್ನು ದಕ್ಷಿಣ ಆಫ್ರಿಕಾ ಸರಣಿಗೆ ಕರೆಯಲಾಗಿದೆ. ಈ ಆಟಗಾರನು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾನೆ ಏಕೆಂದರೆ ಅವನು ಯಾವಾಗಲೂ ಉತ್ತಮ ಪ್ರದರ್ಶನ ನೀಡಲು ಬಯಸುತ್ತಾನೆ. ಸಿರಾಜ್ ವೇಗದ ಬೌಲರ್‌ನ ದೇಹ ಭಾಷೆಯನ್ನು ಹೊಂದಿದ್ದಾರೆ ಮತ್ತು ಅವಕಾಶ ಸಿಕ್ಕರೆ ಅದನ್ನು ಬಳಸಿಕೊಳ್ಳಬೇಕು" ಎಂದು ತಿಳಿದಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಮಿಂಚಿದ್ದ ಸಿರಾಜ್

ಟೆಸ್ಟ್ ಕ್ರಿಕೆಟ್‌ನಲ್ಲಿ ಮಿಂಚಿದ್ದ ಸಿರಾಜ್

ಮೊಹಮ್ಮದ್ ಸಿರಾಜ್‌ಗೆ ಆಸ್ಟ್ರೇಲಿಯಾ ನೆಲದಲ್ಲಿ ಆಡಿದ ಅನುಭವವಿದೆ ಎಂಬುದು ಕೂಡ ಮುಖ್ಯವಾಗುತ್ತದೆ. 2020-21 ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಆಡಿದ್ದ ಸಿರಾಜ್ ಮೂರು ಟೆಸ್ಟ್‌ಗಳಲ್ಲಿ 13 ವಿಕೆಟ್ ಪಡೆದು ಮಿಂಚಿದ್ದರು. ಇದರಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕೂಡ ಪಡೆದಿದ್ದರು.

ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಸ್ಟ್ಯಾಂಡ್‌ಬೈ ಆಟಗಾರರು : ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.

Story first published: Saturday, October 1, 2022, 20:09 [IST]
Other articles published on Oct 1, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X