Team India: ಮೊಹಮ್ಮದ್ ಸಿರಾಜ್ ನಂತರ ಭಾರತ ತಂಡಕ್ಕೆ ಮತ್ತೊಬ್ಬ ಡಿಎಸ್‌ಪಿ ಸೇರ್ಪಡೆ
ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ನಂತರ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಡಿಎಸ್‌ಪಿ ಸಿಕ್ಕಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು ಕ್ರೀಡೆಯಲ್ಲಿ ದೇಶಕ್ಕೆ ನೀಡಿದ ಕೊಡುಗೆಗಾಗಿ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್‌ಪಿ) ನೇಮಕಗೊಂಡಿದ್ದಾರೆ. ದೀಪ್ತಿ ಶರ್ಮಾ ಅವರು ಇತ್ತೀಚಿನ ದಿನಗಳಲ್ಲಿ ಡಿಎಸ್‌ಪಿ ಆಗಿರುವ ಎರಡನೇ ಭಾರತೀಯ ಕ್ರಿಕೆಟಿಗರಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಮೊಹಮ್ಮದ್ ಸಿರಾಜ್ ತೆಲಂಗಾಣದಲ್ಲಿ ಡಿಎಸ್‌ಪಿಯಾಗಿ ನೇಮಕಗೊಂಡಿದ್ದರು.
ದೀಪ್ತಿ ಶರ್ಮಾ ಅವರು ಕ್ರಿಕೆಟಿಗರಾಗಿ ದೇಶಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಜನವರಿ 27 ರಂದು ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಡಿಎಸ್‌ಪಿಯಾಗಿ ನೇಮಕಗೊಂಡರು. ಐಸಿಸಿ ಮಹಿಳಾ ಏಕದಿನ ಮತ್ತು ಟಿ20 ಅಂತಾರಾಷ್ಟ್ರೀಯ ತಂಡಗಳಗೆ ದೀಪ್ತಿ ಆಯ್ಕೆಯಾಗಿದ್ದಾರೆ. ಜನವರಿ 29 ಬುಧವಾರದಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ
ಡಿಎಸ್‌ಪಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ದೀಪ್ತಿ ಶರ್ಮಾ, ಖಾಕಿ ಸಮವಸ್ತ್ರವನ್ನು ಧರಿಸಿರುವ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. 'ಈ ಸಾಧನೆಯನ್ನು ಸಾಧಿಸಿದ್ದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಕುಟುಂಬಕ್ಕೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳಲು ಬಯಸುತ್ತೇನೆ. ಅವರ ಬೆಂಬಲ ಮತ್ತು ಆಶೀರ್ವಾದಗಳು ನನ್ನ ಪ್ರೇರಕ ಶಕ್ತಿಯಾಗಿವೆ. ಸೇವೆ ಮಾಡಲು ಈ ಅವಕಾಶಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೂ ನಾನು ಕೃತಜ್ಞನಾಗಿದ್ದೇನೆ. ಉತ್ತರ ಪ್ರದೇಶದ ಪೋಲೀಸ್‌ನಲ್ಲಿ ಡಿಎಸ್‌ಪಿಯಾಗಿ ಈ ಹೊಸ ಪಾತ್ರವನ್ನು ವಹಿಸಿಕೊಂಡ ನಾನು ನನ್ನ ಕರ್ತವ್ಯಗಳಿಗೆ ಸಂಪೂರ್ಣವಾಗಿ ಸಮರ್ಪಿತನಾಗಿರುತ್ತೇನೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತೇನೆ ಎಂದು ಭರವಸೆ ನೀಡುತ್ತೇನೆ. ನಿಮ್ಮೆಲ್ಲರ ಬೆಂಬಲಕ್ಕಾಗಿ ಮತ್ತೊಮ್ಮೆ ಧನ್ಯವಾದಗಳು ಎಂದು ದೀಪ್ತಿ ಶರ್ಮಾ ಬರೆದುಕೊಂಡಿದ್ದಾರೆ.
ದೀಪ್ತಿ ಶರ್ಮಾ ಅವರಿಗೆ 2024 ರ ವರ್ಷವು ಉತ್ತಮವಾಗಿತ್ತು. 2024ರಲ್ಲಿ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 24 ವಿಕೆಟ್‌ಗಳನ್ನು ಪಡೆದ ದೀಪ್ತಿ ಶರ್ಮಾ, ಟಿ20ಯಲ್ಲ 30 ವಿಕೆಟ್‌ಗಳನ್ನು ಪಡೆದಿದ್ದರು. ದೀಪ್ತಿ ಕೇವಲ ಬೌಲಿಂಗ್‌ನಲ್ಲಿ ಮಾತ್ರವಲ್ಲದೆ, ಬ್ಯಾಟಿಂಗ್‌ನಲ್ಲಿ ಭಾರತ ತಂಡಕ್ಕೆ ಉಪಯುಕ್ತ ಕೊಡುಗೆಗಳನ್ನು ಸಹ ನೀಡಿದ್ದರು.
ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ 2025 ಪ್ರಮುಖ ವರ್ಷವಾಗಿದೆ. ಏಕೆಂದರೆ ಈ ವರ್ಷ ಅವರು ತವರಿನಲ್ಲಿ ಏಕದಿನ ವಿಶ್ವಕಪ್ ಆಡಬೇಕಾಗಿದೆ. ದೀಪ್ತಿ ಶರ್ಮಾ ತನ್ನ ಆಲ್‌ರೌಂಡರ್ ಪ್ರದರ್ಶನದಿಂದ ಭಾರತ ಚೊಚ್ಚಲ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸುಬೇಕಾಗಿದೆ. ಮತ್ತೊಂದೆಡೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೂಟ ವನಿತೆಯರ ತಂಡ ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಳ್ಳುವುದನ್ನು ನೋಡಲು ಕಾಯುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications