For Quick Alerts
ALLOW NOTIFICATIONS  
For Daily Alerts
 

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದೀಪ್ತಿ ಶರ್ಮಾ ಇತಿಹಾಸ

ಭಾರತದ ಭರವಸೆಯ ಆಟಗಾರ್ತಿ ದೀಪ್ತಿ ಶರ್ಮಾ ಮುಂಬೈನ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್‌ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ದೀಪ್ತಿ ಶರ್ಮಾ ಅರ್ಧಶತಕ ಬಾರಿಸಿ ಮಿಂಚಿದರು. ಇವರ ಭರ್ಜರಿ ಆಟದ ನೆರವಿನಿಂದ ಭಾರತ 299 ರನ್‌ಗಳ ಗುರಿಯನ್ನು ದಕ್ಷಿಣ ಆಫ್ರಿಕಾ ತಂಡಕ್ಕೆ ನೀಡಿತು. ಭಾರತದ ಪರ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಸಹ ಅಬ್ಬರಿಸಿ ತಂಡಕ್ಕೆ ನೆರವಾದರು.

ಫೈನಲ್‌ನ ಮಹತ್ವದ ಪಂದ್ಯದಲ್ಲಿ ದೀಪ್ತಿ ಶರ್ಮಾ 58 ರನ್‌ಗಳ ಅಮೋಘ ಇನಿಂಗ್ಸ್‌ ಕಟ್ಟಿ ತಂಡಕ್ಕೆ ಆಧಾರವಾದರು. ಈ ಮೂಲಕ ದೀಪ್ತಿ ಶರ್ಮಾ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 200ಕ್ಕೂ ಹೆಚ್ಚು ರನ್ ಬಾರಿಸಿ, 15ಕ್ಕೂ ಹೆಚ್ಚು ವಿಕೆಟ್‌ ಪಡೆದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಹಿಂದೆ ಯಾವುದೇ ಆಟಗಾರ್ತಿ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಈ ಸಾಧನೆ ಮಾಡಿಲ್ಲ. ಪ್ರಸಕ್ತ ಆವೃತ್ತಯ ವಿಶ್ವಕಪ್‌ನಲ್ಲಿ ಭಾರತದ ಪರ ದೀಪ್ತಿ ಸ್ಥಿರ ಪ್ರದರ್ಶನ ನೀಡುವಲ್ಲಿ ಸಫಲರಾಗಿದ್ದಾರೆ.

Deepti Sharma s all-round heroics in World Cup final first to achieve 200 runs amp amp 15 wickets

ದೀಪ್ತಿ ಶರ್ಮಾ ಐದು ಅಥವಾ ಅದಕ್ಕಿಂತ ಕಡಿಮೆ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ 3ಕ್ಕೂ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದೇ ಸಾಧನೆಯನ್ನು 2022ರಲ್ಲಿ ಭಾರತದ ನಾಯಕಿ ಹರ್ಮನ್ ಪ್ರೀತ್ ಕೌರ್, ಆಸ್ಟ್ರೇಲಿಯಾದ ಆಶ್ಲೇ ಗಾರ್ಡ್ನರ್ ಇದೇ ವಿಶ್ವಕಪ್‌ನಲ್ಲಿ 50ಕ್ಕೂ ಹೆಚ್ಚು ರನ್‌ಗಳನ್ನು ಬಾರಿಸಿದ್ದಾರೆ.

ದೀಪ್ತಿ ಸಾಧನೆ

28 ವರ್ಷದ ಆಟಗಾರ್ತಿ ದೀಪ್ತಿ ಶರ್ಮಾ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಆಡಿರುವ ಇವರು ಅಬ್ಬರಿಸಿದ್ದಾರೆ. ಇವರು 2014ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಈ ವರೆಗೆ ಇವರು 121 ಪಂದ್ಯಗಳ 103 ಇನಿಂಗ್ಸ್‌ಗಳಲ್ಲಿ 2739 ರನ್‌ ಬಾರಿಸಿದ್ದಾರೆ. ಈ ವೇಳೆ 1 ಶತಕ, 18 ಅರ್ಧಶತಕ ಬಾರಿಸಿದ್ದಾರೆ. ದೀಪ್ತಿ ಶರ್ಮಾ ಅವರು 37.01 ಸರಾಸರಿಯಲ್ಲಿ ರನ್‌ ಕಲೆ ಹಾಕಿದ್ದಾರೆ. ಇವರು ತಮ್ಮ ಕಮಾಲ್‌ ಬೌಲಿಂಗ್‌ನಿಂದ ತಂಡಕ್ಕೆ ನೆರವಾಬಲ್ಲ ಆಟಗಾರ್ತಿ. ಇವರು 119 ಇನಿಂಗ್ಸ್‌ಗಳಲ್ಲಿ 27.95 ಸರಾಸರಿಯಲ್ಲಿ 157 ವಿಕೆಟ್‌ ಪಡೆದಿದ್ದಾರೆ.

Story first published: Sunday, November 2, 2025, 23:27 [IST]
Other articles published on Nov 2, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+