ಡೆಲ್ಲಿ ಕ್ಯಾಪಿಟಲ್ಸ್ ಹೆಚ್ಚಿಸಿದ ಟೆನ್ಷನ್: ರಿಟೆನ್ಷನ್ ಜೊತೆ ಕೋಚ್ ಆಯ್ಕೆ ಕಸರತ್ತು
ನವದೆಹಲಿ: ಇನ್ನೇನು ಕೆಲವೇ ದಿನಗಳಲ್ಲಿ ಐಪಿಎಲ್ ಮಾಲೀಕರು ತಾವು ಉಳಿಸಿಕೊಂಡ ಹಾಗೂ ಕೈ ಬಿಟ್ಟ ಆಟಗಾರರ ಪಟ್ಟಿ ಬಿಸಿಸಿಐಗೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲ ತಂಡಗಳು ಭರದ ಲೆಕ್ಕಾಚಾರವನ್ನು ಆರಂಭಿಸಿದ್ದಾರೆ. ಇನ್ನು ಹಲವು ತಂಡಗಳಲ್ಲಿ ತೆರವಾದ ಸಿಬ್ಬಂದಿಗಳ ಭರ್ತಿ ಕಾರ್ಯ ನಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಕಾಣಿಸಿಕೊಂಡಿದ್ದ ರಿಕ್ಕಿ ಪಾಂಟಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಂಜಾಬ್ ತಂಡ ಸೇರಿದ್ದಾರೆ.
ರಿಷಭ್ ಪಂತ್ ಮುಂದಾಳತ್ವದ ತಂಡಕ್ಕೆ ನೂತನ ಗುರು ಶೀಘ್ರದಲ್ಲಿ ಸಿಗಲಿದ್ದಾರೆ. ಇವರು ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ರಿಕ್ಕಿ ಪಾಂಟಿಂಗ್ ಸ್ಥಾನವನ್ನು ತುಂಬಲು ತಯಾರಾಗಿದ್ದಾರೆ. ಆದರೆ ಈ ಬಗ್ಗೆ ಇನ್ನು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಶೀಘ್ರದಲ್ಲಿ ತಂಡ ಈ ಬಗ್ಗೆ ದೊಡ್ಡ ನಿರ್ಧಾರವನ್ನು ಕೈ ಗೊಳ್ಳುವ ಸಾಧ್ಯತೆ ಇದೆ.

ಡೆಲ್ಲಿ ಕೋಚ್ ಯಾರು?
ಕೋಚ್ ಸ್ಥಾನವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ಹೇಮಂಗ್ ಬದಾನಿ ತುಂಬಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನು ವೇಗದ ಬೌಲರ್ ಮುನಾಫ್ ಪಟೇಲ್ ಸಹ ಕ್ಯಾಪಿಟಲ್ಸ್ ತಂಡದ ಬೌಲಿಂಗ್ ಕೋಚ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಭಾರತದ ಮಾಜಿ ಎಡಗೈ ಆಟಗಾರ ಹೇಮಂಗ್ ಬದಾನಿ ಡೆಲ್ಲಿ ಕ್ಯಾಪಿಟಲ್ಸ್‌ನ ಮುಖ್ಯ ಕೋಚ್ ಆಗಬಹುದು ಎಂಬ ಸುದ್ದಿ ಬೆಳಕಿಗೆ ಬಂದಿದೆ.
ಕೋಚ್ ರೇಸ್‌ಗೆ ಹಲವು ಮಾಜಿ ಆಟಗಾರರ ಹೆಸರುಗಳು ಕೇಳಿ ಬರುತ್ತಿವೆ. ಇನ್ನು ವೇಗದ ಬೌಲರ್ ಮುನಾಫ್ ಪಟೇಲ್ ಸಹ ಸಿಬ್ಬಂದಿಯ ರೇಸ್‌ನಲ್ಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಭಾರತೀಯ ಕೋಚ್‌ಗೆ ಮಣೆ ಹಾಕುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೋಚಿಂಗ್ ಸಿಬ್ಬಂದಿಯ ಬಗ್ಗೆ ಇನ್ನೇನು ಕೆಲವೇ ದಿನಗಳಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಿದೆ.

ಯಾರಿಗೆ ಮಣೆ
ಐಪಿಎಲ್ ರಿಟೆನ್ಷನ್ ನಿಯಮದಂತೆ ಡೆಲ್ಲಿ ಕ್ಯಾಪಿಟಲ್ಸ್ ಯಾರನ್ನು ಉಳಿಸಿಕೊಳ್ಳಬಹುದು ಎಂಬ ಚರ್ಚೆಗಳು ಆರಂಭವಾಗಿವೆ. ಲಭ್ಯವಾಗಿರುವ ಮೂಲಗಳ ಪ್ರಕಾರ ಡೆಲ್ಲಿ ನಾಯಕ ರಿಷಭ್ ಪಂತ್ ಅವರನ್ನು 18 ಕೋಟಿ ರೂ. ನೀಡಿ ಉಳಿಸಿಕೊಳ್ಳಲಿದೆ ಎಂದು ತಿಳಿದು ಬಂದಿದೆ. ಉಳಿದಂತೆ ಆಲ್‌ರೌಂಡರ್ ಅಕ್ಷರ್ ಪಟೇಲ್‌ರಿಗೆ 14 ಕೋಟಿ ರೂ., ರಿಸ್ಟ್ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್‌ಗೆ 11 ಕೋಟಿ ರೂ. ನೀಡಿ ತಂಡದಲ್ಲಿ ಉಳಿಸಿಕೊಳ್ಳಬಹುದು.
ಜೇಕ್-ಫ್ರೇಸರ್ ಮೆಕ್‌ಗುರ್ಕ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ರನ್ನು ತಂಡ ರೈಟ್ ಟು ಮ್ಯಾಚ್ ಕಾರ್ಡ್ ಬಳಸಿ ತಂಡಕ್ಕೆ ಬರಮಾಡಿಕೊಳ್ಳಬಹುದಾಗಿದೆ. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಜೇಕ್-ಫ್ರೇಸರ್ ಮೆಕ್‌ಗುರ್ಕ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆಗಳು ನಿಜಕ್ಕೂ ಅಭಿಮಾನಿಗಳಲ್ಲಿ ಮೂಡಿದೆ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇನ್ನೇನು ಕೆಲವೇ ದಿನಗಳಲ್ಲಿ ಲಭಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications