DC vs MI IPL 2025: ಡೆಲ್ಲಿ ಅಜೇಯ ಓಟಕ್ಕೆ ಬ್ರೇಕ್ ಹಾಕುತ್ತಾ ಮುಂಬೈ?
18ನೇ ಆವೃತ್ತಿಯ 29ನೇ ಪಂದ್ಯದಲ್ಲಿ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯಗಳ ನಡುವೆ ನಡೆಯಲಿದೆ. ಈಗಾಗಲೇ ಭರ್ಜರಿಯ ಪ್ರದರ್ಶನ ನೀಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಂದು ಜಯದ ಕನಸು ಕಾಣುತ್ತಿದೆ. ಇನ್ನು ಮುಂಬೈ ಇಂಡಿಯನ್ಸ್ ಗೆಲುವಿನ ಟ್ರ್ಯಾಕ್‌ಗೆ ಮರಳಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಉಭಯ ತಂಡಗಳಲ್ಲಿ ಹೊಡಿ ಬಡಿ ಆಟಗಾರರು ಇದ್ದು ಪಂದ್ಯ ರೋಚಕತೆ ಹುಟ್ಟಿಸಿದೆ.
ಉಭಯ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ 35 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ 19 ಹಾಗೂ ಡೆಲ್ಲಿ 16 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಉಭಯ ತಂಡಗಳು ಮೈದಾನಕ್ಕೆ ಇಳಿದಾಗ 257 ರನ್f ಗರಿಷ್ಠ ಮೊತ್ತವಾಗಿದೆ. ಹಿಂದಿನ ಅಂಕಿ ಅಂಶಗಳನ್ನು ನೋಡಿದರೆ ಮುಂಬೈ ಬಲಾಢ್ಯವಾಗಿದೆ. ಆದರೆ ಸದ್ಯದ ಫಾರ್ಮ್ ಡೆಲ್ಲಿ ಕ್ಯಾಪಿಟಲ್ಸ್‌ನತ್ತ ಮೈಲುಗೈ ಇದ್ದಂತೆ ಕಾಣುತ್ತದೆ. ಮುಂಬೈ ಆಡಿರುವ 5 ಪಂದ್ಯಗಳಲ್ಲಿ 1 ಜಯ ಸಾಧಿಸಿದರೆ, ಡೆಲ್ಲಿ ಈ ಟೂರ್ನಿಯಲ್ಲಿ ಅಜೇಯ ಓಟವನ್ನು ಮುಂದುವರೆಸಿದೆ.

ಪಿಚ್ ಹೇಗಿದೆ?
ಒಂದು ಕಾಲದಲ್ಲಿ ದೆಹಲಿ ಪಿಚ್ ನಿಧಾನ ಮತ್ತು ಕಡಿಮೆ ಸ್ಕೋರ್‌ಗಳಿಗೆ ಹೆಸರುವಾಸಿ. ಆದರೆ ಈಗ ಅದು ಬ್ಯಾಟ್ಸ್‌ಮನ್‌ಗಳ ನೆಚ್ಚಿನದಾಗಿದೆ. ಕಳೆದ ವರ್ಷ ನಡೆದ ದೆಹಲಿ ಪ್ರೀಮಿಯರ್ ಲೀಗ್ (ಡಿಪಿಎಲ್) ನಲ್ಲಿ ಬ್ಯಾಟ್ಸ್‌ಮನ್‌ಗಳು ಸಾಕಷ್ಟು ರನ್ ಹರಿದು ಬಂದಿದ್ದವು. ಈ ಮೈದಾನದಲ್ಲಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಮಾಡಲು ಮುಂದಾಗಬಹುದು.
ಕೆಎಲ್ ರಾಹುಲ್ ಆಕರ್ಷಣೆ
ಆರ್‌ಸಿಬಿ ವಿರುದ್ದದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಕೆಎಲ್ ರಾಹುಲ್, ಬ್ಯಾಟಿಂಗ್ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇವರು ಪ್ರಸಕ್ತ ಲೀಗ್‌ನಲ್ಲಿ ಅಮೋಘ ಫಾರ್ಮ್‌ನಲ್ಲಿದ್ದಾರೆ. ಇನ್ನು ಫಾಫ್ ಡುಪ್ಲೇಸಿಸ್, ಜೆಎಫ್‌ಎಂ, ಅಕ್ಷರ್ ಪಟೇಲ್, ಆಶುತೋಷ್ ಶರ್ಮಾ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಬಲ ತುಂಬ ಬಲ್ಲ ಆಟಗಾರ. ಇನ್ನು ಆಲ್‌ರೌಂಡರ್ ವಿಪ್ರಜ್ ನಿಗಮ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲರು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲಿಂಗ್ ಬಲಾಢ್ಯವಾಗಿದೆ. ವೇಗದ ಬೌಲಿಂಗ್ ನೊಗವನ್ನು ಮಿಚೆಲ್ ಸ್ಟಾರ್ಕ್ ಹೊತ್ತಿದ್ದು ತಮ್ಮ ಬಿಗುವಿನ ದಾಳಿಯ ಮೂಲಕ ಎದುರಾಳಿಗಳನ್ನು ಕಾಡಬಲ್ಲರು. ಇನ್ನು ಸ್ಪಿನ್ ಬೌಲಿಂಗ್‌ನಲ್ಲಿ ಅಕ್ಷರ್ ಪಟೇಲ್ ಹಾಗೂ ಕುಲ್‌ದೀಪ್ ಯಾದವ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರು ಬಿಗುವಿನ ದಾಳಿ ನಡೆಸಿ ತಂಡಕ್ಕೆ ನೆರವಾಗಬಲ್ಲರು.
ರೋಹಿತ್ ಫಾರ್ಮ್ ಚಿಂತೆ
ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಅವರ ಲಯ ತಂಡಕ್ಕೆ ದೊಡ್ಡ ಚಿಂತೆಯಾಗಿದೆ. ನಾಯಕ ಹಾರ್ದಿಕ್ ಪಾಂಡ್ಯ ಅಮೋಘ ಫಾರ್ಮ್‌ನಲ್ಲಿದ್ದ, ತಂಡದ ಗೆಲುವಿನಲ್ಲಿ ಮಿಂಚಬೇಕಿದೆ. ಇನ್ನು ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ತಮ್ಮ ಬ್ಯಾಟಿಂಗ್‌ನಿಂದ ತಂಡಕ್ಕೆ ನೆರವಾಗಬೇಕಿದೆ. ಇನ್ನು ಟ್ರೆಂಟ್ ಬೌಲ್ಟ್, ಜಸ್ಪ್ರಿತ್ ಬುಮ್ರಾ ಬಿಗುವಿನ ದಾಳಿಯ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಾಡಬಲ್ಲರು. ಯುವ ಸ್ಪಿನ್ ಬೌಲರ್ ವಿಘ್ನೇಶ್ ಪುತ್ತೂರ್ ಪ್ರಮುಖ ಆಕರ್ಷಣೆ ಆಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications