Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕಿಂಗ್ಸ್‌ ಇಲೆವೆನ್ ಪಂಜಾಬ್‌ಗೆ ದೀಪಕ್ ಹೂಡಾ ಆಸರೆ

Deepak Hooda Brilliant Innings Against CSK: Highest IPL Score For Hooda

ಶೇಖ್ ಜಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ದೀಪಕ್ ಹೂಡ ಅಬ್ಬರದಿಂದಾಗಿ ಕಿಂಗ್ಸ್‌ ಇಲೆವೆನ್ ಪಂಜಾಬ್‌ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದೆ. ಐಪಿಎಲ್ 13ನೇ ಆವೃತ್ತಿಯ ಪ್ಲೇ ಆಫ್ ಹಂತಕ್ಕೇರಲು ಅತ್ಯಂತ ಪ್ರಮುಖ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್‌ಗೆ ಬ್ಯಾಟಿಂಗ್‌ನಲ್ಲಿ ಹೂಡಾ ಜೀವದಾನ ನೀಡಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್‌ ಇಲೆವೆನ್ ಪಂಜಾಬ್ ಉತ್ತಮ ಆರಂಭ ಪಡೆದರೂ ನಂತರದಲ್ಲಿ ಎಡವಿತು. ಲುಂಗಿ ಎನ್‌ಗಿಡಿ ಬೌಲಿಂಗ್ ದಾಳಿಗೆ ತತ್ತರಿಸಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಕೆ.ಎಲ್ ರಾಹುಲ್ 29, ಮಯಾಂಕ್ ಅಗರ್ವಾಲ್ 26, ಕ್ರಿಸ್ ಗೇಲ್ 12, ನಿಕೋಲಸ್ ಪೂರನ್ 2, ಮಂದೀಪ್ ಸಿಂಗ್ 14 ಹೀಗೆ ಪ್ರಮುಖ ಬ್ಯಾಟ್ಸ್‌ಮನ್ಗಳು ಪೆವಿಲಿಯನ್ ಸೇರಿಕೊಂಡ್ರು.

113 ರನ್‌ಗೆ ಪ್ರಮುಖ ಆರು ವಿಕೆಟ್ ಕಳೆದುಕೊಂಡ ಕಿಂಗ್ಸ್‌ ಇಲೆವೆನ್ ಪಂಜಾಬ್‌ಗೆ ಹೂಡಾ ಇನ್ನಿಂಗ್ಸ್‌ ಸ್ವಲ್ಪ ಮಟ್ಟಿಗೆ ಜೀವತುಂಬಿತು. ಅಬ್ಬರದ ಬ್ಯಾಟಿಂಗ್ ಮಾಡಿದ ದೀಪಕ್ 30 ಎಸೆತಗಳಲ್ಲಿ 62 ರನ್‌ ಸಿಡಿಸಿದ್ರು. ಐಪಿಎಲ್‌ನಲ್ಲಿ ಎರಡನೇ ಅರ್ಧಶತಕ ದಾಖಲಿಸಿದ ಹೂಡಾ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿ ಮತ್ತು ನಾಲ್ಕು ಭರ್ಜರಿ ಸಿಕ್ಸರ್‌ಗಳಿದ್ದವು.

ಐಪಿಎಲ್‌ನಲ್ಲಿ ತನ್ನ ಗರಿಷ್ಠ ಸ್ಕೋರ್ ಕಲೆಹಾಕಿದ ದೀಪಕ್ ಆಟದಿಂದಾಗಿ ಕಿಂಗ್ಸ್‌ ಇಲೆವೆನ್ ಪಂಜಾಬ್ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 153 ರನ್ ಕಲೆಹಾಕಿದೆ. ಸಿಎಸ್‌ಕೆಗೆ 154ರನ್ ಟಾರ್ಗೆಟ್ ನೀಡಿದೆ.

Story first published: Monday, November 2, 2020, 10:01 [IST]
Other articles published on Nov 2, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+