For Quick Alerts
ALLOW NOTIFICATIONS  
For Daily Alerts
 

WPL 2025: ಜೈಂಟ್ಸ್ ಎದುರು ಡುಮ್ಕಿ ಹೊಡೆದ ಡೆಲ್ಲಿ; ಆರ್‌ಸಿಬಿ ಹಾದಿ ಕಠಿಣ

ಲಕ್ನೋದ ಏಕ್ನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2025ರ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಗುಜರಾತ್ ಜೈಂಟ್ಸ್ 5 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಗುಜರಾತ್ ಜೈಂಟ್ಸ್ ಪಾಯಿಂಟ್ ಪಟ್ಟಿಯಲ್ಲಿ 8 ಅಂಕಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದ್ದು, ಪ್ಲೇ ಆಫ್ ಹಾದಿಯನ್ನು ಸುಲಭ ಮಾಡಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ಸೋಲು ಕಂಡರೂ 10 ಆಗ್ರಸ್ಥಾನದಲ್ಲಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 177 ರನ್ ಕಲೆ ಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಇನ್ನೂ ಮೂರು ಎಸೆತ ಬಾಕಿ ಇರುವಾಗಲೇ 5 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

Delhi Capitals lost to Gujarat Giants in the 17th match of WPL 2025


ಡೆಲ್ಲಿ ಕ್ಯಾಪಿಟಲ್ಸ್ ಎದುರು ಗುಜರಾತ್ ಗೆಲ್ಲುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವನಿತೆಯರಿಗೆ ಭಯ ಶುರುವಾಗಿದೆ. ಆರ್‌ಸಿಬಿ ಆಡಿರುವ ಆರು ಪಂದ್ಯಗಳಲ್ಲಿ ಕೇವಲ 2 ರಲ್ಲಿ ಗೆದ್ದು, 4 ರಲ್ಲಿ ಸೋಲು ಕಂಡಿದೆ. ಹೀಗಾಗಿ 4 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ ಪ್ಲೇ ಆಫ್ ಹಾದಿ ಕಠಿಣವಾಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಉತ್ತಮ ಆರಂಭ ಪಡೆಯಿತು. ಮೆಗ್ ಲ್ಯಾನಿಂಗ್ ಮತ್ತು ಶಫಾಲಿ ವರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಡೆಲ್ಲಿ ತಂಡಕ್ಕೆ ಸ್ಫೋಟಕ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 83 ರನ್‌ಗಳ ಜೊತೆಯಾಟ ಆಡಿದರು. ಶೆಫಾಲಿ ವರ್ಮಾ 27 ಎಸೆತಗಳಲ್ಲಿ 40 ರನ್ ಗಳಿಸಿದರೆ, ಜೊನಾಸ್ಸೆನ್ ಮತ್ತು ಜೆಮಿಮಾ ರೊಡ್ರಿಗಸ್ ಬೇಗನೇ ಔಟಾದರು. ಅನ್ನಾಬೆಲ್ ಸದರ್ಲ್ಯಾಂಡ್ ಕೂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿದರು.

ಮತ್ತೊಂದೆಡೆ, ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ನಾಯಕಿ ಆರಂಭದಿಂದಲೂ ಆಕ್ರಮಣಕಾರಿ ಆಟವಾಡಿದ ಮೆಗ್ ಲ್ಯಾನಿಂಗ್ 57 ಎಸೆತಗಳಲ್ಲಿ 15 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 92 ರನ್ ಬಾರಿಸಿದರು. ಆದರೆ ಅವರು ಶತಕ ಹೊಸ್ತಿಲಲ್ಲಿ ಔಟಾದರು. ಅಂತಿಮವಾಗಿ ಡೆಲ್ಲಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು.

ಡೆಲ್ಲಿ ನೀಡಿದ 178 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ದಯಾಲನ್ ಹೇಮಲತಾ ಕೇವಲ 1 ರನ್‌ಗೆ ವಿಕೆಟ್ ಕಳೆದುಕೊಂಡರೆ, ಬೆತ್ ಮೂನಿ ಮತ್ತು ಹರ್ಲೀನ್ 85 ರನ್‌ಗಳ ಜೊತೆಯಾಟ ಆಡಿದರು. ಬೆತ್ ಮೂನಿ 44 ರನ್ ಗಳಿಸಿ ಔಟಾದರೆ, ನಂತರ ಬಂದ ಆಶ್ಲೀಗ್ ಗಾರ್ಡ್ನರ್ 22 ರನ್ ಗಳಿಸಿ ವಿಕೆಟ್ ಕಳೆದುಕೊಂಡರು.

ಡಿಯಾಂಡ್ರಾ ಡಾಟಿನ್ (24), ಫೋಬೆ ಲಿಚ್‌ಫೀಲ್ಡ್ (0) ಔಟಾದರು. ಕೊನೆಯಲ್ಲಿ ಹರ್ಲೀನ್ ಹೊಡಿಬಡಿ ಆಟದ ಮೂಲಕ ಗುಜರಾತ್‌ಗೆ ಗೆಲುವು ತಂದುಕೊಟ್ಟರು. ಹರ್ಲೀನ್ 49 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 70 ರನ್ ಗಳಿಸಿದರು .

Story first published: Friday, March 7, 2025, 23:27 [IST]
Other articles published on Mar 7, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+